Santro Ravi: ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸ್: ಪ್ರಕರಣ ಸಿಸಿಬಿಗೆ ವರ್ಗಾಯಿಸಿ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ
ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸ್ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೋರಡಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಪ್ರಕರಣವೆಂದರೆ ಅದು ಸ್ಯಾಂಟ್ರೋ ರವಿ (Santro Ravi) ಪ್ರಕರಣ. ಸದ್ಯ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸ್ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೋರಡಿಸಿದ್ದಾರೆ. ಅಮಾಯಕ ಮಹಿಳೆಯರ ವಿರುದ್ದ ಕೇಸ್ ಕಾಟನ್ ಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನ್ನ ಪತ್ನಿ ವಿರುದ್ದವೇ ಸ್ಯಾಂಟ್ರೋ ರವಿ ನಕಲಿ ಕೇಸ್ ಹಾಕಿಸಿದ್ದ. ನಕಲಿ ಕೇಸ್ ಹಾಕಿ ಅಮಾಯಕ ಮಹಿಳೆಯರನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು. ಇನ್ನು ಸುಳ್ಳು ಪ್ರಕರಣ ದಾಖಲು ಮಾಡಿದ್ದ ಹಿನ್ನಲೆ ಇನ್ಸ್ಪೆಕ್ಟರ್ ಆಗಿದ್ದ ಪ್ರವೀಣ್ ಎನ್ನುವವರು ಸಸ್ಪೆಂಡ್ ಆಗಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ಮಾಡುವಂತೆ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.
ಅವನೆಲ್ಲೇ ಅಡಗಿ ಕುಳಿತಿದ್ರೂ ಎಳೆದು ತರಲಾಗುತ್ತದೆ: ಆರಗ ಜ್ಞಾನೇಂದ್ರ
ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸ್ಯಾಂಟ್ರೋ ರವಿ ಸೆರೆಸಿಕ್ಕ ನಂತರ ನಡೆಯುವ ವಿಚಾರಣೆಯಲ್ಲಿ ಹೊರಬೀಳುವ ಹೆಸರುಗಳು ಯಾರೇ ಆಗಿರಲಿ, ಅವವ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು. ಹಲವಾರು ಪೊಲೀಸ್ ತಂಡಗಳು ರವಿಯ ಬೇಟೆಯಾಡುತ್ತಿವೆ ಎಂದು ಹೇಳಿದ ಅವರು ಅವನೆಲ್ಲೇ ಅಡಗಿ ಕುಳಿತಿದ್ರೂ ಎಳೆದು ತರಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: Santro Ravi: ಸ್ಯಾಂಟ್ರೋ ರವಿ ವಿರುದ್ಧ ಅಮಿತ್ ಶಾಗೆ ದೂರು ನೀಡಿದ ಮೈಸೂರಿನ ಒಡನಾಡಿ ಸಂಸ್ಥೆ
ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಆತನ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಹಿಂಬಾಲಕರ ವಿಚಾರಣೆ ನಡೆದಿದೆ. ಬೇರೆ ಬೇರೆ ಆಯಾಮದಲ್ಲಿ ತನಿಖೆ ಆಗುತ್ತಿದ್ದು, ಎಲ್ಲಾ ರೀತಿಯ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆರೋಪಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗುತ್ತದೆ. ಆತನ ಮೇಲೆ ದಾಖಲಾಗಿರುವ ಪ್ರತಿಯೊಂದು ಪ್ರಕರಣಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: Santro Ravi: ತನಿಖೆ ಚುರುಕುಗೊಳಿಸಿರುವ ಪೊಲೀಸರು, ರವಿ ಮದುವೆ ಮಾಡಿಸಿದ ಪುರೋಹಿತರ ವಿಚಾರಣೆ
ಮಹಿಳೆ ಮೇಲೆ ಸುಳ್ಳು ಕೇಸ್ ದಾಖಲು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಕಲಿ ಪ್ರಕರಣ ದಾಖಲಿಸಿ ಬಂಧನ ಮಾಡಿರುವುದು ಗೊತ್ತಾಗಿದೆ. ಈಗಾಗಲೇ ವರದಿ ಸಿದ್ದಪಡಿಸಲಾಗಿದೆ. ಈ ಸಂಬಂಧ ಕಾನೂನು ಕ್ರಮ ಆಗುತ್ತದೆ. ಯಾವ ಅಧಿಕಾರಿ ಇದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ ಸೂಚನೆ ನೀಡಿದರು.
ಸ್ಯಾಂಟ್ರೋ ರವಿಗೆ ಸೇರಿದ ಆಸ್ತಿ ಜಪ್ತಿಗೂ ಕ್ರಮ ಕೈಗೊಳ್ಳಲಾಗಿದೆ: ಸಿಎಂ ಬೊಮ್ಮಾಯಿ
ಸ್ಯಾಂಟ್ರೋ ರವಿ ಪ್ರಕರಣ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿ, ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಆತನಿಗೆ ಸೇರಿದ ಆಸ್ತಿ ಜಪ್ತಿಗೂ ಕ್ರಮ ಕೈಗೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಬಗ್ಗೆ ಎಲ್ಲಾ ರೀತಿಯ ತನಿಖೆಗೆ ಆದೇಶಿಸಿದ್ದೇನೆ. ಈ ಹಿಂದೆ ಸ್ಯಾಂಟ್ರೋ ರವಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿತ್ತು. ಆದರೆ ಇದೆಲ್ಲ ಕಾಂಗ್ರೆಸ್ ಕಾಲದಲ್ಲಿ ನಡೆದಿರುವುದು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಬಿಡುಗಡೆಯಾಗಿದ್ದ. ಸ್ಯಾಂಟ್ರೋ ರವಿದ್ದು 20 ವರ್ಷದ ಇತಿಹಾಸ ಇದೆ. ಯಾವ ಯಾವ ಸರ್ಕಾರ ಇತ್ತು, ಯಾವ ಯಾವ ಮಂತ್ರಿಗಳಿದ್ದರೂ, ಯಾರ ಜೊತೆ ಸಂಬಂಧ ಇತ್ತು ಎಲ್ಲವೂ ತನಿಖೆ ಆಗಲಿದೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.