AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಶಾಲೆ ಆರಂಭಕ್ಕೆ ಸೂಚಿಸದಿದ್ದರೆ ನಾವೇ ಆರಂಭಿಸ್ತೇವೆ: ನೂತನ ಸಿಎಂ ಬೊಮ್ಮಾಯಿಗೆ ಖಾಸಗಿ ಶಾಲೆಗಳ ಡೆಡ್​ಲೈನ್​

ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ಕೊರೊನಾ ಮೂರನೇ ಅಲೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಹೇಳಿದ್ದಾರೆ. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸರ್ಕಾರ ಶಾಲೆಗಳನ್ನು ತೆರೆಯಲು ಹಿಂದೇಟು ಹಾಕುತ್ತಿದೆ.

ಸರ್ಕಾರ ಶಾಲೆ ಆರಂಭಕ್ಕೆ ಸೂಚಿಸದಿದ್ದರೆ ನಾವೇ ಆರಂಭಿಸ್ತೇವೆ: ನೂತನ ಸಿಎಂ ಬೊಮ್ಮಾಯಿಗೆ ಖಾಸಗಿ ಶಾಲೆಗಳ ಡೆಡ್​ಲೈನ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 29, 2021 | 11:51 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಗೊಳಿಸಲಾಗಿತ್ತು. ಲಾಕ್​ಡೌನ್​ ಜಾರಿಯಾದ ವೇಳೆ ಶಾಲೆಗಳನ್ನ ಬಂದ್ ಮಾಡಲಾಗಿದೆ. ಸದ್ಯ ಕೊರೊನಾ ನಿಯಂತ್ರಣಕ್ಕೆ ಬಂದ ಕಾರಣ ಲಾಕ್​ಡೌನ್​ ತೆರವುಗೊಳಿಸಲಾಗಿದೆ. ಆದರೆ ಬಂದ್ ಆಗಿರುವ ಶಾಲೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಮಕ್ಕಳ ಆರೋಗ್ಯ ಹಿತಾದೃಷ್ಟಿಯಿಂದ ಶಾಲೆಗಳನ್ನು ತೆರೆಯಲು ಸರ್ಕಾರ ಮುಂದಾಗುತ್ತಿಲ್ಲ. ಆದರೆ ಕೂಡಲೇ ಶಾಲೆಗಳನ್ನು ಆರಂಭಿಸಬೇಕೆಂದು ಖಾಸಗಿ ಶಾಲೆಗಳ ಒಕ್ಕೂಟ ನೂತನ ಮುಖ್ಯಮಂತ್ರಿಗೆ ಡೆಡ್​ಲೈನ್​ ನೀಡಿದೆ.

ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ಕೊರೊನಾ ಮೂರನೇ ಅಲೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಹೇಳಿದ್ದಾರೆ. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸರ್ಕಾರ ಶಾಲೆಗಳನ್ನು ತೆರೆಯಲು ಹಿಂದೇಟು ಹಾಕುತ್ತಿದೆ. ಆದರೆ ಖಾಸಗಿ ಶಾಲೆಗಳ ಒಕ್ಕೂಟ ಕೂಡಲೇ ಶಾಲೆಗಳನ್ನು ಆರಂಭಿಸಬೇಕು ಎಂದು ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಡೆಡ್​ಲೈನ್​ ನೀಡಿದೆ. ಇಲ್ಲಿದಿದ್ದರೆ ಆಗಸ್ಟ್ 2ರಿಂದ ನಾವೇ ಶಾಲೆಗಳನ್ನು ತೆರೆಯುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಸರ್ಕಾರ ಶಾಲೆ ಆರಂಭಕ್ಕೆ ಸೂಚಿಸದಿದ್ದರೆ ನಾವೇ ಆರಂಭಿಸುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ರೂಪ್ಸಾ ಸಂಘಟನೆ ಶಾಕ್ ಕೊಟ್ಟಿದೆ. ಜುಲೈ 30ರೊಳಗೆ ಶಾಲೆಗಳನ್ನು ಆರಂಭ ಮಾಡಬೇಕು ಅಂತ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ (RUPSA) ಅಧ್ಯಕ್ಷ ಹಾಲನೂರು ಲೇಪಾಕ್ಷಿ ಡೆಡ್​ಲೈನ್​ ನೀಡಿದ್ದಾರೆ.

ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಐಸಿಎಂಸಿ, ದೇವಿಶೆಟ್ಟಿ ವರದಿ ಹಾಗೂ ಟಾಸ್ಕ್ ಫೋರ್ಸ್ ಸಭೆ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಜುಲೈ 30 ರ ಒಳಗೆ ಶಾಲೆ ಆರಂಭಕ್ಕೆ ಆದೇಶ ಮಾಡಬೇಕು. ಇಲ್ಲದಿದ್ದರೆ ನಾವೇ ಶಾಲೆ ಆರಂಭಿಸುವುದಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದ ಹಾಲನೂರು ಲೇಪಾಕ್ಷಿ, ಗುಜರಾತ್, ತೆಲಂಗಾಣ, ಆಂಧ್ರ, ಒರಿಸ್ಸಾ ಸೇರಿದಂತೆ ಬೇರೆ ರಾಜ್ಯಗಳಲ್ಲಿ ಶಾಲೆ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಇನ್ನು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ; ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ: ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ನನ್ನನ್ನು ಬಿಟ್ಟು ಸಂಪುಟ ರಚಿಸಲ್ಲವೆಂಬ ನಂಬಿಕೆ ಇದೆ -ದೆಹಲಿಯಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ

(RUPSA alert that Karnataka government should give permission to open schools otherwise school will start School)