ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ: ಬಟನ್ ಒತ್ತಿದರೆ ಪೊಲೀಸ್​ ಹಾಜರ್​

ವಿಧಾನಪರಿಷತ್​ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್​, ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಮಾಡಿದ್ದೇವೆ. ನಗರದ ನಿಗದಿತ ಪ್ರದೇಶದಲ್ಲಿ ಅಲಾರಾಂ ಇರಲಿದೆ. ಅಲಾರಾಂ ಬಟನ್ ಒತ್ತಿದರೆ ತಕ್ಷಣ ಪೊಲೀಸರು ಸ್ಥಳಕ್ಕೆ ಬರುತ್ತಾರೆ ಎಂದು ಉತ್ತರಿಸಿದ್ದಾರೆ. ಅಪರಾಧಿಗಳನ್ನು ಹಿಡಿಯಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಕೂಡ ಬಳಕೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ: ಬಟನ್ ಒತ್ತಿದರೆ ಪೊಲೀಸ್​ ಹಾಜರ್​
ಗೃಹ ಸಚಿವ ಡಾ.ಪರಮೇಶ್ವರ್
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Feb 23, 2024 | 11:39 AM

ಬೆಂಗಳೂರು, ಫೆಬ್ರವರಿ 23: ಮಹಿಳೆಯರ ಸುರಕ್ಷತೆಗೆ ನಗರದ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ (Safety island system) ಜಾರಿ ಮಾಡಿದ್ದೇವೆ. ನಗರದ ನಿಗದಿತ ಪ್ರದೇಶದಲ್ಲಿ ಅಲಾರಾಂ ಇರಲಿದೆ. ಬಟನ್ ಒತ್ತಿದರೆ ತಕ್ಷಣ ಪೊಲೀಸರು ಸ್ಥಳಕ್ಕೆ ಬರುತ್ತಾರೆ ಎಂದು ಗೃಹ ಸಚಿವ ಡಾ.ಪರಮೇಶ್ವರ್​ ಹೇಳಿದ್ದಾರೆ. ವಿಧಾನಪರಿಷತ್​ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಅವರು, ಅಪರಾಧಿಗಳನ್ನು ಹಿಡಿಯಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಕೂಡ ಬಳಕೆ ಮಾಡುತ್ತಿದ್ದೇವೆ. ಪೊಲೀಸರ ಪ್ರತಿಕ್ರಿಯೆ ಸಮಯ ಕೂಡ ವೇಗವಾಗಿ ಮಾಡುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ.

ಏನಿದು ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ?

ಸೇಫ್ಟಿ ಐಲ್ಯಾಂಡ್ ವ್ಯವಸ್ಥೆಯನ್ನು ಬೆಂಗಳೂರಿನ 30 ಕಡೆಗಳಲ್ಲಿ ಸ್ಥಾಪಿಸಲಾಗಿದೆ. ನೀಲಿ ಬಣ್ಣದಲ್ಲಿರುವ ಟೆಲಿಫೋನ್ ಬೂತ್‌ನಂತಹ ರಚನೆ ಹೊಂದಿರುವ ಸೇಫ್ಟಿ ಐಲ್ಯಾಂಡ್​​ ಯಾರಾದರೂ ಸಂಕಷ್ಟದಲ್ಲಿರುವಾಗ ಅಥವಾ ಅವರ ಮೊಬೈಲ್ ಫೋನ್‌ ಸಂಪರ್ಕ ಸಾಧ್ಯವಾಗದಿದ್ದಾಗ ಅವರು ಹತ್ತಿರದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಲು ಈ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆಯನ್ನು ಬಳಸಬಹುದಾಗಿದೆ.

ಇದನ್ನೂ ಓದಿ: Bengaluru News: ಸೇಫ್ಟಿ ಐಲ್ಯಾಂಡ್​ನ ಮೊದಲ ಸಕ್ಸಸ್ ಸ್ಟೋರಿ ಹೇಳಿದ ಕಮಿಷನರ್​​ ದಯಾನಂದ​

ಪ್ರತಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಿ ಸಿಸಿಟಿವಿ ಹೊಂದಿದ್ದು, ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯ ಬಗ್ಗೆ ನೈಜ ಸಮಯದ ಮಾಹಿತಿಯನ್ನು ನೀಡುತ್ತದೆ.

ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಸುವುದು ಹೇಗೆ?

ಬಳಕೆದಾರರು ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಿ ಬಂದು SOS ಬಟನ್ ಒತ್ತಬೇಕು. ಇದು ಸಮೀಪದ ನಿಯಂತ್ರಣ ಕೊಠಡಿಗೆ ಸಂಪರ್ಕ ಕಲ್ಪಿಸುವುದರೊಂದಿಗೆ ಕರೆ ಮಾಡಿದ ವ್ಯಕ್ತಿಯ ಪರಿಸ್ಥಿತಿಯನ್ನು ತಿಳಿಸುತ್ತದೆ. ಪೊಲೀಸ್ ಸಿಬ್ಬಂದಿ ಸಾಧ್ಯವಾದಷ್ಟು ಬೇಗ ಸ್ಥಳಕ್ಕೆ ಆಗಮಿಸುತ್ತಾರೆ. ತೊಂದರೆಯಲ್ಲಿರುವ ವ್ಯಕ್ತಿಯು ಮೊಬೈಲ್ ಫೋನ್ ಬಳಸುವ ಸ್ಥಿತಿಯಲ್ಲಿಲ್ಲದಿದ್ದರೂ ಸಹ ಪೊಲೀಸರನ್ನು ತಲುಪುವ ರೀತಿಯಲ್ಲಿ ಇದನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Bengaluru News: ಜನರ ಸುರಕ್ಷತೆಗಾಗಿ ಬಂದಿದೆ ಸೇಫ್ಟಿ ಐಲ್ಯಾಂಡ್, ಏನಿದರ ವಿಶೇಷತೆ ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ಎಲ್ಲಾ ರೀತಿಯ ತುರ್ತು ಪರಿಸ್ಥಿತಿಗಳಿಗಾಗಿ ನಗರ ಪೊಲೀಸರು ಈಗಾಗಲೇ ತುರ್ತು ಟೋಲ್ ಫ್ರೀ ಸಂಖ್ಯೆ 112 ಅನ್ನು ನಿರ್ವಹಿಸುತ್ತಿದ್ದಾರೆ. ಆದಾಗ್ಯೂ, ಐಟಿ ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಸಾರ್ವಜನಿಕರ ಸುರಕ್ಷತೆಗಾಗಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಹೆಚ್ಚುವರಿ ರಸ್ತೆ ಸಾಧನಗಳಾಗಿವೆ ಎಂದು ಹೇಳಲಾಗುತ್ತದೆ. ವರದಿಗಳ ಪ್ರಕಾರ, ಬೆಂಗಳೂರು ಪೊಲೀಸರು ಈ ಸಾಧನಗಳನ್ನು ಸ್ಥಾಪಿಸಿದಾಗಿನಿಂದ ಯಾವುದೇ ತೊಂದರೆಯ ಕರೆಗಳನ್ನು ಸ್ವೀಕರಿಸಿಲ್ಲ.

ಸೇಫ್ ಸಿಟಿ ಪ್ರಾಜೆಕ್ಟ್ ಅಡಿಯಲ್ಲಿ ಸೇಫ್ಟಿ ಐಲ್ಯಾಂಡ್ ಹಾಗೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ನಗರದ ವಿವಿಧ ಭಾಗದಲ್ಲಿ ಸೇಫ್ಟಿ ಐಲ್ಯಾಂಡ್ ಸ್ಥಾಪಿಸಲಾಗಿದೆ. ಕ್ಯಾಮೆರಾ ಮೂಲಕ ಹಾಗೂ ಮಾತನಾಡಿ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಲಾಗುತ್ತೆ. ಇದನ್ನು ಜಾರಿಗೆ ತಂದ ಮೇಲೆ ಮೊದಲ ಬಾರಿಗೆ ಓರ್ವ ವಿದೇಶಿ ಪ್ರಜೆಗೆ ಸಹಾಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:22 am, Fri, 23 February 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್