1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಬೇಕು; ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟದಿಂದ ಒತ್ತಾಯ

9 ರಿಂದ 12ನೇ ತರಗತಿ ವರೆಗೆ ಆಫ್​ಲೈನ್ ತರಗತಿ ಪ್ರಾರಂಭಿಸುತ್ತೇವೆ ಎಂದು ರಾಜ್ಯದ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆಮೇಲೆ 1ರಿಂದ 8ರ ವರೆಗೆ ಶಾಲೆಗಳನ್ನು ತೆರೆಯುತ್ತೇವೆ ಎಂದು ಹೇಳಿದ್ದರು.

1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಬೇಕು; ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟದಿಂದ ಒತ್ತಾಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Aug 30, 2021 | 12:22 PM

ಬೆಂಗಳೂರು: ರಾಜ್ಯದಲ್ಲಿ 1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟ ಒತ್ತಾಯಿಸಿದೆ. ಪ್ರೆಸ್ ಕ್ಲಬ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರುಪ್ಸಾ ಕರ್ನಾಟಕ ಅಧ್ಯಕ್ಷ ಹಾಲನೂರು ಲೇಪಾಕ್ಷಿ (Halanur Lepakshi), 1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭ ಮಾಡಬೇಕು. ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದಾರೆ. ತರಗತಿ ಪ್ರಾರಂಭಿಸುತ್ತೇವೆ ಎಂದು ರಾಜ್ಯದ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಇಂದಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಅಂತ ಒತ್ತಾಯಿಸಿದ್ದಾರೆ.

9 ರಿಂದ 12ನೇ ತರಗತಿ ವರೆಗೆ ಆಫ್​ಲೈನ್ ತರಗತಿ ಪ್ರಾರಂಭಿಸುತ್ತೇವೆ ಎಂದು ರಾಜ್ಯದ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆಮೇಲೆ 1ರಿಂದ 8ರ ವರೆಗೆ ಶಾಲೆಗಳನ್ನು ತೆರೆಯುತ್ತೇವೆ ಎಂದು ಹೇಳಿದ್ದರು. ಆದರೆ 6ರಿಂದ 8 ವರೆಗೆ ಮಾತ್ರ ಶಾಲೆ ಆರಂಭಿಸುವುದಕ್ಕೆ ಬಗ್ಗೆ ಚಿಂತನೆ ನಡೆದಿದೆ. ಇಂದು ನಡೆಯುವ ಸಭೆಯಲ್ಲಿ 1ರಿಂದ 8ರ ವರೆಗೆ ಶಾಲೆಗಳನ್ನು ಪುನಾರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕೆಂದು ಹಾಲನೂರು ಲೇಪಾಕ್ಷಿ ಹೇಳಿದ್ದಾರೆ.

ಶಾಲೆ ಆರಂಭವಾಗದಿದ್ದರೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಬಾಲಕಾರ್ಮಿಕ, ಕೃಷಿ ಚಟುವಟಿಕೆಗಳಿಗೆ ಸೇರಿಕೊಳ್ಳುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಶಾಲೆಗಳು ಓಪನ್ ಆಗಿದೆ. ನಮ್ಮ ರಾಜ್ಯದಲ್ಲೂ ಶಾಲೆ ಆರಂಭವಾಗಬೇಕು. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಜಾಸ್ತಿ ಇರುತ್ತದೆ. ಎಲ್ಲ ಮಕ್ಕಳಿಗೂ ಆಫ್​ಲೈನ್ ಪಾಠ ಕೇಳಲು ಅವಕಾಶ ನೀಡಬೇಕು. ಕೇವಲ 6, 7, 8ನೇ ತರಗತಿ ಮಾತ್ರ ತೆರೆಯುವ ನಿರ್ಧಾರ ಮಾಡಬಾರದು ಎಂದು ಹಾಲನೂರು ಲೇಪಾಕ್ಷಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

ಮಹತ್ವದ ಸಭೆ ಕಳೆದ ವಾರದಿಂದ ಕರ್ನಾಟಕದಲ್ಲಿ 9 ರಿಂದ 12ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಬಹುತೇಕ ಭಾಗಗಳಲ್ಲಿ ಉತ್ತಮ ಸ್ಪಂದನೆಯೂ ದೊರೆತಿದೆ. ಈಗ ಅದರ ಬೆನ್ನಲ್ಲೇ 1ರಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ಚಿಂತನೆ ನಡೆಸಲಾಗಿದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ತಜ್ಞರು ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ

ಬೆಳಗಾವಿಯಲ್ಲಿ ಒಂದೂವರೆ ವರ್ಷದೊಳಗೆ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣ: ಗೋವಿಂದ ಕಾರಜೋಳ

ಶಾಲೆ ಯಾವಾಗ ಆರಂಭ ಮಾಡುತ್ತೀರಾ? ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ಗೆ ಬಾಲಕನ ಪ್ರಶ್ನೆ; ವಿಡಿಯೋ ವೈರಲ್

(RUPSA urged Karnataka government to start school from 1st to 8th class)

Published On - 12:20 pm, Mon, 30 August 21