50% ಡಿಸ್ಕೌಂಟ್​ನಿಂದ ಭರ್ಜರಿ ಕಲೆಕ್ಷನ್: ಮೂರನೇ ದಿನವೂ ಕೋಟಿಗಟ್ಟಲೆ ಟ್ರಾಫಿಕ್ ದಂಡದ ಹಣ ಸಂಗ್ರಹ

ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸುವವರಿಗೆ ಶೇ. 50 ರಿಯಾಯಿತಿ ನೀಡಿದ್ದರಿಂದ ಭರ್ಜರಿ ಹಣ ಕಲೆಕ್ಷನ್ ಆಗುತ್ತಿದೆ. ಕಳೆದ ಎರಡು ದಿನದಲ್ಲಿ 13 ಕೋಟಿ 81 ಲಕ್ಷ 13 ಸಾವಿರದ 621 ರೂಪಾಯಿ ಟ್ರಾಫಿಕ್ ದಂಡ ಸಂಗ್ರಹವಾಗಿಗಿತ್ತು. ಇನ್ನು ಇಂದು ಮೂರನೇ ದಿನ ಎಷ್ಟು ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ .

50% ಡಿಸ್ಕೌಂಟ್​ನಿಂದ ಭರ್ಜರಿ ಕಲೆಕ್ಷನ್: ಮೂರನೇ ದಿನವೂ ಕೋಟಿಗಟ್ಟಲೆ ಟ್ರಾಫಿಕ್ ದಂಡದ ಹಣ ಸಂಗ್ರಹ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 05, 2023 | 10:51 PM

ಬೆಂಗಳೂರು:  ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ (Bengaluru Traffic Fines) ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸುವವರಿಗೆ ಶೇ. 50 ವಿನಾಯಿತಿ ಘೋಷಣೆ ಮಾಡಿದ ಬೆನ್ನಲ್ಲೇ ವಾಹನ ಸವಾರರು ದಂಡ ಪಾವತಿಸಲು ವೀಕೆಂಡ್​ನಲ್ಲೂ ಮುಗಿಬಿದ್ದಿದ್ದಾರೆ. ಹೌದು.. ಮೂರನೇ ದಿನವಾದ ಇಂದು(ಫೆಬ್ರವರಿ 05) ಕೋಟಿಗಟ್ಟಲೆ ಹಣ ಸಂಗ್ರಹವಾಗಿದೆ. ಫೆ. 3ರಂದು ಈ ವಿನಾಯಿತಿ ಜಾರಿಗೆ ಬಂದಿದ್ದು, ಮೊದಲ ದಿನವೇ 5,61,45,000 ರೂಪಾಯಿಗೂ ಅಧಿಕ ದಂಡದ ಮೊತ್ತ ಸಂಗ್ರಹವಾಗಿತ್ತು. ಇನ್ನು ಎರಡನೇ ದಿನ (ಫೆಬ್ರವರಿ 04) ಬರೋಬ್ಬರಿ 6,80,72,500 ರೂ. ದಂಡ ಸಂಗ್ರಹವಾಗಿತ್ತು. ಮೂರನೇ ದಿನವಾದ ಇಂದು(ಫೆಬ್ರವರಿ) ಕೂಡ ಭಾನುವಾರ ಎಂದು ಲೆಕ್ಕಿಸದೇ ವಾಹನ ಸವಾರರು ಬಂದು ದಂಡದ ಹಣ ಪಾವತಿಸಿದ್ದಾರೆ. ಇದರಿಂದ ಭಾನುವಾರ 6,31,77,750 ರೂ. (6 ಕೋಟಿ 31 ಲಕ್ಷ 77 ಸಾವಿರದ 750 ರೂಪಾಯಿ) ಕಲೆಕ್ಷನ್ ಆಗಿದೆ.

ಇದನ್ನೂ ಓದಿ: ತಮ್ಮ ದ್ವಿಚಕ್ರ ವಾಹನ ಮೌಲ್ಯದಷ್ಟೇ ಇದ್ದ ದಂಡವನ್ನು 50% ಆಫರ್​ನೊಂದಿಗೆ 14,500 ರೂ. ಪಾವತಿಸಿ ಕೇಸ್ ಕ್ಲಿಯರ್ ಮಾಡಿಕೊಂಡ ಮಹಾಶಯ

ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1032 ಪ್ರಕರಣಗಳಲ್ಲಿ18,81,300 ರೂ. ದಂಡ ಸಂಗ್ರಹವಾಗಿದೆ. ಹೀಗೆ ಬೇರೆ-ಬೇರೆ ಠಾಣೆಗಳಲ್ಲಿ ವಾಹನ ಸವಾರರು ದಂಡ ಪಾವತಿಸಲು ಮುಗಿಬಿದ್ದಿದ್ದಾರೆ.

ಪೇಟಿಯಂ ಮೂಲಕ ಪಾವತಿ 3 ಕೋಟಿ 79 ಲಕ್ಷ 95 ಸಾವಿರ 900 ರೂ. ಜಮೆ ಆಗಿದ್ದರೆ, PDA ಮೂಲಕ 1 ಕೋಟಿ 97 ಲಕ್ಷ 56 ಸಾವಿರ 950 ರೂ.ಮೊತ್ತ ಜಮ ಆಗಿದೆ. ಬೆಂಗಳೂರು ಒನ್ ಮೂಲಕ 51 ಲಕ್ಷ 60 ಸಾವಿರ 550 ರೂ. ಸಂಗ್ರಹವಾಗಿದೆ. TMC ಮೂಲಕ 2 ಲಕ್ಷ 64 ಸಾವಿರ 350 ರೂ. ಹರಿದುಬಂದಿದೆ. ಇದರೊಂದಿಗೆ ಮೂರು ದಿನದಲ್ಲಿ ಒಟ್ಟು 22 ಕೋಟಿ 32 ಲಕ್ಷ 47 ಸಾವಿರದ 491 ರೂ. ದಂಡದ ಹಣ ಹರಿದುಬಂದಿದೆ. ಇನ್ನು ಈವರೆಗೆ 7 ಲಕ್ಷ 41 ಸಾವಿರದ 48 ನಿಯಮ ಉಲ್ಲಂಘನೆ ಕೇಸ್‌ ಕ್ಲಿಯರ್‌ ಆಗಿವೆ.

ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ

ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಾಕಿ ಇರುವ ಟ್ರಾಫಿಕ್ ದಂಡ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿದ್ದರು. ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಅನುಮತಿ ನೀಡಿದ್ದರು. ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಕಾನೂನು ಇಲಾಖೆ ಅಧಿಕಾರಿಗಳ ಒಪ್ಪಿಗೆ ಪಡೆದ ಸಾರಿಗೆ ಇಲಾಖೆ, ಶೇ.50 ವಿನಾಯಿತಿ ನೀಡಿದೆ.

ಬಾಕಿ ಉಳಿಸಿಕೊಂಡಿರುವ ಸಂಚಾರ ದಂಡವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ಸಿಗಲಿದೆ. ನಿಗದಿತ ದಿನಾಂಕದಂದು ಬಾಕಿ ಪ್ರಕರಣಗಳನ್ನು ಇತ್ಯಾರ್ಥ ಮಾಡಿಕೊಳ್ಳುವರಿಗೆ ಮಾತ್ರ ಇದು ಅನ್ವಯ ಆಗಲಿದೆ. ಆನಂತರ ಬಂದವರಿಗೆ ವಿನಾಯಿತಿ ಸಿಗುವುದಿಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ