ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Suicide) ಕೇಸ್‌ಗೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಜಿಲ್ಲಾ ಪಂಚಾಯ್ತಿನಿಂದ ನೀಡಿದ್ದಾರೆ ಎನ್ನಲಾದ ಅನುಮತಿ ಪತ್ರ ನಕಲು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಹೇಳಿದೆ. ನಕಲು ಮಾಡಿದ್ದಾರೆ ಎಂದು ವಿಧಾನಸೌಧ ಠಾಣೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ರಮೇಶ್ರಿಂದ ದೂರು ನೀಡಲಾಗಿದೆ. ಬೆಳಾಗವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಆಶಾ ಐಹೊಳೆ ಕಾಮಾಗಾರಿ ಮಾಡಲು ಅನುಮತಿ ನೀಡಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿತ್ತು. ಈ ಪತ್ರದ ಅಧಾರದಲ್ಲಿ ಸಂತೋಷ್ ಕಾಮಾಗಾರಿಗಳನ್ನ ಮಾಡಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಗ್ರಾಮೀಣಾಭಿವೃದ್ಧಿ ಇಲಾಖೆ ಈ ಪತ್ರ ನಕಲು ಎಂದು ವಿಧಾನಸೌಧ ಠಾಣೆಗೆ ದೂರು ನೀಡಿದೆ. ಸದ್ಯ ವಿಧಾನಸೌಧ ಠಾಣೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ದೂರು ದಾಖಲು ಮಾಡಲಾಗಿದ್ದು, ಎಫ್ಐಆರ್ ದಾಖಲು ಮಾಡಿ, ನಕಲು ಮಾಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
108 ಕಾಮಗಾರಿಗಳ ಪಟ್ಟಿ ಸಮೇತ ಆಶಾ ಐಹೊಳೆ ಬರೆದಿದ್ದ ಪತ್ರ ಲಭ್ಯ;
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಳಗಾವಿಯಲ್ಲೇ ಠಿಕಾಣಿ ಹೂಡಿರೋ ಉಡುಪಿ ಪೊಲೀಸ್ ತಂಡ, ಏಪ್ರಿಲ್ 20ರಂದು ಹಿಂಡಲಗಾ ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗೇಶ್‌ನನ್ನ ವಿಚಾರಣೆ ನಡೆಸಿತ್ತು. ಈ ವೇಳೆ ಕೆಲ ದಾಖಲೆ ವಶಪಡಿಸಿಕೊಂಡಿದ್ದು ಈ ಪೈಕಿ ಸಿಕ್ಕಿರೋ ಅದೊಂದು ದಾಖಲೆ ಕೇಸ್‌ಗೆ ತಿರುವು ನೀಡಿದೆ. ಸಂತೋಷ್ ಪಾಟೀಲ್‌ಗೆ ಹಣ ನೀಡಿರೋ ನಾಗೇಶ್ ಅದಕ್ಕೆ ಪ್ರತಿಯಾಗಿ ಸಂತೋಷ್ ಪಾಟೀಲ್‌ನ ಮನೆಯನ್ನ 32 ಲಕ್ಷ ರೂಪಾಯಿಗೆ ಜಿಪಿಎ ಮಾಡಿಕೊಂಡಿದ್ದಾರೆ. ಒಂದ್ಕಡೆ ಮನೆ ಜಿಪಿಎ ಮತ್ತೊಂದ್ಕಡೆ ಕಾಮಗಾರಿಯ ಬಿಲ್ ಆಗದೇ ಇರೋದು. ಹೀಗೆ ಒತ್ತದಲ್ಲಿದ್ದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡನಾ ಅನ್ನೋ ಅನುಮಾನ ಶುರುವಾಗಿದೆ. ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿರೋ ನಾಗೇಶ್, ಜಿಪಿಎಗೂ ಕಾಮಗಾರಿಗೂ ಯಾವ ಸಂಬಂಧ ಇಲ್ಲ ಅಂತಿದ್ದಾರೆ. ಇನ್ನು ಮತ್ತೊಂದು ಕಡೆ 108 ಕಾಮಗಾರಿಗಳ ಪಟ್ಟಿ ಸಮೇತ ಆಶಾ ಐಹೊಳೆ ಬರೆದಿದ್ದ ಅನುಮೋದನೆಗಾಗಿ ಆದೇಶಿಸಲಾಗಿದೆ ಎನ್ನಲಾದ ಸಹಿ ಪತ್ರ ಲಭ್ಯವಾಗಿದೆ.
ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಂದಿನ ಜಿ.ಪಂ.ಅಧ್ಯಕ್ಷೆ ಬರೆದಿದ್ದ ಪತ್ರ ಪೊಲೀಸರಿಗೆ ಲಭ್ಯವಾಗಿದೆ. 2021ರ ಫೆಬ್ರವರಿ 15ರಂದು ಆಗಿನ ಬೆಳಗಾವಿ ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ ಹಿಂಡಲಗಾ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಪತ್ರ ಬರೆದಿದ್ದರು. 2021ರ ಫೆ.15ರಂದು 108 ಕಾಮಗಾರಿಗಳ ಪಟ್ಟಿ ಸಮೇತ ಆಶಾ ಐಹೊಳೆ ಪತ್ರ ಬರೆದಿದ್ದರು. ಅನುಮೋದನೆಗಾಗಿ ಆದೇಶಿಸಲಾಗಿದೆ ಎಂದು 2022ರ ಫೆಬ್ರವರಿ 26ರಂದು ಸಹಿ ಮಾಡಿರುವ ಲೆಟರ್ ಲಭ್ಯವಾಗಿದೆ. ಮಾ.5ರಂದು ಆದೇಶದ ಪ್ರತಿ ನೀಡಲಾಗುವುದು ಎಂದು ಕೈಬರಹದಲ್ಲಿ ಬರೆದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯ ಸೀಲ್ ಹಾಕಲಾಗಿದೆ.
ಇದನ್ನೂ ಓದಿ;
Attrition In IT And BPOs: ನೀವು ಇನ್ಫೋಸಿಸ್ನಲ್ಲಿ ಕೆಲಸ ಮಾಡುತ್ತಿದ್ದರೆ ಇದನ್ನು ಗಮನಿಸಿ