ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ.: ಡಿಕೆಶಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡ ಪ್ರಭು ಕೆಂಪೇಗೌಡರ ಜಯಂತಿಯ ಹಿನ್ನೆಲೆಯಲ್ಲಿ ಇಂದು ಅಧಿಕಾರಗಳ ಜೊತೆ ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಇಡೀ ಕರ್ನಾಟಕದ ಜನತೆ ಒಟ್ಟಾಗಿ ಆಚರಿಸಬೇಕು ಎಂದು ಕರೆ ನೀಡಿದರು.

ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ.: ಡಿಕೆಶಿ
ಡಿಕೆ ಶಿವಕುಮಾರ್
Follow us
Anil Kalkere
| Updated By: ರಮೇಶ್ ಬಿ. ಜವಳಗೇರಾ

Updated on:Jun 18, 2024 | 9:30 PM

ಬೆಂಗಳೂರು, (ಜೂನ್ 18): ಇದೇ ಜೂನ್ 27ರಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ 9515th kempegowda jayanti) ಆಚರಿಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ (Kempegowda Jayanti) ಆಚರಿಸಲು ನಿರ್ಧರಿಸಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ.ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ (Kempegowda Jayanti) ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನಾಡ ಪ್ರಭು ಕೆಂಪೇಗೌಡರ ಜಯಂತಿ ಆಚರಣೆಯನ್ನು ಕುರಿತು ಅಧಿಕಾರಿಳಿಗೆ ಸಲಹೆ ಸೂಚನೆಗಳನ್ನು ನೀಡಿ, ಕೆಂಪೇಗೌರ ದೂರ ದೃಷ್ಟಿ, ಅವರ ನಿಲುವು, ಸಂಸ್ಕೃತಿಯ ಬಗ್ಗೆ ಮುಂದಿನ ಪೀಳಿಗೆಯ ಮಕ್ಕಳಿಗೆ ತಿಳಿಸಿಕೊಡುವುದು ನಮ್ಮ ಕರ್ತವ್ಯವಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವಿಚಾರ ಸಂಕೀರ್ಣಗಳನ್ನು ನಡೆಸಲು 1 ಲಕ್ಷ ರೂಪಾಯಿಗಳನ್ನು ಮೀಸಲಿಡಲಾಗುವುದು. ಈಗಾಗಲೇ ಕೆಂಪೇಗೌಡ ಅವರು ಐಕ್ಯರಾದ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಅಲ್ಲದೆ ಹಲವಾರು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಕೆಂಪೇಗೌಡರ ಜಯಂತಿಯನ್ನು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿ ಆಚರಿಸದೆ, ಜ್ಯಾತ್ಯಾತೀತ ವರ್ಗಗಳ ನಾಯಕರಾದ ಅವರ ಜಯಂತಿಯನ್ನು ಇಡೀ ಕರ್ನಾಟಕದ ಜನತೆ ಒಟ್ಟಾಗಿ ಆಚರಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಮಂತ್ರಾಲಯದ ಕರ್ನಾಟಕ ಛತ್ರದ ಕಳಪೆ ಕಾಮಗಾರಿ: ಲೋಕಾಯುಕ್ತ ತನಿಖೆಗೆ ಆದೇಶಿಸಿದ ಸರ್ಕಾರ

ಜೂನ್ 27ರಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಿಸಲು ತೀರ್ಮಾನ ಮಾಡಲಾಗಿದೆ. ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಸಭೆ ಮಾಡಲಾಗಿದೆ. ಸಂಘ, ಸಂಸ್ಥೆಗಳ‌ ಮುಖಂಡರನ್ನು ಆಹ್ವಾನಿಸಿ ಚರ್ಚೆ ಮಾಡಿದ್ದೇವೆ. ಪಕ್ಷ, ಜಾತಿ, ಧರ್ಮ ದೂರವಿಟ್ಟು ಸಭೆ ಮಾಡಿದ್ದೇವೆ. ಜೂನ್ 27ರಂದು ಬೆಂಗಳೂರಿನಲ್ಲಿ ಜಯಂತಿ ಆಚರಣೆ ಆಗಲಿದೆ. ವಿಧಾನಸೌಧದಲ್ಲಿ ಮಾಡಿದರೆ ಜಾಗ ಚಿಕ್ಕದು, ಹಾಗಾಗಿ ಬೇಡ ಎಂದಿದ್ದಾರೆ. ಅರಮನೆ ಮೈದಾನ ಅಥವಾ ಸ್ಟೇಡಿಯಂನಲ್ಲಿ ಮಾಡಿ ಎಂದು ಸಲಹೆ ಬಂದಿದೆ. ಎಲ್ಲಿ ಮಾಡಬೇಕು ಎಂಬುವುದನ್ನು ತೀರ್ಮಾನ ಮಾಡಬೇಕು ಎಂದು ಹೇಳಿದರು.

ಜಯಂತಿಗೆ ಆರು ಕಡೆಯಿಂದ ಜ್ಯೋತಿಗಳು ಬರುತ್ತವೆ. ಎಂದಿನಂತೆ ಕಾರ್ಯಕ್ರಮ ನಡೆಯುತ್ತವೆ. ಸಭೆಯಲ್ಲಿ ಸಾಕಷ್ಟು ಸಲಹೆಗಳು ಬಂದಿವೆ. ಮುನಿಯಪ್ಪ ಅವರ ಒತ್ತಡದ ಮೇಲೆ ಕೆಂಪೇಗೌಡ ಜನ್ಮಸ್ಥಳ ಅಭಿವೃದ್ಧಿ ಆಗಬೇಕು ಎಂಬ ಒತ್ತಡ ಇದೆ. ಅದರ ಬಗ್ಗೆ ಸ್ಥಳ ಪರಿಶೀಲನೆ ಮಾಡಿ ತೀರ್ಮಾನ ಮಾಡುತ್ತೇವೆ. ಮುಂದಿನ ವರ್ಷದೊಳಗೆ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡಕ್ಕೆ ನಿರ್ಮಾಣ ಮಾಡಬೇಕು. ಸುಮನಹಳ್ಳಿಯಲ್ಲಿ 5 ಎಕರೆ ನೀಡಿದ್ದೇವೆ. ಸಾಧ್ಯವಾದರೆ ಕೆಂಪೇಗೌಡ ಜಯಂತಿ ದಿನ ಭೂಮಿ ಪೂಜೆ ಮಾಡುತ್ತೇವೆ ಎಂದು ತಿಳಿಸಿದರು.

ಪ್ರತೀ ವಿಧಾನಸಭೆ ಕ್ಷೇತ್ರದಲ್ಲಿ ವಿಚಾರ ಸಂಕಿರಣ, ಚರ್ಚಾ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇವೆ. ವಿಧಾನಸಭಾ ಕ್ಷೇತ್ರವಾರು 1 ಲಕ್ಷ ಹಣ ನೀಡಲು ತೀರ್ಮಾನ ಮಾಡುತ್ತೇವೆ. ಇನ್ನು ಕೆಂಪೇಗೌಡರ ಪ್ರಶಸ್ತಿ ನೀಡಲು ಬಿ.ಎಲ್. ಶಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಆಗಿದೆ ಎಂದಯ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:29 pm, Tue, 18 June 24

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ