AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆ ರೌಡಿಶೀಟರ್​ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ, ಬಿಬಿಎಂಪಿ ಟ್ಯಾಕ್ಸ್ ಕಲೆಕ್ಟರ್ ಅರೆಸ್ಟ್

ಸಚಿವೆ ಶಶಿಕಲಾ ಜೊಲ್ಲೆ ಅವರ ಮನೆಯ ಮುಂದೆಯೇ ಸ್ನೇಹಿತರಿಂದ ರೌಡಿಶೀಟರ್ ಗಗನ್ ಶರ್ಮಾ ಕೊಲೆಗೆ ಯತ್ನ ನಡೆದಿದೆ. ಘಟನೆ ಸಂಬಂಧ ಬಿಬಿಎಂಪಿ ಟ್ಯಾಕ್ಸ್ ಕಲೆಕ್ಟರ್ ಆಗಿರುವ ಸುನೀಲ್ ಕುಮಾರ್​ನನ್ನು ಬಂಧಿಸಲಾಗಿದೆ.

ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆ ರೌಡಿಶೀಟರ್​ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ, ಬಿಬಿಎಂಪಿ ಟ್ಯಾಕ್ಸ್ ಕಲೆಕ್ಟರ್ ಅರೆಸ್ಟ್
ಆರೋಪಿ ಸುನೀಲ್, ಸಚಿವೆ ಶಶಿಕಲಾ ಜೊಲ್ಲೆ ಮನೆ ಆವರಣ
ಆಯೇಷಾ ಬಾನು
|

Updated on:Mar 22, 2023 | 8:07 AM

Share

ಬೆಂಗಳೂರು: ಬೆಳ್ಳಂ ಬೆಳಗ್ಗೆ ಸಿಲಿಕಾನ್ ಸಿಟಿಯಲ್ಲೊಂದು ಭಯಾನಕ ಘಟನೆ ನಡೆದಿದೆ. ಸಚಿವೆ ಶಶಿಕಲಾ ಜೊಲ್ಲೆ(Shashikala Jolle) ಅವರ ಮನೆಯ ಮುಂದೆಯೇ ಕೊಲೆಯ ಯತ್ನ(Murder Attempt) ನಡೆದಿದ್ದು ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾರೆ. ಸದ್ಯ ಗಾಯಾಳು ರೌಡಿಶೀಟರ್​ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮಾರ್ಚ್ 21 ರ ಮುಂಜಾನೆ 5.30 ರಿಂದ 6 ಗಂಟೆಯ ನಡುವೆ ನಗರದಲ್ಲಿ ಈ ಘಟನೆ ನಡೆದಿದೆ.

ಹೌಗ್ರೌಂಡ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಗಗನ್ ಶರ್ಮಾ ಎಂಬಾತನ ಮೇಲೆ ಸುನೀಲ್ ಕುಮಾರ್, ಅರುಣ್, ಕೃಷ್ಣ ಕೃತ್ಯ ಎಸಗಿ ವಿಕೃತಿ ಮೆರೆದಿದ್ದಾರೆ. ರೌಡಿಶೀಟರ್ ಗಗನ್ ಮತ್ತು ಉಳಿದ ಆರೋಪಿಗಳೆಲ್ಲರೂ ಸ್ನೇಹಿತರು. ಬಿಬಿಎಂಪಿ ಟ್ಯಾಕ್ಸ್ ಕಲೆಕ್ಟರ್ ಆಗಿರುವ ಸುನೀಲ್ ಕುಮಾರ್ ಹಾಗೂ ಗಗನ್ ನಡುವೆ ಆಸ್ತಿ ವಿಚಾರಕ್ಕಾಗಿ ಮನಸ್ತಾಪವಾಗಿತ್ತು. ಹೀಗಾಗಿ ಸುನೀತ್ ಮಾತನಾಡಬೇಕು ಎಂದು ಮಾರ್ಚ್ 20 ರಂದು ರಾತ್ರಿ 10 ಗಂಟೆಗೆ ಗಗನ್​ಗೆ ಕಾಲ್ ಮಾಡಿ ಫ್ರೇಜರ್ ಟೌನ್​ಗೆ ಕರೆಸಿಕೊಂಡಿದ್ದ. ಬಳಿಕ ಅಲ್ಲಿಂದ ಕಾರಿನಲ್ಲಿ ಕೂರಿಸಿಕೊಂಡು ಸಿಟಿ ರೌಂಡ್ಸ್ ಹೊಡೆದು ಮಾರ್ಚ್ 21 ರ ಬೆಳಗ್ಗೆ ಜಯಮಹಲ್ ರಸ್ತೆ ಬಳಿ ಬಂದು ಕಾರು ನಿಲ್ಲಿಸಿದ್ದ. ಕೆಎ ೦3 ಎಂಫ್ 3347 ನಂಬರ್ ನ ಅಸ್ಸೆಂಟಟ್ ಕಾರಿನಲ್ಲಿ ನಾಲ್ವರು ಇದ್ದರು. ನಾಲ್ವರು ಕೂಡ ಒಟ್ಟಿಗೆ ಸಿಟಿ ರೌಂಡ್ಸ್ ಹೊಡೆದಿದ್ದರು. ಆದ್ರೆ ಈ ವೇಳೆ ಗಲಾಟೆ ನಡೆದಿದೆ. ಸುನೀಲ್ ಸೇರಿ ಮೂವರು ಗಗನ್ ಮೇಲೆ ಹಲ್ಲೆ ನಡೆಸಿದ್ದಾರೆ. ದೊಣ್ಣೆ, ಕೈ ಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಕೆಳಗೆ ತಳ್ಳಿ ಮೂರ್ನಾಲ್ಕು ಬಾರಿ ಕಾರು ಹತ್ತಿಸಿದ್ದಾರೆ. ಬಳಿಕ ಎಸ್ಕೇಪ್ ಆಗಿದ್ದಾರೆ. ಇದನ್ನು ಕಂಡ ಸ್ಥಳೀಯರು ಜೆಸಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಲಬುರಗಿ: ರೈತ ಮಹಿಳೆಯ ಬರ್ಬರ ಕೊಲೆ; ಅತ್ಯಾಚಾರ ಮಾಡಿ, ಹತ್ಯೆ ಮಾಡಿರುವ ಶಂಕೆ

ಪೊಲೀಸರು ಗಾಯಾಳು ಗಗನ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆಯಲ್ಲಿ ಗಗನ್ ಕಾಲು, ಪಕ್ಕೆಲುಬು ಮುರಿದಿದೆ. ಕಣ್ಣು, ಮುಖ, ಕೈಗಳಿಗೆ ಗಂಭೀರ ಗಾಯಗಳಾಗಿವೆ. ಘಟನೆ ಸಂಬಂಧ ಜೆಸಿ ನಗರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿ ಸುನೀಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರಿಗಾಗಿ ಶೋಧ ನಡೆಯುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:03 am, Wed, 22 March 23

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ