AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನಗಳ ಮೇಲೆ ಪ್ರಚೋದನಾಕಾರಿ ಬರಹ, ಸ್ಟಿಕ್ಕರ್ ಅಂಟಿಸಿದರೆ ದಂಡ: ದರ್ಶನ್ ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಆರ್​ಟಿಒ

ನಟ ದರ್ಶನ್ ಬಂಧನದ‌ ನಂತರ ಅವರ ಅಭಿಮಾನಿಗಳು ವಾಹನಗಳ ಮೇಲೆ ತರಹೇವಾರಿ ಸ್ಟಿಕ್ಕರ್​​ಗಳನ್ನು ಅಂಟಿಸುತ್ತಿರುವ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಆರ್​ಟಿಒ ಕೆಂಡಾಮಂಡಲವಾಗಿದೆ. ಈ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ನೀಡಿದೆ. ಆರ್​​ಟಿಒ ಎಚ್ಚರಿಕೆಯಲ್ಲೇನಿದೆ? ಯಾವ ರೀತಿಯ ಸ್ಟಿಕ್ಕರ್, ನಂಬರ್, ಫೋಟೋ ಹಾಕುವುದು ಸರಿ, ಯಾವ ರೀತಿಯದ್ದು ಹಾಕುವುದು ತಪ್ಪು ಎಂಬ ವಿವರ ಇಲ್ಲಿದೆ.

ವಾಹನಗಳ ಮೇಲೆ ಪ್ರಚೋದನಾಕಾರಿ ಬರಹ, ಸ್ಟಿಕ್ಕರ್ ಅಂಟಿಸಿದರೆ ದಂಡ: ದರ್ಶನ್ ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಆರ್​ಟಿಒ
ದರ್ಶನ್ ಫ್ಯಾನ್ಸ್​ಗೆ ಆರ್​ಟಿಒದಿಂದಲೂ ಬಿಗ್ ಶಾಕ್!
ಕಿರಣ್​ ಸೂರ್ಯ
| Edited By: |

Updated on: Sep 06, 2024 | 6:58 AM

Share

ಬೆಂಗಳೂರು, ಸೆಪ್ಟೆಂಬರ್ 6: ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ಆದಮೇಲೆ ವಾಹನಗಳ ಮೇಲೆ ಆಕ್ಷೇಪಾರ್ಹ, ಪ್ರಚೋದನಾಕಾರಿ, ಬೇರೆ ನಟರ ಅಭಿಮಾನಿಗಳ ವಿರುದ್ಧ ಟಾಂಗ್ ಕೊಡುವಂತೆ ಸ್ಟಿಕ್ಕರ್, ಬರಹಗಳ ಅಳವಡಿಕೆ ಮಾಡುವುದು ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ರೀತಿಯ ಬರಹಗಳು ಹೆಚ್ಚಾಗಿವೆ. ಈ ಹಿಂದೆ ಈ‌ ಮಟ್ಟಿಗೆ ಬರಹಗಳನ್ನು ವಾಹನಗಳ ಮೇಲೆ ಹಾಕಿರಲಿಲ್ಲ. ಇದು ಆರ್​ಟಿಒ ಹಾಗೂ ಪೊಲೀಸ್ ಇಲಾಖೆ ಗಮನಕ್ಕೆ ಬಂದಿದೆ. ಅನವಶ್ಯಕ, ಪ್ರಚೋದನಾಕಾರಿ ಬರಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ನೆಚ್ಚಿನ‌ ನಟರ ಪೋಟೋಗಳನ್ನು ವಾಹನಗಳ ಮೇಲೆ ಹಾಕುವುದರ ಜತೆಗೆ ಪ್ರಚೋದನಾಕಾರಿ ಬರಹ‌, ಸ್ಟಿಕ್ಕರ್ ಅಂಟಿಸಲು ಅವಕಾಶವಿಲ್ಲ ಎಂದು ಆರ್​ಟಿಒ ಅಧಿಕಾರಿಗಳು ಹೇಳಿದ್ದಾರೆ.

ಈವರೆಗೆ ನಂಬರ್ ಪ್ಲೇಟ್ ಮೇಲೆ ಮಾತ್ರ ಬರಹ, ಸ್ಟಿಕ್ಕರ್ ಇದ್ದರೆ ಗಮನಿಸುತ್ತಿದ್ದೆವು. ಇನ್ನುಮುಂದೆ ವಾಹನಗಳ ಇತರ ಭಾಗಗಳಲ್ಲಿ ಕೂಡ ಅನಧಿಕೃತ ಬರಹ ಹಾಕಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬೀಳಲಿದೆ ದಂಡ!

ಎಚ್ಚರಿಕೆ ಉಲ್ಲಂಘಿಸಿ ಸ್ಟಿಕ್ಕರ್, ಬರಹ ಅಂಟಿಸಿದಲ್ಲಿ ಮೊದಲ ಬಾರಿಗೆ 500 ರೂಪಾಯಿ, ಎರಡನೇ ಬಾರಿ 1000 ರೂಪಾಯಿ, ಮೂರನೇ ಬಾರಿ ಅದೇ ತಪ್ಪು ಮಾಡಿದರೆ ಪರವಾನಗಿಯನ್ನೇ ರದ್ದು ಮಾಡುತ್ತೇವೆ ಎಂದು ಆರ್​ಟಿಒ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಆರ್​ಟಿಒ ಅಡಿಷನಲ್ ಕಮಿಷನರ್ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ನಂಬರ್ ಪ್ಲೇಟ್ ಯಾವ ರೀತಿ ಇರಬೇಕು ಎಂದು ಸರ್ವೋಚ್ಛ ನ್ಯಾಯಾಲಯವು ಆರ್​​ಟಿಒ ಇಲಾಖೆಗಳಿಗೆ ನಿರ್ದೇಶನ ಕೊಡುತ್ತಾ ಬಂದಿದೆ. ಅದರ ಅನ್ವಯ ಆರ್​​ಟಿಒ ಅಧಿಕಾರಿಗಳು ಕೇಸುಗಳನ್ನ ದಾಖಲು ಮಾಡುತ್ತಾ ಬಂದಿದ್ದಾರೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಹಾಗೂ ಪ್ರಚಾರ ಮಾಡುವ ಕೆಲಸ ಆರ್​​ಟಿಒ ಮಾಡುತ್ತಿದೆ. ಜೊತೆಗೆ 3 ವರ್ಷದಲ್ಲಿ ಹಲವು ಪ್ರಕರಣ ದಾಖಲು ಮಾಡಿದ್ದೇವೆ ಎಂದೂ ಅವರು ತಿಳಿಸಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ. ಎಲ್ಲರೂ ಕಾನೂನು ಪಾಲಿಸಬೇಕು ಎಂದು ವಾನಹ ಸವಾರ ಶಿವಮೂರ್ತಿ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಜೂನ್ 9 ರಂದು ಪಟ್ಟಣಗೆರೆ ಶೆಡ್​ನಲ್ಲಿ ಏನೇನಾಯ್ತು? ಹಲ್ಲೆ ಮಾಡಿದ್ದು ಯಾರ್ಯಾರು? ಇಂಚಿಂಚೂ ವಿವರ

ಒಟ್ಟಿನಲ್ಲಿ ನಾವು ಮಾಡಿದ್ದೇ ಸರಿ. ನಾವು ಏನು ಮಾಡಿದರೂ ಯಾರೂ ಕೇಳಬಾರದು ಎಂದು ಹುಚ್ಚಾಟ ಪ್ರದರ್ಶನ ಮಾಡಿದರೆ ಇನ್ನು ಮುಂದೆ ಆರ್​ಟಿಒದಿಂದ ಕ್ರಮ ಖಚಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ