99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಸಿಎಂ ಕಛೇರಿಗೆ ಅನುಮೋದನೆ ಪಡೆಯಲು ಕಳಿಸಿದ್ದ ಪ್ರತಿ ವರ್ಗಾವಣೆಗೂ ಮೊದಲೇ ಸೋರಿಕೆ ಬೆನ್ನಲೆ, 99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯಿಂದ ಬುಧವಾರ ಆದೇಶ ಹೊರಡಿಸಲಾಗಿದೆ. ಜ್ಯೇಷ್ಠತಾ ಪಟ್ಟಿ ಅಂತಿಮಗೊಳ್ಳದೇ ಇರುವುದರಿಂದ ಭಡ್ತಿ ಮತ್ತು ವರ್ಗಾವಣೆ ಪ್ರಕ್ರಿಯೆಗಳಲ್ಲಿ ಗೊಂದಗಳು ಉಂಟಾಗಿವೆ.

99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 06, 2023 | 4:17 PM

ಬೆಂಗಳೂರು, ಸೆಪ್ಟೆಂಬರ್​ 6: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಸಿಎಂ ಕಛೇರಿಗೆ ಅನುಮೋದನೆ ಪಡೆಯಲು ಕಳಿಸಿದ್ದ ಪ್ರತಿ ವರ್ಗಾವಣೆಗೂ ಮೊದಲೇ ಸೋರಿಕೆ ಬೆನ್ನಲೆ, 99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (pdo) ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯಿಂದ ಬುಧವಾರ ಆದೇಶ ಹೊರಡಿಸಲಾಗಿದೆ. ಪಿಡಿಒ ಹುದ್ದೆಗಳು ಸೃಷ್ಟಿಯಾಗಿ 13 ವರ್ಷ ಕಳೆದರೂ ಯಾವುದೇ ಜ್ಯೇಷ್ಠತಾ ಪಟ್ಟಿ ಅಂತಿಮಗೊಳ್ಳದೇ ಇರುವುದರಿಂದ ಭಡ್ತಿ ಮತ್ತು ವರ್ಗಾವಣೆ ಪ್ರಕ್ರಿಯೆಗಳಲ್ಲಿ ಗೊಂದಗಳು ಉಂಟಾಗಿವೆ.

ಸರ್ಕಾರದ ಅನುಮೋದನೆ ಆಗುವುದಕ್ಕೆ ಮೊದಲೇ ವಾಟ್ಸಪ್​ನಲ್ಲಿ ವರ್ಗಾವಣೆ ಪ್ರತಿ ಹರಿಬಿಡಲಾಗಿತ್ತು. ಸರ್ಕಾರದ ಇ ಆಫೀಸ್​ನಲ್ಲಿ ಇದ್ದ ಪ್ರತಿ ಹ್ಯಾಕ್ ಮಾಡಲಾಗಿದೆ ಎಂದು ದೂರು ನೀಡಲಾಗಿತ್ತು. ಪಿಡಿಒಗಳ ವರ್ಗಾವಣೆ ಆದೇಶ ಆಗುವುದಕ್ಕೂ ಮೊದಲೇ ಕಳ್ಳತನ ಅರೋಪ ಇತ್ತು. ಕೇಂದ್ರ ವಿಭಾಗ ಸಿಇ ಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪ್ಪಾ ಮಗ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಗ ಶ್ರೀಧರ್, ಅಪ್ಪ ನಾರಾಯಣ್​​ ಸದ್ಯ ಪೊಲೀಸರ ವಶದಲ್ಲಿದ್ದಾರೆ.

ಇದನ್ನೂ ಓದಿ: ಅಪ್ಪ-ಮಗ ಅರೆಸ್ಟ್​: ಸರ್ಕಾರಿ ಕಂಪ್ಯೂಟರ್​​ನಲ್ಲಿದ್ದ ದಾಖಲೆಯನ್ನು ವಾಟ್ಸಪ್ ಮೂಲಕ ಎಲ್ಲರಿಗೂ ಕಳಿಸಿದ್ದ ಅರೋಪಿಗಳು!

ಶ್ರೀಧರ್ ಆರ್​ಡಿಪಿಆರ್​ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತಿದ್ದ. ಅಪ್ಪ ನಾರಾಯಣ್ ಸಹ ಸರ್ಕಾರಿ ನೌಕರಾಗಿದ್ದಾರೆ. ಸರ್ಕಾರಿ ಕಂಪ್ಯೂಟರ್​​ನಲ್ಲಿ ಇದ್ದ ದಾಖಲಾತಿಯನ್ನು ವಾಟ್ಸಪ್​ಗೆ ಹಾಕಿಕೊಂಡು ಎಲ್ಲರಿಗೂ ಕಳಿಸಿದ್ದಾರೆ. ಕೇಂದ್ರ ವಿಭಾಗ ಸಿಇಎನ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಬೆಂಗಳೂರು: 10 ಐಪಿಎಸ್​​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ವರ್ಗಾವಣೆ ಪರ್ವ ನಡೆಯುತ್ತಿದ್ದು, ಕಳೆದ ಜೂನ್​ನಲ್ಲಿ 11 ಐಎಎಸ್​ ಅಧಿಕಾರಿಗಳನ್ನು ಹಾಗೂ ಜುಲೈ 1 ರಂದು 14 ಐಎಫ್​ಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಅದೇ ರೀತಿಯಾಗಿ ಇತ್ತೀಚೆಗೆ ಬರೊಬ್ಬರಿ 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ (IPS Officers Transfer) ಸರ್ಕಾರ ಆದೇಶ ಹೊರಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:07 pm, Wed, 6 September 23

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ