ತಡರಾತ್ರಿವರೆಗೂ ತೆರೆದಿದ್ದ ಬೆಂಗಳೂರಿನ ಪಬ್​ಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ಶನಿವಾರ ರಾತ್ರಿ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್​ನ ಪಬ್​​ಗಳ ಮೇಲೆ ಪೊಲೀಸರು ದಾಳಿ ಮಾಡಿ, ಎಚ್ಚರಿಕೆ ನೀಡಿ ಬಂದ್​ ಮಾಡಿಸಿದರು. ಕೇಂದ್ರ ವಿಭಾಗದ ಡಿಸಿಪಿ ಶೇಖರ್.ಟಿ.ಹೆಚ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ತಡರಾತ್ರಿವರೆಗೂ ತೆರೆದಿದ್ದ ಬೆಂಗಳೂರಿನ ಪಬ್​ಗಳ ಮೇಲೆ ಪೊಲೀಸರ ದಾಳಿ
ಬೆಂಗಳೂರು ಪೊಲೀಸ್​ ಆಯುಕ್ತರ ಕಚೇರಿ
Follow us
ವಿವೇಕ ಬಿರಾದಾರ
|

Updated on: Jul 21, 2024 | 10:34 AM

ಬೆಂಗಳೂರು, ಜುಲೈ 21: ವಿಕೆಂಡ್ ಬ್ಯೂಸಿಯಲ್ಲಿದ್ದ ಪಬ್​ಗಳಿಗೆ (Pub) ನಗರ ಪೊಲೀಸರು (Benagluru Police) ಬಿಸಿ ಮುಟ್ಟಿಸಿದ್ದಾರೆ. ತಡರಾತ್ರಿವರೆಗು ಎಣ್ಣೆ ಪಾರ್ಟಿಗೆ ಅವಕಾಶ ಮಾಡಿಕೊಟ್ಟಿದ್ದ ಪಬ್​ಗಳ ಮೇಲೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್.ಟಿ.ಹೆಚ್ ನೇತೃತ್ವದ ತಂಡ ದಾಳಿ ಮಾಡಿತು. ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್​ ಕೊಹ್ಲಿ (Virat Kohli) ಒಡೆತನದ ಪಬ್​ ಸೇರಿದಂತೆ 15 ಪಬ್​ಗಳ ಮೇಲೆ ಈ ಹಿಂದೆ ಎಫ್​ಐಆರ್​​ ದಾಖಲಾಗಿತ್ತು. ಈ ಎಲ್ಲ ಪಬ್​ಗಳು ಸೇರಿದಂತೆ ಇದೀಗ ಹೊಸದಾಗಿ ಅವಧಿಗೂ ಮೀರಿ ತೆರದಿದ್ದ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್​ನ ಪಬ್​​ಗಳ ಮೇಲೆ ಪೊಲೀಸರು ದಾಳಿ ಮಾಡಿ, ಎಚ್ಚರಿಕೆ ನೀಡಿ ಬಂದ್​ ಮಾಡಿಸಿದರು.

ಕೋಹ್ಲಿ ಮಾಲಿಕತ್ವದ ಪಬ್​ ಮೇಲೆ ಎಫ್​​ಐಆರ್​

ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್ ದಾಖಲಾಗಿತ್ತು. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್​​ (One8 Commune Pub) ಮೇಲೆ ಕಬ್ಬನ್​ಪಾರ್ಕ್​ ಠಾಣೆಯಲ್ಲಿ FIR ದಾಖಲಾಗಿತ್ತು. ಪಬ್ ಓಪನ್ ಆಗಿದ್ದ ಬಗ್ಗೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಪಬ್​​ನಲ್ಲಿ ಗ್ರಾಹಕರು ಇದ್ದರು. ನಿಯಮ ಉಲ್ಲಂಘಿಸಿ ರಾತ್ರಿ ಅವಧಿಗೂ ಮೀರಿ ಪಬ್ ಓಪನ್​​​ ಮಾಡಿದ ಹಿನ್ನೆಲೆ ಎಫ್​ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನ ಪಬ್​​ಗಳಲ್ಲಿ ಎಣ್ಣೆ, ಡಿಜೆ ಜೊತೆ ಮತ್ತೊಂದು ಮನರಂಜನೆ ಕಾರ್ಯಕ್ರಮ: ಏನದು?

ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರ ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಈ ವೇಳೆ, ರಾತ್ರಿ 1.20ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್