KSRTC: ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ 2 ಕುಟುಂಬಕ್ಕೆ ತಲಾ 1 ಕೋಟಿ ರೂ. ನೆರವು

ಅಪಘಾತದಲ್ಲಿ ಮೃತಪಟ್ಟ ಕೆಎಸ್​ಆರ್​ಟಿಸಿ ಸಿಬ್ಬಂದಿಯ ಎರಡು ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಲಾ 1 ಕೋಟಿ ರೂ. ಅಪಘಾತ ಪರಿಹಾರ ವಿಮೆ ಚೆಕ್ ವಿತರಿಸಿದರು.

KSRTC: ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ 2 ಕುಟುಂಬಕ್ಕೆ ತಲಾ 1 ಕೋಟಿ ರೂ. ನೆರವು
ಪರಿಹಾರ ಚೆಕ್​ ವಿತರಿಸಿದ ಸಚಿವ ರಾಮಲಿಂಗಾ ರೆಡ್ಡಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 16, 2023 | 9:56 AM

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕೆಎಸ್​ಆರ್​ಟಿಸಿ (KSRTC) ಸಿಬ್ಬಂದಿಯ ಎರಡು ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramlinga Reddy) ಅವರು ನಿನ್ನೆ (ಜು.15) ರಂದು ತಲಾ 1 ಕೋಟಿ ರೂ. ಅಪಘಾತ ಪರಿಹಾರ ವಿಮೆ ಚೆಕ್ ವಿತರಿಸಿದರು. ಕೆ.ಎಸ್.ಆರ್.ಟಿ.ಸಿ ಯು ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬ್ಬಂದಿಗಳಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆಯನ್ನು (On duty & Off Duty) ಜಾರಿಗೊಳಿಸಿದೆ. ಈ ಯೋಜನೆಯಲ್ಲಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾವತಿಯಿಂದ ಪ್ರೀಮಿಯಂ ರಹಿತ 50 ಲಕ್ಷ ರೂ. ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್​​ರವರಿಂದ ವಾರ್ಷಿಕ 885 ರೂ. ಪ್ರೀಮಿಯಂ (ನೌಕರರಿಂದ) ಪಾವತಿಯ ಮೇರೆಗೆ 50 ಲಕ್ಷ ರೂಗಳ ವಿಮೆಯು ಒಳಗೊಂಡಿರುತ್ತದೆ.

ಈ ಯೋಜನೆಯಡಿಯಲ್ಲಿ ಸಿಬ್ಬಂದಿಗಳು ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಗೂ ಸಹ ಈ ವಿಮಾ ಸೌಲಭ್ಯ ಅನ್ವಯಿಸುತ್ತದೆ.

  1. ಈ ಯೋಜನೆ ಜಾರಿಯಾದ ನಂತರ ಕೆ.ಎಸ್.ಆರ್.ಟಿ.ಸಿ.ಯ ಚಾಲನಾ ಸಿಬ್ಬಂದಿಯಾದ ಜಿ.ವಿ.ಚಲಪತಿ (41) ಚಾಲಕ-ಕಂ-ನಿರ್ವಾಹಕ ಘಟಕ-6 ಬೆಂಗಳೂರು ಕೇಂದ್ರೀಯ ನಿಗಮದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಇವರು 2023ರ ಜನವರಿ 29 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಫಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರು ವಿಮಾ ಪರಿಹಾರ 1 ಕೋಟಿ ರೂ. ಹೊರತುಪಡಿಸಿ ನಿಗಮದ ವತಿಯಿಂದ ರೂ.17.21 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ ರೂ.12.71 ಲಕ್ಷ ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ ರೂ. 4.50 ಲಕ್ಷವನ್ನು ಮೃತ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ.
  2. ಪಿ.ಎನ್. ನಾಗರಾಜು (52) ಚಾಲಕ-ಕಂ-ನಿರ್ವಾಹಕ. ಹಾಸನ ವಿಭಾಗದ ಘಟಕ-2ರಲ್ಲಿ 17 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಇವರು 2023 ರ ಫೆಬ್ರವರಿ 1 ರಂದು ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದು ಕಾರು ಡಿಕ್ಕಿಯಾದ ಪರಿಣಾಮ ಮರಣ ಹೊಂದಿದ್ದಾರೆ. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ವಿಮಾ ಪರಿಹಾರ 1 ಕೋಟಿ ರೂ. ಹೊರತುಪಡಿಸಿ, ನಿಗಮದ ವತಿಯಿಂದ 21.94 ಲಕ್ಷ ರೂ. ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ ರೂ.16.19 ಲಕ್ಷ ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ 5.75 ಲಕ್ಷ ರೂ. ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ‌ ಶೀಘ್ರದಲ್ಲಿಯೇ ಪಾವತಿಯಾಗಲಿದೆ.

ಸಾರಿಗೆ ಹಾಗೂ ಮುಜರಾಯಿ ಸಚಿವರು ಮತ್ತು ಅಧ್ಯಕ್ಷರು, ಕರಾರಸಾ ನಿಗಮರವರು ಈ ಎರಡು ಚಾಲನಾ ಸಿಬ್ಬಂದಿಗಳ ಕುಟುಂಬ ವರ್ಗದವರಿಗೆ ಅಪಘಾತ ಪರಿಹಾರ ವಿಮಾದ ತಲಾ 1 ರೂ. ಕೋಟಿಗಳ ಚೆಕ್‌ ವಿತರಿಸಿ ಸಾಂತ್ವನ ಹೇಳಿದರು.

ಇದನ್ನೂ ಓದಿ: 5 ಲಕ್ಷ ರೂ. ಕದ್ದು ಓಡುತ್ತಿದ್ದ ಕಳ್ಳನನ್ನ ಚೇಸ್ ಮಾಡಿ ಹಿಡಿದ KSRTC ಬಸ್ ಚಾಲಕ, ಕಂಡಕ್ಟರ್​ ಕಾರ್ಯಕ್ಕೆ ಬೆಂಗಳೂರು ಕಮಿಷನರ್ ಶಹಬ್ಬಾಸ್‌

ಈ ವೇಳೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ ಮೃತಪಟ್ಟ ಚಾಲನಾ ಸಿಬ್ಬಂದಿಗಳನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ, ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದ್ದು, ಈ ಯೋಜನೆಯನ್ನು ಸಧ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ ಕ್ರಮ ಜರುಗಿಸಲು ಸೂಚಿಸುವುದಾಗಿ ತಿಳಿಸಿದರು.

ಕುಟುಂಬದವರು ಹಣವನ್ನು‌ ಬ್ಯಾಂಕಿನಲ್ಲಿ ಸ್ಥಿರ ಠೇವಣಿಯನ್ನು ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು. ಅನುಕಂಪ‌‌ ಆಧಾರದ‌ ಮೇಲಿನ‌ ಕೆಲಸಕ್ಕೆ ಅರ್ಜಿ ಸಲ್ಲಿಸಿ. ನಿಗಮದ ಸಿಬ್ಬಂದಿಗಳ ಹಾಗೂ ಕುಟುಂಬದವರ ಹಿತಾಸಕ್ತಿ ಕಾಪಾಡಲು ನಾವು ನಿಮ್ಮೊಡನೆ ಸದಾ ಇರುವುದಾಗಿ ಭರವಸೆ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿ. ಅನ್ಬುಕುಮಾರ್ ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು ಮಾತನಾಡಿ, ಸಾರಿಗೆ ಸಚಿವರು ಆದೇಶಿಸಿರುವಂತೆ ಕೂಡಲೇ ಅನುಕಂಪ ಆಧಾರದ ಮೇಲೆ ಕೆಲಸಕ್ಕೆ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಎಸ್ ಬಿ.ಐ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಹೆಚ್.ವಿ. ಅನಂತ ಸುಬ್ಬರಾವ್, ಬಿ. ಜಯದೇವರಾಜೇ ಅರಸು, ಜಿ.ಎಸ್. ಮಹದೇವಯ್ಯ, ಹೆಚ್.ಡಿ. ರೇವಪ್ಪ, ಎಸ್. ನಾಗರಾಜ, ವೆಂಕಟರಮಣಪ್ಪ ಮತ್ತು ಇತರರು ಹಾಗೂ ನಿಗಮದ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್