ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು, ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್
Saalumarada Thimakka hospitalized ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹಾಸನದಿಂದ ಕರೆದುಕೊಂಡು ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು, (ಅಕ್ಟೋಬರ್ 04): ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(Salumarada Timmakka) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ಸಮಸ್ಯೆಯಾಗಿದ್ದರಿಂದ ಅವರನ್ನು ನಿನ್ನೆ(ಅ.03)) ಹಾಸನದಿಂದ ಕರೆದುಕೊಂಡು ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಬಗ್ಗೆ ತಿಮ್ಮಕ್ಕ ದತ್ತು ಪುತ್ರ ಬಳ್ಳೂರು ಉಮೇಶ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಳ್ಳೂರು ಉಮೇಶ್, ಬೆಂಗಳೂರಿನಿಂದ ತೆರಳಿ ಹಾಸನ ಜಿಲ್ಲೆಯ ಬೇಲೂರಿನಲ್ಲಿ ವಾಸವಿದ್ದರು. ಬೇಲೂರು ಮಲೆನಾಡು ಪ್ರದೇಶ ಆಗಿರುವುದರಿಂದ ಶೀತ ಜಾಸ್ತಿಯಾಗಿದೆ. ಕಳೆದ ಮೂರು ದಿನಗಳಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿತ್ತು. ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕವೂ ಕಡಿಮೆಯಾಗಿರಲಿಲ್ಲ ನಿನ್ನೆ(ಅ.03) ಉಸಿರಾಟದ ಸಮಸ್ಯೆ ಹೆಚ್ಚಳ ಹಿನ್ನೆಲೆ ಬೆಂಗಳೂರಿಗೆ ಕರೆತಂದಿದ್ದೇವೆ. ಡಾ.ರವೀಂದ್ರ ಮೆಹ್ತಾ ತಂಡ ಸಾಲುಮರದ ತಿಮ್ಮಕ್ಕರಿಗೆ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ಮರಳಿದ ಸಾಲುಮರದ ತಿಮ್ಮಕ್ಕ, ಇಬ್ಬರು ನರ್ಸ್‌ಗಳ ನಿಯೋಜನೆ
ಇತ್ತೀಚೆಗಷ್ಟೇ ತಿಮ್ಮಕ್ಕ ಬೆಂಗಳೂರಿನ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಹಾಗಾಗಿ ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸಾಲುಮರದ ತಿಮ್ಮಕ್ಕ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಳ್ಳೂರಿನರುವ ನಿವಾಸದಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು. ಆ ಸಂದರ್ಭದಲ್ಲಿ ಸಹ ಮೈ ಕೈ ನೋವು ಹಾಗೂ ಸುಸ್ತು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಲ್ಲದೇ ತಿಮ್ಮಕ್ಕ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ಹಾಸನ ಜಿಲ್ಲಾಡಳಿತ ಇಬ್ಬರು ನರ್ಸ್ಗಳನ್ನು ನಿಯೋಜನೆ ಮಾಡಿತ್ತು. ಆದ್ರೆ, ತಿಮ್ಮಕ್ಕ ಅವರಿಗೆ ಉಸಿರಾಟದ ಸಮಸ್ಯೆಯಾಗಿದ್ದರಿಂದ ಬಳ್ಳೂರಿನ ನಿವಾಸದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:12 am, Wed, 4 October 23