AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ಮೂರೇ ದಿನಕ್ಕೆ ರೌಡಿ ಶೀಟರ್ ಹತ್ಯೆ

ಜನರು ಭಾರತ-ಪಾಕಿಸ್ತಾನ ಕ್ರಿಕೆಟ್ ನೋಡುತ್ತಿರುವ ಸಮಯದಲ್ಲಿಯೇ ಈ ಕೊಲೆಯೂ ನಡೆದಿದೆ.

ಜೈಲಿನಿಂದ ಹೊರ ಬಂದ ಮೂರೇ ದಿನಕ್ಕೆ ರೌಡಿ ಶೀಟರ್ ಹತ್ಯೆ
ಪ್ರಾತಿನಿದಿಕ ಚಿತ್ರ
TV9 Web
| Edited By: |

Updated on:Oct 25, 2021 | 6:46 AM

Share

ಬೆಂಗಳೂರು: ಪೀಣ್ಯ ಸಮೀಪದ ನೆಲಗೆದರನಹಳ್ಳಿಯ ಶಿವಪುರದಲ್ಲಿ ಭಾನುವಾರ ರಾತ್ರಿ ರೌಡಿಶೀಟರ್ ಆನಂದ್ ಎಂಬಾತನನ್ನು ದುಷ್ಕರ್ಮಿಗಳು ಕೊಚ್ಚಿ ಕೊಂದಿದ್ದಾರೆ. ಈತ ಬಿಜೆಪಿ ಕಾರ್ಯಕರ್ತನೂ ಆಗಿಗಿದ್ದ. ಹಲವು ದುಷ್ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತಿದ್ದ ಆನಂದ್ ಜೈಲಿಗೂ ಹೋಗಿದ್ದ. ಇತ್ತೀಚೆಗಷ್ಟೇ ಬಿಡುಗಡೆಯಾಗಿ ಹೊರಗೆ ಬಂದಿದ್ದ.

ಜನರು ಭಾರತ-ಪಾಕಿಸ್ತಾನ ಕ್ರಿಕೆಟ್ ನೋಡುತ್ತಿರುವ ಸಮಯದಲ್ಲಿಯೇ ಈ ಕೊಲೆಯೂ ನಡೆದಿದೆ. ರಾತ್ರಿ 8 ಗಂಟೆ ಸಮಯದಲ್ಲಿ ಮನೆ ಮುಂಭಾಗದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಆನಂದ್ ಮೇಲೆ ದಾಳಿ ಮಾಡಿದ ಆರೇಳು ಮಂದಿ ನಡುರಸ್ತೆಯಲ್ಲಿಯೇ ಆನಂದ್​ನನ್ನು ಕೊಂದಿದ್ದಾರೆ.

ಚಿಕ್ಕಂದಿನಿಂದಲೇ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದ ಆನಂದ್, 18 ವರ್ಷದವನಿದ್ದಾಗಲೇ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಬಿಡುಗಡೆಯಾದ ಬಳಿಕ ಅಂದರೆ, 2016ಲ್ಲಿ ₹ 15 ಲಕ್ಷ ಸುಪಾರಿ ಪಡೆದು ಜೆಡಿಎಸ್ ಮುಖಂಡನೊಬ್ಬನನ್ನು ಕೊಲೆ ಮಾಡಿ ಜೈಲು ಸೇರಿದ್ದ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಆನಂದ್ ವಿರುದ್ಧ ರೌಡಿಶೀಟರ್ ಸಹ ಓಪನ್ ಆಗಿತ್ತು. ಇತ್ತೀಚಿಗೆ ಅಪಹರಣ ಪ್ರಕರಣವೊಂದರಲ್ಲಿ ಜೈಲು ಸೇರಿದ್ದವನು ಕಳೆದ 1 ತಿಂಗಳ ಹಿಂದೆ ಬಿಡುಗಡೆಯಾಗಿದ್ದ. ಬಿಜೆಪಿಗೆ ಸೇರ್ಪಡೆಯಾಗಿ ಮೂರು ದಿನಗಳ ಹಿಂದಷ್ಟೇ ತನ್ನ ಮನೆಗೆ ಬಂದಿದ್ದ.

ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲವು ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡಿದ್ದ ಆನಂದ್ ಜೈಲಿನಿಂದ ಹೊರಗೆ ಬಂದ ತಕ್ಷಣ ಕೊಲೆಯಾಗಿರುವುದು ಈ ಪ್ರದೇಶದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳ ಮಹಿಳೆ ಇದನ್ನೂ ಓದಿ: ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ 2 ರೌಡಿ ಗ್ಯಾಂಗ್ ಅರೆಸ್ಟ್!

Published On - 6:45 am, Mon, 25 October 21

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ