Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್ ಆತ್ಮಹತ್ಯೆ ಪ್ರಕರಣ: ಬೆಳಾಗವಿ ಜಿಪಂ ಮಾಜಿ ಅಧ್ಯಕ್ಷೆ ಅನುಮತಿ ಪತ್ರದ ಅಸಲಿಯತ್ತೇನು? ಗ್ರಾಮೀಣಾಭಿವೃದ್ಧಿ ಇಲಾಖೆ ಎಫ್ಐಆರ್ ದಾಖಲಿಸಿದ್ದೇಕೆ?

ಸದ್ಯ ವಿಧಾನಸೌಧ ಠಾಣೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ದೂರು ದಾಖಲು ಮಾಡಲಾಗಿದ್ದು, ಎಫ್​ಐಆರ್ ದಾಖಲು ಮಾಡಿ, ನಕಲು ಮಾಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. 

ಸಂತೋಷ್ ಆತ್ಮಹತ್ಯೆ ಪ್ರಕರಣ: ಬೆಳಾಗವಿ ಜಿಪಂ ಮಾಜಿ ಅಧ್ಯಕ್ಷೆ ಅನುಮತಿ ಪತ್ರದ ಅಸಲಿಯತ್ತೇನು? ಗ್ರಾಮೀಣಾಭಿವೃದ್ಧಿ ಇಲಾಖೆ ಎಫ್ಐಆರ್ ದಾಖಲಿಸಿದ್ದೇಕೆ?
ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 21, 2022 | 9:16 PM

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Suicide) ಕೇಸ್‌ಗೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಜಿಲ್ಲಾ ಪಂಚಾಯ್ತಿನಿಂದ ನೀಡಿದ್ದಾರೆ ಎನ್ನಲಾದ ಅನುಮತಿ ಪತ್ರ ನಕಲು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಹೇಳಿದೆ. ನಕಲು ಮಾಡಿದ್ದಾರೆ ಎಂದು ವಿಧಾನಸೌಧ ಠಾಣೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀ‌ನ ಕಾರ್ಯದರ್ಶಿ ರಮೇಶ್​ರಿಂದ ದೂರು ನೀಡಲಾಗಿದೆ. ಬೆಳಾಗವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಆಶಾ ಐಹೊಳೆ ಕಾಮಾಗಾರಿ ಮಾಡಲು ಅನುಮತಿ ನೀಡಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿತ್ತು. ಈ ಪತ್ರದ ಅಧಾರದಲ್ಲಿ ಸಂತೋಷ್ ಕಾಮಾಗಾರಿಗಳನ್ನ ಮಾಡಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಗ್ರಾಮೀಣಾಭಿವೃದ್ಧಿ ಇಲಾಖೆ ಈ ಪತ್ರ ನಕಲು ಎಂದು ವಿಧಾನಸೌಧ ಠಾಣೆಗೆ ದೂರು ನೀಡಿದೆ. ಸದ್ಯ ವಿಧಾನಸೌಧ ಠಾಣೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ದೂರು ದಾಖಲು ಮಾಡಲಾಗಿದ್ದು, ಎಫ್​ಐಆರ್ ದಾಖಲು ಮಾಡಿ, ನಕಲು ಮಾಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

108 ಕಾಮಗಾರಿಗಳ ಪಟ್ಟಿ ಸಮೇತ ಆಶಾ ಐಹೊಳೆ ಬರೆದಿದ್ದ ಪತ್ರ ಲಭ್ಯ;

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಳಗಾವಿಯಲ್ಲೇ ಠಿಕಾಣಿ ಹೂಡಿರೋ ಉಡುಪಿ ಪೊಲೀಸ್‌ ತಂಡ, ಏಪ್ರಿಲ್ 20ರಂದು ಹಿಂಡಲಗಾ ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗೇಶ್‌ನನ್ನ ವಿಚಾರಣೆ ನಡೆಸಿತ್ತು. ಈ ವೇಳೆ ಕೆಲ ದಾಖಲೆ ವಶಪಡಿಸಿಕೊಂಡಿದ್ದು ಈ ಪೈಕಿ ಸಿಕ್ಕಿರೋ ಅದೊಂದು ದಾಖಲೆ ಕೇಸ್‌ಗೆ ತಿರುವು ನೀಡಿದೆ. ಸಂತೋಷ್‌ ಪಾಟೀಲ್‌ಗೆ ಹಣ ನೀಡಿರೋ ನಾಗೇಶ್‌ ಅದಕ್ಕೆ ಪ್ರತಿಯಾಗಿ ಸಂತೋಷ್‌ ಪಾಟೀಲ್‌ನ ಮನೆಯನ್ನ 32 ಲಕ್ಷ ರೂಪಾಯಿಗೆ ಜಿಪಿಎ ಮಾಡಿಕೊಂಡಿದ್ದಾರೆ. ಒಂದ್ಕಡೆ ಮನೆ ಜಿಪಿಎ ಮತ್ತೊಂದ್ಕಡೆ ಕಾಮಗಾರಿಯ ಬಿಲ್‌ ಆಗದೇ ಇರೋದು. ಹೀಗೆ ಒತ್ತದಲ್ಲಿದ್ದ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡನಾ ಅನ್ನೋ ಅನುಮಾನ ಶುರುವಾಗಿದೆ. ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿರೋ ನಾಗೇಶ್‌, ಜಿಪಿಎಗೂ ಕಾಮಗಾರಿಗೂ ಯಾವ ಸಂಬಂಧ ಇಲ್ಲ ಅಂತಿದ್ದಾರೆ. ಇನ್ನು ಮತ್ತೊಂದು ಕಡೆ 108 ಕಾಮಗಾರಿಗಳ ಪಟ್ಟಿ ಸಮೇತ ಆಶಾ ಐಹೊಳೆ ಬರೆದಿದ್ದ ಅನುಮೋದನೆಗಾಗಿ ಆದೇಶಿಸಲಾಗಿದೆ ಎನ್ನಲಾದ ಸಹಿ ಪತ್ರ ಲಭ್ಯವಾಗಿದೆ.

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಂದಿನ ಜಿ.ಪಂ.ಅಧ್ಯಕ್ಷೆ ಬರೆದಿದ್ದ ಪತ್ರ ಪೊಲೀಸರಿಗೆ ಲಭ್ಯವಾಗಿದೆ. 2021ರ ಫೆಬ್ರವರಿ 15ರಂದು ಆಗಿನ ಬೆಳಗಾವಿ ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ ಹಿಂಡಲಗಾ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಪತ್ರ ಬರೆದಿದ್ದರು. 2021ರ ಫೆ.15ರಂದು 108 ಕಾಮಗಾರಿಗಳ ಪಟ್ಟಿ ಸಮೇತ ಆಶಾ ಐಹೊಳೆ ಪತ್ರ ಬರೆದಿದ್ದರು. ಅನುಮೋದನೆಗಾಗಿ ಆದೇಶಿಸಲಾಗಿದೆ ಎಂದು 2022ರ ಫೆಬ್ರವರಿ 26ರಂದು ಸಹಿ ಮಾಡಿರುವ ಲೆಟರ್ ಲಭ್ಯವಾಗಿದೆ. ಮಾ.5ರಂದು ಆದೇಶದ ಪ್ರತಿ ನೀಡಲಾಗುವುದು ಎಂದು ಕೈಬರಹದಲ್ಲಿ ಬರೆದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯ ಸೀಲ್ ಹಾಕಲಾಗಿದೆ.

ಇದನ್ನೂ ಓದಿ;

Attrition In IT And BPOs: ನೀವು ಇನ್ಫೋಸಿಸ್​ನಲ್ಲಿ ಕೆಲಸ ಮಾಡುತ್ತಿದ್ದರೆ ಇದನ್ನು ಗಮನಿಸಿ

ಅವನು ವಿಗ್ ಮತ್ತು ಉಲ್ಲೇಖಿಸಲಾದ ಜಾಗದಲ್ಲಿ ಚಿನ್ನವನ್ನಿಟ್ಟುಕೊಂಡು ಕಸ್ಟಮ್ಸ್ ಅಧಿಕಾರಿಗಳಿಂದ ತಪ್ಪಿಸಿಕೊಳ್ಳುವ ಹವಣಿಕೆಯಲ್ಲಿದ್ದ!

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್