AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ! ಬೆಲೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು

ಬೆಂಗಳೂರಿನ ಬೆನ್ಸನ್ ಟೌನ್‌ನಲ್ಲಿರುವ 3BHK ಐಷಾರಾಮಿ ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ. ಬೆಲೆ ನಿಗದಿಪಡಿಸಲಾಗಿದ್ದು, ಈ ಪೋಸ್ಟ್ ರೆಡ್ಡಿಟ್‌ನಲ್ಲಿ ಭಾರಿ ವೈರಲ್ ಆಗಿದೆ. 2,850 ಚದರ ಅಡಿಯ ಈ ಮನೆಯ ಬೆಲೆ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ವಾರ್ಷಿಕ 30 ಲಕ್ಷ ರೂಪಾಯಿ ಸಂಬಳ ಪಡೆಯುವ ಐಟಿ ಉದ್ಯೋಗಿಗಳಿಗೂ ಬೆಂಗಳೂರಿನಲ್ಲಿ ಸ್ವಂತ ಮನೆ ಖರೀದಿಸುವುದು ಕಷ್ಟವಾಗಿದೆ ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.

ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ! ಬೆಲೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು
ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ!
ಭಾವನಾ ಹೆಗಡೆ
|

Updated on: May 20, 2026 | 11:58 AM

Share

ಬೆಂಗಳೂರು, ಮೇ 20: ನಗರದಲ್ಲಿ ಮನೆ ಕೊಳ್ಳುವುದು ಸಾಮಾನ್ಯ ಮಧ್ಯಮ ವರ್ಗದವರಿರಲಿ (Middle Class), ಲಕ್ಷ ಲಕ್ಷ ಸಂಬಳ ಪಡೆಯುವ ಐಟಿ ಉದ್ಯೋಗಿಗಳಿಗೂ ಈಗ ಮರೀಚಿಕೆಯಂತಾಗಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಆದ ರೆಡ್ಡಿಟ್‌ನ ಬೆಂಗಳೂರು ರಿಯಲ್ ಎಸ್ಟೇಟ್ಸ್ (BangaloreRealEstates) ಕಮ್ಯುನಿಟಿಯಲ್ಲಿ ಪೋಸ್ಟ್ ಮಾಡಲಾದ ಒಂದು ಅಪಾರ್ಟ್‌ಮೆಂಟ್‌ನ ಮಾರಾಟದ ಜಾಹೀರಾತು ಮತ್ತು ಅದರ ಬೆಲೆ ಇಂಟರ್ನೆಟ್‌ನಲ್ಲಿ ಭಾರಿ ಸಂಚಲನ ಮೂಡಿಸಿದೆ.

ಮುಖ್ಯಾಂಶಗಳು

  • ಬೆಂಗಳೂರಿನ ಬೆನ್ಸನ್ ಟೌನ್ 3BHK ಫ್ಲ್ಯಾಟ್ ಬೆಲೆ ಇಂಟರ್ನೆಟ್‌ನಲ್ಲಿ ಭಾರಿ ವೈರಲ್.
  • 2,850 ಚದರ ಅಡಿಯ ಐಷಾರಾಮಿ ಫ್ಲ್ಯಾಟ್‌ಗೆ 6.5 ಕೋಟಿ ರೂ.
  • ದುಬಾರಿ ಬೆಲೆ ಕಂಡು ಮಧ್ಯಮ ವರ್ಗದ ನೆಟ್ಟಿಗರಿಂದ ತೀವ್ರ ಆಕ್ರೋಶ.

ಬೆಂಗಳೂರಿನ ಅತ್ಯಂತ ಐಷಾರಾಮಿ ಮತ್ತು ಪ್ರತಿಷ್ಠಿತ ಪ್ರದೇಶವಾದ ಬೆನ್ಸನ್ ಟೌನ್‌ನ (Benson Town) ಮಿಲ್ಲರ್ಸ್ ರಸ್ತೆಯಲ್ಲಿರುವ ಈ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಈ ಬೆಲೆಯನ್ನು ನೋಡಿ ನೆಟ್ಟಿಗರು ತಬ್ಬಿಬ್ಬಾಗಿದ್ದಾರೆ.

ಫ್ಲ್ಯಾಟ್‌ನಲ್ಲೇನಿದೆ ಅಂಥಾ ವಿಶೇಷ?

ವೈರಲ್ ಆಗಿರುವ ಮಾಹಿತಿ ಪ್ರಕಾರ, ಈ ಅಪಾರ್ಟ್‌ಮೆಂಟ್ ಕಟ್ಟಡದ 6ನೇ ಮಹಡಿಯಲ್ಲಿದೆ. 2,850 ಚದರ ಅಡಿ ವಿಸ್ತೀರ್ಣ ಹೊಂದಿರುವ ಈ ಫ್ಲ್ಯಾಟ್ ಸಂಪೂರ್ಣವಾಗಿ ಪೀಠೋಪಕರಣಗಳಿಂದ ಸಜ್ಜುಗೊಂಡಿದೆ (Fully Furnished). ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಯೇ ಶುರುವಾಗಿದೆ. ಯುವ ಜನತೆ ತಮಗೆ ಎದುರಾಗಿರುವ ಆರ್ಥಿಕ ಅಸಹಾಯಕತೆಯನ್ನು ಕಮೆಂಟ್‌ಗಳ ಮೂಲಕ ಹೊರಹಾಕುತ್ತಿದ್ದಾರೆ.

ನೆಟ್ಟಿಗರ ರಿಯಾಕ್ಷನ್ ಏನು?

ಒಬ್ಬ ಬಳಕೆದಾರರು ಕಮೆಂಟ್ ಮಾಡಿ, ಇದು ನಿಜಕ್ಕೂ ನನ್ನ ಕನಸಿನ ಮನೆ. ನಾನು ವರ್ಷಕ್ಕೆ 30 ಲಕ್ಷ ರೂ. ಸಂಬಳ ಪಡೆಯುತ್ತಿದ್ದೇನೆ. ಆದರೂ ನಾನು ಕೆಳ ಮಧ್ಯಮ ವರ್ಗದಿಂದ ಬಂದವನು. ಇನ್ನು ಎಷ್ಟು ವರ್ಷ ಕಷ್ಟಪಟ್ಟು ದುಡಿದರೂ ನನ್ನ ಜೀವನದಲ್ಲಿ ಇಷ್ಟೊಂದು ಹಣ ಕೊಟ್ಟು ಇಂತಹ ಮನೆ ಖರೀದಿಸಲು ಸಾಧ್ಯವೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬರು ಅಪಾರ್ಟ್‌ಮೆಂಟ್‌ನ ವಿನ್ಯಾಸವನ್ನು ಮೆಚ್ಚಿಕೊಂಡಿದ್ದಾರಾದರೂ, ಕೇವಲ ಒಂದು ಫ್ಲ್ಯಾಟ್‌ಗೆ ಇಷ್ಟೊಂದು ಕೋಟಿ ಸುರಿಯುವ ಬದಲು, ಬೇರೆ ಕಡೆ ವಿಶಾಲವಾದ ಸೈಟ್ ತಗೆದುಕೊಂಡು ಸ್ವತಂತ್ರವಾಗಿ ದೊಡ್ಡ ಬಂಗಲೆಯನ್ನೇ ಕಟ್ಟಬಹುದು ಎಂದು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ ಫುಟ್​ಪಾತ್​ಗೂ ಬಂತು​ ಟಿಂಡರ್ ಮಾದರಿಯ ಆ್ಯಪ್: ಹದಿಹರೆಯದ ಬಾಲಕನ ಐಡಿಯಾಗೆ ನೆಟ್ಟಿಗರು ಫಿದಾ!

ಇಷ್ಟೆಲ್ಲಾ ಟ್ರೋಲ್‌ಗಳ ನಡುವೆ ಕೆಲವರು ಬೆಂಗಳೂರಿನ ರಿಯಲ್ ಎಸ್ಟೇಟ್ ಮಾರುಕಟ್ಟೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದು ನಗರದ ಹೃದಯಭಾಗದಲ್ಲಿದೆ ಮತ್ತು ಅತ್ಯಂತ ಪ್ರೀಮಿಯಂ ಏರಿಯಾ ಆಗಿದೆ. ಇಲ್ಲಿನ ಸೌಲಭ್ಯಗಳಿಗೆ ಈ ಬೆಲೆ ನಿರೀಕ್ಷಿತವೇ. ಬೆಂಗಳೂರಿನ ಐಷಾರಾಮಿ ಹೌಸಿಂಗ್ ಮಾರ್ಕೆಟ್ ಸಖತ್ ಡಿಮ್ಯಾಂಡ್‌ನಲ್ಲಿದೆ, ಇದನ್ನು ಕೊಳ್ಳುವ ಶ್ರೀಮಂತರು ಇದ್ದೇ ಇರುತ್ತಾರೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ