
ಬೆಂಗಳೂರು, ನವೆಂಬರ್ 14: ವೃಕ್ಷಮಾತೆ ಅಂತಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ಪಡೆದಿದ್ದ ಸಾಲುಮರದ ತಿಮ್ಮಕ್ಕ (Saalumarada Thimmakka) ಇನ್ನು ನೆನೆಪು ಮಾತ್ರ. ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಹಲವು ಗಣ್ಯರು ಮೃತರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ನಾಳೆ ಜ್ಞಾನಭಾರತಿ ಬಳಿ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಯಾವುದೇ ಸರ್ಕಾರಿ ರಜೆ ಇರುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಆ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.
ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ಅಂತಿಮ ದರ್ಶನಕ್ಕೆ ಹುಲಿಕಲ್ ಮತ್ತು ಬೇಲೂರಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆಗೆ ಎರಡು-ಮೂರು ಸ್ಥಳಗಳನ್ನು ಗೊತ್ತು ಮಾಡಲಾಗಿತ್ತು. ಆದರೆ ಯಾವುದು ನಿಗದಿಯಾಗಿರಲಿಲ್ಲ. ಇದೀಗ ನಾಳೆ ಮಧ್ಯಾಹ್ನ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಆ ಮೂಲಕ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂಬ ವದಂತಿಗೆ ತೆರೆ ಎಳೆಯಲಾಗಿದೆ.
ಇನ್ನು ಸಾಲುಮರದ ತಿಮ್ಮಕ್ಕ ಅವರ ನಿಧನ ಹಿನ್ನೆಲೆ ನಾಳೆ ಶಾಲಾ-ಕಾಲೇಜ್ ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶ ಪತ್ರವೊಂದು ವೈರಲ್ ಆಗಿತ್ತು. ಆದರೆ ಅದು ನಕಲಿ ಆದೇಶ ಪತ್ರ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: ಎರಡ್ಮೂರು ಜಿಲ್ಲೆಯಲ್ಲಿ ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನ: ಅಂತ್ಯಕ್ರಿಯದ್ದೇ ಗೊಂದಲ
ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆಯೇ ಹೊರತು ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ ಎಂಬುವುದು ಸುಳ್ಳು ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ: Saalumarada Thimmakka Death: ತಿಮ್ಮಕ್ಕ ಸಾಲುಮರದ ತಿಮ್ಮಕ್ಕನಾಗಿದ್ದು ಹೇಗೆ ಗೊತ್ತಾ?
ಅನಕ್ಷರಸ್ಥೆಯಾಗಿದ್ದ ತಿಮ್ಮಕ್ಕನವರು ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಅಪ್ರತಿಮ ಪರಿಸರವಾದಿ. ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದ್ದರ ಹಿನ್ನೆಲೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳೂ ಅವರು ಭಾಜನರಾಗಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:47 pm, Fri, 14 November 25