ಕೆ.ಆರ್. ಸರ್ಕಲ್​​ನಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಕಾರಿಗೆ ಬ್ರೇಕ್ ಹಾಕಿದ RTO ಅಧಿಕಾರಿ! ಸಿಡಿಮಿಡಿಗೊಂಡ ಹಿರಿಯ IAS

ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಗಳು ಘೋಷಣೆಗೊಂಡಿವೆ. ಈ ಸಂದರ್ಭದಲ್ಲಿ ಅಧಿಕಾರಿಗಳೇ ರಾಜ್ಯದ ಚುಕ್ಕಾಣಿ ಹಿಡಿದು ಮುನ್ನಡೆಸುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳ ಕಾರುಬಾರು ಮೇಲುಗೈ ಆಗಿರುತ್ತದೆ. ದೊಡ್ಡಮಟ್ಟದ ಐಎಎಸ್ ಅಧಿಕಾರಿಗೂ ಇದರ ಬಿಸಿ ತಟ್ಟಿದೆ.

ಕೆ.ಆರ್. ಸರ್ಕಲ್​​ನಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಕಾರಿಗೆ ಬ್ರೇಕ್ ಹಾಕಿದ RTO ಅಧಿಕಾರಿ! ಸಿಡಿಮಿಡಿಗೊಂಡ ಹಿರಿಯ IAS
ಕೆ.ಆರ್. ಸರ್ಕಲ್​​ನಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಕಾರಿಗೆ ಬ್ರೇಕ್ ಹಾಕಿದ RTO ಅಧಿಕಾರಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 05, 2023 | 3:36 PM

ಬೆಂಗಳೂರು: ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಗಳು (Karnataka Assembly Elections 2023) ಘೋಷಣೆಗೊಂಡಿವೆ. ಈ ಸಂದರ್ಭದಲ್ಲಿ ಅಧಿಕಾರಿಗಳೇ ರಾಜ್ಯದ ಚುಕ್ಕಾಣಿ ಹಿಡಿದು ಮುನ್ನಡೆಸುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳ ಕಾರುಬಾರು ಮೇಲುಗೈ ಆಗಿರುತ್ತದೆ. ದೊಡ್ಡಮಟ್ಟದ ಐಎಎಸ್ ಅಧಿಕಾರಿಗೂ ಇದರ ಬಿಸಿ ತಟ್ಟಿದೆ. ಪ್ರಸ್ತುತ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ (ACS) ಮತ್ತು ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಅವರು ಕೆಳಹಂತದ (RTO) ಅಧಿಕಾರಿಯೊಬ್ಬರು ಅತ್ಯುತ್ಸಾಹದಲ್ಲಿ ಕೈಗೊಂಡಿರುವ ಕ್ರಮದಿಂದ ಕಸಿವಿಸಿ ಅನುಭವಿಸಿದ್ದಾರೆ. ಅದೂ ನಡುರಸ್ತೆಯಲ್ಲಿ ಇಂತಹ ಅಧಿಕ ಪ್ರಸಂಗವೊಂದು ಒದಗಿಬಂದಿರುವುದು ಅವರಿಗೆ ಮುಜುಗುರ ತಂದಿದೆ.

ರಾಜ್ಯಾದ್ಯಂತ ಆರ್​​ಟಿಓ ಅಧಿಕಾರಿಗಳು ಎಲೆಕ್ಷನ್ ಡ್ಯೂಟಿಗಾಗಿ ಸರ್ಕಾರಿ ವಾಹನಗಳನ್ನು (Car) ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಆರ್​​ಟಿಓ ಅಧಿಕಾರಿಗಳು ಮತ್ತು ಪೊಲೀಸರು ಈಗಾಗಲೇ ಸುಮಾರು 450 ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇಂದು ಬುಧವಾರ ಕೆ.ಆರ್. ಸರ್ಕಲ್ ನಲ್ಲಿ ಮೇಲಿನ ಘಟನೆ ನಡೆದಿದೆ.

Also Read:

IAS Vandita Sharma: ಆರು ತಿಂಗಳ ಅಧಿಕಾರಾವಧಿಗೆ ಕರ್ನಾಟಕ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

ಈ ವೇಳೆ ನಗರಾಭಿವೃದ್ಧಿ ಇಲಾಖೆಯ ಅಪಾರ ಮುಖ್ಯ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಅವರು ಆರ್ಟಿಓ ಅಧಿಕಾರಿ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ನನ್ನ ವಾಹನವನ್ನು ವಶಕ್ಕೆ ಪಡೆದುಕೊಳ್ಳಿ. ನಾನು ನಿಮ್ಮದೇ ಆರ್​​ಟಿಓ ಜೀಪ್ ನಲ್ಲಿ ಹೋಗ್ತೀನಿ ಎಂದು ರಾಕೇಶ್ ಗರಂ ಆಗಿದ್ದಾರೆ. ಇದಕ್ಕೆ ಆರ್​​ಟಿಓ ಅಧಿಕಾರಿ ಕೈ ಮುಗಿದು,‌ ನಿಮ್ಮ ಕಾರು ವಶಕ್ಕೆ ಪಡೆದಿಲ್ಲ ಎಂದು ಸಮಜಾಯಿಷಿ ನೀಡತೊಡಗಿದ್ದಾರೆ. ‌ನಿಮ್ಮ ಕಾರು ಎಂದು ನಮಗೆ ಗೊತ್ತಾಗಿಲ್ಲ ಸಾರ್. ದಯವಿಟ್ಟು ನೀವು ಹೋಗಿ ಸರ್ ಎಂದು ಆರ್ಟಿಓ ಅಧಿಕಾರಿ ಕೈ ಮುಗಿದು ಕೇಳಿಕೊಂಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?