AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗಾಗಿ ‘ಋತುತಾರೆ’ ಯೋಜನೆ: ಆರೋಗ್ಯ ಸಚಿವ ಯು.ಟಿ.ಖಾದರ್ ಘೋಷಣೆ

ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಮೆನೋಪಾಸ್ (ಋತುಬಂಧ) ಸಮಸ್ಯೆಗಳು ಹಾಗೂ ಮಾನಸಿಕ ಒತ್ತಡ ನಿರ್ವಹಣೆಗಾಗಿ ಆರೋಗ್ಯ ಇಲಾಖೆಯು 'ಋತುತಾರೆ' ಎಂಬ ನೂತನ ಯೋಜನೆಯನ್ನು ಘೋಷಿಸಿದೆ. ನಟಿ ರಮ್ಯಾ ಈ ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಆರೋಗ್ಯ ಸೌಧದಲ್ಲಿ ನಡೆದ ಪ್ರಮುಖ ಸಂವಾದದ ನಂತರ ಪ್ರಕಟಿಸಲಾದ ಈ ಯೋಜನೆಯ ಮುಖ್ಯ ವಿವರಗಳು ಇಲ್ಲಿವೆ.

ಮಹಿಳೆಯರಿಗಾಗಿ 'ಋತುತಾರೆ' ಯೋಜನೆ: ಆರೋಗ್ಯ ಸಚಿವ ಯು.ಟಿ.ಖಾದರ್ ಘೋಷಣೆ
ಮಹಿಳೆಯರಿಗಾಗಿ 'ಋತುತಾರೆ' ಯೋಜನೆImage Credit source: Getty Images
ವಿನಯ್​ ಕಾಶಪ್ಪನವರ್​
| Edited By: |

Updated on:Aug 04, 2026 | 7:45 PM

Share

ಮುಖ್ಯಾಂಶಗಳು

  • ಮಹಿಳೆಯರಿಗಾಗಿ 'ಋತುತಾರೆ' ಎಂಬ ಹೊಸ ಯೋಜನೆ
  • ಯೋಜನೆ ಬಗ್ಗೆ ಘೋಷಿಸಿದ ಆರೋಗ್ಯ ಸಚಿವ ಖಾದರ್​​
  • ನಟಿ ರಮ್ಯಾ ಈ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್

ಬೆಂಗಳೂರು, ಆಗಸ್ಟ್​​ 04: ಮಹಿಳೆಯರಿಗಾಗಿ ‘ಋತುತಾರೆ’ ಎಂಬ ಹೊಸ ಯೋಜನೆಯೊಂದನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಯು.ಟಿ. ಖಾದರ್​ ಘೋಷಣೆ ಮಾಡಿದ್ದಾರೆ. ಮಹಿಳೆಯರು ಮಾನಸಿಕ ಒತ್ತಡ, ಸಮಸ್ಯೆ ಅನಭವಿಸುತ್ತಿದ್ದಾರೆ. ಹೀಗಾಗಿ ಮೆನೋಪಾಸ್ ಸಂಬಂಧ ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷೆತೆಯಲ್ಲಿ ಸಮಿತಿ ರಚಿಸಿದ್ದೇವೆ. ನಟಿ ರಮ್ಯಾ ಈ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಿರಲಿದ್ದಾರೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ಹೋಗಿ ಮಹಿಳೆಯರ ಡೇಟಾ ತೆಗೆದುಕೊಳ್ಳಲಿದ್ದು, ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೆನೋಪಾಸ್ ಕುರಿತು ಯಾವೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ತಿಳಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.

ಮಹಿಳೆಯರನ್ನು ಕಾಡುತ್ತಿರುವ ಮೆನೋಪಾಸ್ ಸಮಸ್ಯೆ ಕುರಿತು ಸೂಕ್ತ ಕ್ರಮಕ್ಕೆ ನಟಿ ರಮ್ಯಾ ಒತ್ತಾಯಿಸಿದ್ದರು. ಈ ಹಿನ್ನಲೆ ಆರೋಗ್ಯ ಸಚಿವ ಯು.ಟಿ. ಖಾದರ್ ಜೊತೆ ನಟಿ ರಮ್ಯ ಹಾಗೂ ಇತರೆ ಪರಿಣಿತರೊಂದಿಗೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಮಹತ್ವದ ಸಂವಾದ ನಡೆಸಲಾಗಿದ್ದು, ಎಲ್ಲರ ಸಲಹೆ ಮತ್ತು ಸೂಚನೆಗಳನ್ನು ಆಲಿಸಿದ ಬಳಿಕ ಸರ್ಕಾರ ಈ ತೀರ್ಮಾನ ಮಾಡಿರೋದಾಗಿ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಪದೇಪದೇ ಹುಳಿ ತೇಗು ಬರುತ್ತಿದ್ದರೆ ಈ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ

ಮಹಿಳಾ ತಜ್ಞರು ಹೇಳಿದ್ದೇನು?

ಮಹಿಳೆಯರಿಗೆ ಋತುಬಂಧ ಯಾವ ಸಮಯದಲ್ಲಿ ಬಂದಿದೆ? ಯಾವ ರೀತಿ ಬಂದಿದೆ? ಅನ್ನೋದನ್ನ ತಿಳಿದುಕೊಳ್ಳಬೇಕು. ನಾರ್ಮಲ್ ಹಾಗೂ ಸರ್ಜಿಕಲ್ ಮೆನೋಪಾಸ್ ಎಂಬ ಎರಡು ವಿಭಾಗಗಳಿವೆ. ಮೆನೋ ಪಾಸ್ ಸಮಯದಲ್ಲಿ ಹೃದಯ ಸಂಬಂಧಿ, ಮೂಳೆ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಇದೆ. ಹೀಗಾಗಿ ಸರ್ಜಿಕಲ್ ಆಪರೇಷನ್ ಆದವರು ಹೆಚ್ಚಿನ ಗಮನ ಹರಿಸಬೇಕು. ನಾರ್ಮಲ್ ಮೆನೋಪಾಸ್ ಸಮಯದಲ್ಲಿ ತೊಂದರೆಯಾಗೋರಿಗೆ ಆಹಾರದಲ್ಲೇ ಸರಿಮಾಡಬಹುದು ಎಂದು ಮಹಿಳಾ ತಜ್ಞೆ ಜೋಸ್ನಾ ತಿಳಿಸಿದ್ದಾರೆ.

‘ಬ್ರ್ಯಾಂಡ್​​ ಅಂಬಾಸಿಡರ್​​ ಮಾಡಿರುವುದು ಖುಷಿ ಇದೆ’

ಇನ್ನು ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ, ಬೇರೆ ದೇಶಗಳಿಗೆ ಹೋಲಿಸಿದ್ರೆ ಭಾರತದಲ್ಲಿ ಮೆನೋಪಾಸ್ ಬೇಗ ಕಾಣಿಸಿಕೊಳ್ಳುತ್ತೆ. ಸಿಟಿಯಲ್ಲಿ ಅತಿ ಹೆಚ್ಚಿನ ಮಹಿಳೆಯರು ಮೆನೋಪಾಸ್‌ ಸಮಯದಲ್ಲಿ ಸಮಸ್ಯೆಯಿಂದ ಬಳಲುತ್ತಾರೆ. ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತೆ? ಮತ್ತು ಟ್ರೀಟ್‌ಮೆಂಟ್‌ ಏನೆಂಬ ಬಗ್ಗೆ ಸಿಟಿ ಭಾಗದವರಿಗೂ ಹೆಚ್ಚಾಗಿ ಗೊತ್ತಿಲ್ಲ. ಗ್ರಾಮೀಣ ಭಾಗದವರಿಗಂತೂ ಇದರ ಬಗ್ಗೆ ಮಾಹಿತಿ ಅತಿ ಕಡಿಮೆ ಇದೆ. ಹೀಗಾಗಿ ಇದರ ಬಗ್ಗೆ ಗೃಹಾರೋಗ್ಯ ಪುಸ್ತಕದಲ್ಲಿ ಸೇರಿಸಿ ಅಂತ ಮನವಿ ಇಟ್ಟುಕೊಂಡು ಬಂದಿದ್ದೆವು. ಆದರೆ ಘೋಷಿಸಿರುವ ಯೋಜನೆಗೆ ಸರ್ಕಾರ ತನ್ನನ್ನೇ ಬ್ರ್ಯಾಂಡ್​​ ಅಂಬಾಸಿಡರ್​​ ಮಾಡಿರುವುದು ಖುಷಿ ಇದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:34 pm, Tue, 4 August 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್