AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸಫಾರಿ ಬಂದ್​ನಿಂದ ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ ಪ್ರವಾಸಿಗರ ದಂಡು! ಕರ್ನಾಟಕಕ್ಕಾಗುವ ನಷ್ಟವೆಷ್ಟು ಗೊತ್ತಾ?

ಕರ್ನಾಟಕದಲ್ಲಿ ಸಫಾರಿ ನಿಷೇಧದಿಂದಾಗಿ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಭಾರಿ ನಷ್ಟವಾಗಿದೆ. ಹುಲಿ-ಚಿರತೆ ದಾಳಿ ಹೆಚ್ಚಳದ ಕಾರಣ ತಾತ್ಕಾಲಿಕವಾಗಿ ಬಂದ್ ಮಾಡಲಾದ ಸಫಾರಿಗಳಿಂದ ದಿನಕ್ಕೆಕೋಟಿಗೂ ಹೆಚ್ಚು ಆರ್ಥಿಕ ನಷ್ಟವಾಗುತ್ತಿದೆ. ಇದಲ್ಲದೆ ಪ್ರವಾಸಿಗರೂ ಸಹ ಪಕ್ಕದ ರಾಜ್ಯಗಳಿಗೆ ಹೋಗುತ್ತಿರುವುದು ಪ್ರವಾಸೋದ್ಯಮದ ಮೇಲೆ ಇನ್ನಷ್ಟು ಹೊಡೆತ ಕೊಟ್ಟಿದೆ.

ರಾಜ್ಯದಲ್ಲಿ ಸಫಾರಿ ಬಂದ್​ನಿಂದ ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ ಪ್ರವಾಸಿಗರ ದಂಡು! ಕರ್ನಾಟಕಕ್ಕಾಗುವ ನಷ್ಟವೆಷ್ಟು ಗೊತ್ತಾ?
ಕರ್ನಾಟಕದಲ್ಲಿ ಸಫಾರಿ ಬಂದ್​ನಿಂದ ದಿನಕ್ಕೆ 3 ಕೋಟಿ ನಷ್ಟ!
ಭಾವನಾ ಹೆಗಡೆ
|

Updated on: Feb 16, 2026 | 11:25 AM

Share

ಬೆಂಗಳೂರು, ಫೆಬ್​ರವರಿ 16: ರಾಜ್ಯದಲ್ಲಿ ಸಫಾರಿಗೆ (Safari) ತಾತ್ಕಾಲಿಕ ನಿಷೇಧ ಹೇರಿರುವ ಸರ್ಕಾರದ ಕ್ರಮ ಇದೀಗ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ನಾಗರಹೊಳ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿ ಬಂದ್ ಮಾಡಿರುವುದರಿಂದ ಸ್ಥಳೀಯರ ಜೀವನೋಪಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಸಫಾರಿ ಬಂದ್​ನಿಂದ ಕೇರಳ, ತಮಿಳುನಾಡಿಗೆ ಲಾಭ!

ಹುಲಿ ಹಾಗೂ ಚಿರತೆ ದಾಳಿಯಿಂದ ರಾಜ್ಯದ ಹಲವೆಡೆ ಸಾವು ನೋವುಗಳು ಹೆಚ್ಚಾದ ಹಿನ್ನೆಲೆ ಸರ್ಕಾರ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡುವ ಕ್ರಮ ಕೈಗೊಂಡಿತ್ತು. ಡಿಸೆಂಬರ್‌ನಲ್ಲಿ ಹಂತ ಹಂತವಾಗಿ ಸಫಾರಿ ಪುನರಾರಂಭ ಮಾಡುವುದಾಗಿ ತಿಳಿಸಿದರೂ, ಅಂತಿಮ ತೀರ್ಮಾನ ಇನ್ನೂ ಹೊರಬಿದ್ದಿಲ್ಲ. ಕರ್ನಾಟಕ ಇಕೋ-ಟೂರಿಸಂ ರಿಸಾರ್ಟ್ಸ್ ಅಸೋಸಿಯೇಶನ್ (KETRA) ಸದಸ್ಯರ ಪ್ರಕಾರ, ರಾಜ್ಯದಲ್ಲಿ ಸಫಾರಿ ಸ್ಥಗಿತದಿಂದ ಪಕ್ಕದ ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಲಾಭವಾಗಿದೆ. ರಣಥಂಬೋರ್ ಹಾಗೂ ಕಾರ್ಬೆಟ್ ಸೇರಿದಂತೆ ಇತರ ರಾಜ್ಯಗಳ ಉದ್ಯಾನವನಗಳಲ್ಲಿ ಸಫಾರಿ ಬುಕ್ಕಿಂಗ್ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.

ಪ್ರವಾಸೋದ್ಯಮದ ಮೇಲೆ ಅವಲಂಬಿತರಾಗಿದ್ದವರ ಜೀವನಕ್ಕೆ ಹೊಡೆತ

ಬಂಡೀಪುರ-ನಾಗರಹೊಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 35 ರಿಸಾರ್ಟ್ಗಳು KETRAಗೆ ನೋಂದಾಯಿತವಾಗಿದ್ದು, ದಿನಕ್ಕೆ ಸರಾಸರಿ 3 ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಂಘದ ಸದಸ್ಯ ಥಾಮಸ್ ಇಮ್ಮಾನುಯೇಲ್ ರಾಮಾಪುರಂ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್​ಗೆ’ ತಿಳಿಸಿದ್ದಾರೆ. ಈ ವರ್ಷ ಅನೇಕ ರಿಸಾರ್ಟ್ಗಳಲ್ಲಿ ಶೇ 50ರಿಂದ 80ರವರೆಗೆ ವಾಸ್ತವ್ಯ ಪ್ರಮಾಣ ಕುಸಿದಿದೆ ಎನ್ನಲಾಗಿದೆ. ಸುಮಾರು 8,000 ಜನರು ಪರಿಸರ ಪ್ರವಾಸೋದ್ಯಮದ ಮೇಲೆ ಅವಲಂಬಿತರಾಗಿದ್ದು, ಸಫಾರಿಗೆ ಬ್ರೇಕ್ ಬಿದ್ದಿರುವುದು ಇವರ ಜೀವನದ ಮೇಲೆ ಪರಿಣಾಮ ಬಿದ್ದಿದೆ.

ಇದನ್ನೂ ಓದಿ ವನ್ಯಜೀವಿ ಸಫಾರಿ ಬಂದ್​​ ಎಫೆಕ್ಟ್​​: ಕೋಟಿ ಕೋಟಿ ಆದಾಯ ನಷ್ಟ; KETRA ಆತಂಕ

ಪ್ರವಾಸೋದ್ಯಮ ಸಚಿವರಿಗೆ KETRA ಪತ್ರ

ಬಂಡೀಪುರ ಮತ್ತು ನಾಗರಹೊಳೆಗಳಲ್ಲಿ ಸಫಾರಿಗಳ ಪುನರಾರಂಭಕ್ಕೆ ಒತ್ತಾಯಿಸಿ ಕರ್ನಾಟಕ ಇಕೋ-ಟೂರಿಸಂ ರೆಸಾರ್ಟ್ಸ್ ಅಸೋಸಿಯೇಷನ್ (KETRA) ಪ್ರವಾಸೋದ್ಯಮ ಸಚಿವರಿಗೆ ಪತ್ರ ಬರೆದಿತ್ತು. ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಇರುವ ಪ್ರವಾಸೋದ್ಯಮದ ಉಚ್ಚ ಕಾಲಾವಧಿಯಲ್ಲಿ ಈ ಕ್ಷೇತ್ರವು ಕೋವಿಡ್-19 ಸಂದರ್ಭ ಉಂಟಾಗಿದ್ದ ಸ್ಥಿತಿಯನ್ನೇ ಅನುಭವಿಸುತ್ತಿದೆ. ಪ್ರಸ್ತುತವಾಗಿ ಸಫಾರಿ ಸ್ಥಗಿತಕ್ಕೆ ನೀಡಲಾಗುತ್ತಿರುವ ಕಾರಣಗಳು ವೈಜ್ಞಾನಿಕ ಅಥವಾ ಪ್ರಾಯೋಗಿಕವಾಗಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಸಫಾರಿ ಸ್ಥಗಿತವಾಗಿರುವುದರಿಂದ ಉಂಟಾಗುತ್ತಿರುವ ಆರ್ಥಿಕ ಹಾನಿ ಮತ್ತು ಉದ್ಯೋಗ ಸಮಸ್ಯೆಗಳನ್ನು ಮನಗಂಡ ಸರ್ಕಾರ ಅಗತ್ಯವಿರುವ ಹೆಚ್ಚುವರಿ ಸುರಕ್ಷತಾ ಕ್ರಮಗಳೊಂದಿಗೆ ಸಫಾರಿಯನ್ನ ಮತ್ತೆ ಆರಂಭಿಸಬೇಕೆಂದು ಆಗ್ರಹಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ