AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ವಿಮಾನದಲ್ಲಿ ಸಿಬ್ಬಂದಿ ಜೊತೆ ಪ್ರಯಾಣಿಕನ ಅಸಭ್ಯ ವರ್ತನೆ; ಬಂಧನ

ವಿಮಾನದಲ್ಲಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಕೆಂಪೇಗೌಡ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ 6E556 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ.

ದೇವನಹಳ್ಳಿ: ವಿಮಾನದಲ್ಲಿ ಸಿಬ್ಬಂದಿ ಜೊತೆ ಪ್ರಯಾಣಿಕನ ಅಸಭ್ಯ ವರ್ತನೆ; ಬಂಧನ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆ
ನವೀನ್ ಕುಮಾರ್ ಟಿ.
| Edited By: ವಿವೇಕ ಬಿರಾದಾರ|

Updated on: Nov 19, 2023 | 10:11 AM

Share

ದೇವನಹಳ್ಳಿ ನ.19: ವಿಮಾನದಲ್ಲಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಕೆಂಪೇಗೌಡ ವಿಮಾನ ನಿಲ್ದಾಣ (Kempegowda International Airport) ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ರಣದೀರ್ ಸಿಂಗ್ ಬಂಧಿತ ಪ್ರಯಾಣಿಕ ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ 6E556 ಇಂಡಿಗೋ ವಿಮಾನದಲ್ಲಿ ರಣದೀರ್ ಸಿಂಗ್ ನಶೆಯಲ್ಲಿ ಪ್ಲೈಟ್ ಕ್ಯಾಬಿನ್ ಸ್ಟಾಪ್​​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಣಬೀರ್​ ಸಿಂಗ್​​ನನ್ನು ಬಂಧಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 ಪ್ರತ್ಯೇಕ ಪ್ರಕರಣಗಳಲ್ಲಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಕಟ್​​ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಕೆಜಿಗೂ ಅಧಿಕ‌‌ ಚಿನ್ನವನ್ನು ಜಪ್ತಿ ಮಾಡಿದ್ದರು.

ಇದನ್ನೂ ಓದಿ: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ಬ್ಯಾಂಕಾಕ್​ನಿಂದ ಮೂವರು ಪುರುಷರು, ಕೊಲಂಬೋದ ಇಬ್ಬರು ಮಹಿಳೆಯರು ಮತ್ತು ಮಸ್ಕಟ್​ನ ಒರ್ವ ಪ್ರಯಾಣಿಕ ಶರ್ಟ್ ಮತ್ತು ಒಳ ಉಡುಪಿನಲ್ಲಿ ಚಿನ್ನದ ಕಟ್ ಫಿಸ್​​ಗಳನ್ನು ಅಡಗಿಸಿಟ್ಟುಕೊಂಡು ತಂದಿದ್ದರು.‌ ಕಸ್ಟಮ್ಸ್​​ ಅಧಿಕಾರಿಗಳ ತಪಾಸಣೆ ವೇಳೆ ಮೂರು ಪ್ರಕರಣಗಳಿಂದ 1,26,58, 618 ರೂ. ಮೌಲ್ಯದ 2 ಕೆಜಿ 79 ಗ್ರಾಂ ತೂಕದ ಚಿನ್ನ ಪತ್ತೆಯಾಗಿತ್ತು. ಮೂರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಅಧಿಕಾರಿಗಳು ಪಡೆದು ವಿಚಾರಣೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More