ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರುಪಾಯಿ ದಂಡ ವಸೂಲಿ ಮಾಡಿದ ಆರ್​ಟಿಓ

ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರಯಾಣಿಕರಿಂದ ಓನ್ ಟೂ ಡಬಲ್ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಮಾಲೀಕರಿಗೆ ಆರ್​ಟಿಓ ಸರಿಯಾಗಿ ಬಿಸಿ ಮುಟ್ಟಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳನ್ನು ತಪಾಸಣೆ ಮಾಡಿದ ರಾಜ್ಯ ‌ಸಾರಿಗೆ ಇಲಾಖೆಯ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.

ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರುಪಾಯಿ ದಂಡ ವಸೂಲಿ ಮಾಡಿದ ಆರ್​ಟಿಓ
ಸಾಂದರ್ಭಿಕ ಚಕಿತ್ರ
Follow us
Kiran Surya
| Updated By: ಆಯೇಷಾ ಬಾನು

Updated on: Nov 16, 2023 | 2:58 PM

ಬೆಂಗಳೂರು, ನ.16: ದೀಪಾವಳಿ (Deepavali) ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಹಬ್ಬ ಆಚರಣೆ ಮಾಡಲು ಜನರು ತಮ್ಮ ತಮ್ಮ ಊರುಗಳತ್ತ ಹೊರಟಿದ್ದರು. ಇದನ್ನು ಬಂಡವಾಳ ಮಾಡಿಕೊಂಡಿದ್ದ ಖಾಸಗಿ ಬಸ್ (Private Bus) ಮಾಲೀಕರು ಓನ್ ಟೂ ಡಬಲ್ ದರ ಹಣ ಪೀಕಿದ್ರು ಇದಕ್ಕೆ ಬ್ರೇಕ್ ಹಾಕಿದ ಆರ್ಟಿಓ ಅಧಿಕಾರಿಗಳು (RTO) ಬರೋಬ್ಬರಿ 2 ಕೋಟಿ 13 ಲಕ್ಷ ದಂಡ ವಸೂಲಿ ಮಾಡಿದ್ದಾರೆ. ಹಾಗೂ 37 ಬಸ್ ಸೀಜ್ ಮಾಡಿದ್ದಾರೆ. 1470 ಖಾಸಗಿ ಬಸ್ ಮೇಲೆ ಕೇಸ್ ಬಿದ್ದಿದೆ.

ಈ ಬಾರಿಯ ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರಯಾಣಿಕರಿಂದ ಓನ್ ಟೂ ಡಬಲ್ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಮಾಲೀಕರಿಗೆ ಆರ್​ಟಿಓ ಸರಿಯಾಗಿ ಬಿಸಿ ಮುಟ್ಟಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳನ್ನು ತಪಾಸಣೆ ಮಾಡಿದ ರಾಜ್ಯ ‌ಸಾರಿಗೆ ಇಲಾಖೆಯ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ನೀಡಲಾಗಿತ್ತು. ಹಾಗಾಗಿ ಜನರು ತಮ್ಮ ತಮ್ಮ ‌ಸ್ವಂತ ಊರುಗಳತ್ತ ಪ್ರಯಾಣ ಬೆಳೆಸಿದ್ರು ಆದರೆ ಇದನ್ನೆ ಬಂಡವಾಳ ಮಾಡಿಕೊಂಡ ಕೆಲ ಖಾಸಗಿ ಬಸ್ ಮಾಲೀಕರು ವಿಪರೀತವಾಗಿ ಒನ್ ಟೂ ಡಬಲ್ ದರ ಫಿಕ್ಸ್ ಮಾಡಿಕೊಂಡು ಹಣ ಪೀಕಲು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಫೀಲ್ಡ್ ಗೆ ಇಳಿದಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಗಳು ಸುಮಾರು ಎರಡು ಸಾವಿರ ಬಸ್ ಗಳನ್ನು ತಪಾಸಣೆ ಮಾಡಿ 1460 ಕೇಸ್ ಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: ದೀಪಾವಳಿ: ಖಾಸಗಿ ಬಸ್​​​ಗಳ ಟಿಕೆಟ್ ದರ ಭಾರಿ ದುಬಾರಿ, ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಸಂಕಷ್ಟ

ಇನ್ನು ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 2 ಕೋಟಿ 14 ಲಕ್ಷ ರುಪಾಯಿ ದಂಡ ವಸೂಲಿ ಆಗಿದೆ. ಅನಧಿಕೃತವಾಗಿ ಪಟಾಕಿ ಸಾಗಿಸುತ್ತಿದ್ದ 21 ಬಸ್ ಸೇರಿದಂತೆ ಒಟ್ಟು 36 ಖಾಸಗಿ ಬಸ್ ಗಳನ್ನು ಸೀಜ್ ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಗಳು ಮಾತ್ರ ಅಲ್ಲ ಕೆಎಸ್ಆರ್ಟಿಸಿ ಬಸ್ ನವ್ರು ಹೆಚ್ಚಿನ ಹಣ ಪಡೆದುಕೊಳ್ಳುತ್ತಾರೆ, ಅತ್ತಿಬೆಲೆಯಿಂದ ಬರುವ ಬಿಎಂಟಿಸಿ ಬಸ್ ಗಳಲ್ಲಿ ಸಾಕಷ್ಟು ಪಟಾಕಿ ಸಪ್ಲೈ ಆಗಿದೆ. ಆದರೆ ಕೆಎಸ್ಆರ್ಟಿಸಿ, ಬಿಎಂಟಿಸಿ ಮೇಲೆ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ಒಟ್ನಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಮಾಲೀಕರಿಗೆ ಏನೋ ಆರ್ಟಿಓ ಅಧಿಕಾರಿಗಳು ದಂಡ ಹಾಕಿ ಬಸ್ ಸೀಜ್ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಆದರೆ ಕೆಎಸ್ಆರ್ಟಿಸಿ ಬಸ್ ವಿರುದ್ಧ ಯಾಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಖಾಸಗಿ ಬಸ್ ಮಾಲೀಕರು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್