AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ರೌಡಿಶೀಟರ್​ಗಳನ್ನು ಬೇಕಾಬಿಟ್ಟಿ ಠಾಣೆಗೆ ಕರೆಸುವಂತ್ತಿಲ್ಲ: ಪ್ರಕ್ರಿಯೆ ನಿಗದಿಪಡಿಸಿದ ಹೈಕೋರ್ಟ್

ಚುನಾವಣೆ, ಹಬ್ಬ ಹರಿ ದಿನಗಳಂದು ಸೇರಿ ಕೆಲ ಸಂದರ್ಭದಲ್ಲಿ ಮೌಖಿಕವಾಗಿ ಠಾಣೆಗೆ ರೌಡಿಶೀಟರ್​ಗಳನ್ನು ಕರೆಸಿ ಪೊಲೀಸರು ಎಚ್ಚರಿಕೆ ನೀಡುತ್ತಿದ್ದರು. ಸದ್ಯ ಈ ವಿಧಾನಕ್ಕೆ ಬ್ರೇಕ್​​ ಬೀಳಲಿದೆ. ರೌಡಿಶೀಟರ್​ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಪಡಿಸಿ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಇನ್ಮುಂದೆ ರೌಡಿಶೀಟರ್​ಗಳನ್ನು ಬೇಕಾಬಿಟ್ಟಿ ಠಾಣೆಗೆ ಕರೆಸುವಂತ್ತಿಲ್ಲ: ಪ್ರಕ್ರಿಯೆ ನಿಗದಿಪಡಿಸಿದ ಹೈಕೋರ್ಟ್
ಹೈಕೋರ್ಟ್
Ramesha M
| Edited By: |

Updated on:Dec 10, 2025 | 9:31 PM

Share

ಬೆಂಗಳೂರು, ಡಿಸೆಂಬರ್​ 10: ಇನ್ಮುಂದೆ ರೌಡಿಶೀಟರ್​ಗಳನ್ನು (Rowdysheeter) ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಮಾಡಲಾಗಿದೆ. ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ (Police Station) ಕರೆಸಬಹುದು ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್​ಗಳನ್ನು ಕರೆಸುವುದಕ್ಕೆ ಬ್ರೇಕ್​ ಬಿದ್ದಂತಾಗಿದೆ.

ಹೈಕೋರ್ಟ್ ಮೆಟ್ಟಿಲೇರಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್

ಅಲೋಕ್ ಕುಮಾರ್ ಹೆಚ್ಚುವರಿ ಆಯುಕ್ತರಾಗಿದ್ದಾಗ ರೌಡಿಶೀಟರ್ ಸುನೀಲ್ ಕುಮಾರ್ ಅಲಿಯಾಸ್​ ಸೈಲೆಂಟ್ ಸುನೀಲ್​​ ಕರೆಸಿ ಎಚ್ಚರಿಸಿದ್ದರು. ಅಲೋಕ್ ಕುಮಾರ್ ವಾರ್ನಿಂಗ್​ ನೀಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗಾಗಿ ಸೈಲೆಂಟ್ ಸುನೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುನೀಲ್ ಕುಮಾರ್ ರಿಟ್ ಅರ್ಜಿ ಸಂಬಂಧ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಕೊನೆಗೂ ಅಲೋಕ್ ಕುಮಾರ್​​ಗೆ ಸಿಕ್ತು ಮುಂಬಡ್ತಿ: ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS

ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಠಾಣೆಗಳಿಗೆ ರೌಡಿಶೀಟರ್​ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು SMS, ವಾಟ್ಸಾಪ್ ಸಂದೇಶ ನೀಡಬೇಕು. ಒಂದು ವೇಳೆ ಆಗಲೂ ಠಾಣೆಗೆ ಬರದಿದ್ದರೆ ರೌಡಿಶೀಟರ್ ಮನೆಗೆ ಪೊಲೀಸರು ತೆರಳಬಹುದು ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಇನ್ನು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಈ ಆದೇಶದ ರಕ್ಷಣೆ ಸಿಗುವುದಿಲ್ಲ. ದಂಡಾಧಿಕಾರಿಯ ಅಧಿಕಾರವನ್ನು ಈ ಆದೇಶ ಕುಂಠಿತಗೊಳಿಸುವುದಿಲ್ಲ. ಸರ್ಕಾರ ಕಾನೂನು ರೂಪಿಸುವವರೆಗೆ ಈ ಪ್ರಕ್ರಿಯೆ ಪಾಲಿಸಲು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:24 pm, Wed, 10 December 25

Follow Us
Ramesha M
Ramesha M
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ