AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2,186 ಕೋಟಿ ಅನುದಾನ ಬಾಕಿ: ಕೇಂದ್ರ ಸರ್ಕಾರದ ನಡೆ ವಿರುದ್ಧ ಸುಪ್ರೀಂಕೋರ್ಟ್​​ ಮೊರೆ ಹೋಗಲು ಕರ್ನಾಟಕ ತೀರ್ಮಾನ

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯದ ಗ್ರಾಮ ಪಂಚಾಯತಿಗಳಿಗೆ ಬರಬೇಕಿರುವ 2,186 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ತಡೆಹಿಡಿದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಪಂಚಾಯತ್ ರಾಜ್ ಸಚಿವ ಈಶ್ವರ್​​ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಿದ್ದ ಅನುದಾನ ಬಿಡುಗಡೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆಗೆ ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

2,186 ಕೋಟಿ ಅನುದಾನ ಬಾಕಿ: ಕೇಂದ್ರ ಸರ್ಕಾರದ ನಡೆ ವಿರುದ್ಧ ಸುಪ್ರೀಂಕೋರ್ಟ್​​ ಮೊರೆ ಹೋಗಲು ಕರ್ನಾಟಕ ತೀರ್ಮಾನ
ಪಂಚಾಯತ್ ರಾಜ್ ಸಚಿವ ಈಶ್ವರ್​​ ಖಂಡ್ರೆ ನೇತೃತ್ವದಲ್ಲಿ ಸಭೆImage Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on:Sep 10, 2026 | 11:34 AM

Share

ಬೆಂಗಳೂರು, ಸೆಪ್ಟೆಂಬರ್​​ 10: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬರಬೇಕಿರುವ 2,186 ಕೋಟಿ ರೂಪಾಯಿ ಹಣ ಬಾಕಿ ಹಿನ್ನೆಲೆ ನ್ಯಾಯಾಲಯದ ಮೊರೆ ಹೋಗಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪಂಚಾಯತ್ ರಾಜ್ ಸಚಿವ ಈಶ್ವರ್​​ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮ ಪಂಚಾಯತ್​​ಗಳಿಗೆ 2186.20 ಕೋಟಿ ರೂಪಾಯಿ ಅನುದಾನ ಬರಬೇಕಿದೆ. ಆದರೆ ಈ ಹಣವನ್ನು ಕೇಂದ್ರ ಸರ್ಕಾರ ತಡೆಹಿಡಿದಿರುವ ಕಾರಣ ಅನುದಾನ ಬಾಕಿ ವಿರುದ್ಧ ಸುಪ್ರೀಂ ಕೋರ್ಟ್​​ ಮೊರೆ ಹೋಗಲು ನಿರ್ಧರಿಸಲಾಗಿದೆ.

ಕೇಂದ್ರ ಸರ್ಕಾರದ ನಡೆಗೆ ಈಶ್ವರ್​​ ಖಂಡ್ರೆ ಬೇಸರ

ವಿಕಾಸಸೌಧದ ಕಚೇರಿಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಸಚಿವ ಈಶ್ವರ ಖಂಡ್ರೆ, 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಿದ್ದ ಅನುದಾನ ಬಿಡುಗಡೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಾರಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದೆ. 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, 149 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 561 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆ ಒಡೆಯದೆ ರೈತರು ಕಂಗಾಲಾಗಿದ್ದಾರೆ ಎಂದು ಖಂಡ್ರೆ ತಿಳಿಸಿದ್ದಾರೆ.

LIVE TV

ಇದನ್ನೂ ಓದಿ: ಬಡವರಿಗೆ 15 ಲಕ್ಷ ಉಚಿತ ಸೈಟ್: ಮಹಿಳೆಯರು, ರೈತರು, ವಿದ್ಯಾರ್ಥಿಗಳಿಗೆ ಸರ್ಕಾರ ಬಂಪರ್ ಕೊಡುಗೆ!

ಪರಿಸ್ಥಿತಿ ಹೀಗಿರುವಾಗ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದಿರುವ ಕಾರಣ ಮತ್ತಷ್ಟು ಸಂಕಷ್ಟ ಎದುರಾಗಿದೆ. ಹೀಗಾಗಿ ನ್ಯಾಯಯುತ ಹಂಚಿಕೆಯನ್ನು ಬಿಡುಗಡೆ ಮಾಡದಿರುವ ಬಗ್ಗೆ ಕೋರ್ಟ್​ನಲ್ಲಿ ಪ್ರಶ್ನಿಸುವ ಕಾನೂನು ಅಂಶಗಳ ಬಗ್ಗೆ ಸಚಿವ ಈಶ್ವರ್​​ ಖಂಡ್ರೆ ಸಭೆಯಲ್ಲಿ ಚರ್ಚಿಸಿದ್ದಾರೆ. ಸಭೆಯಲ್ಲಿ ಅಂತಿಮವಾಗಿ ಈ ಬಗ್ಗೆ ಸುಪ್ರೀಂಕೋರ್ಟ್ ಮೊರೆ ಹೋಗಲು ತೀರ್ಮಾನಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:34 am, Thu, 10 September 26

Follow Us
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ