SC, ST Reservation Hike: ಎಸ್‌ಸಿ ಎಸ್‌ಟಿ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗೆಗಿನ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.
ಬೆಂಗಳೂರು: ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ (SC/ST Reservation) ಹೆಚ್ಚಿಸುವ ಬಗೆಗಿನ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆ ಹಾಗೂ ಪರಿಷತ್ನಲ್ಲಿ ಅಂಗೀಕಾರಗೊಂಡಿತ್ತು. ಇದೀಗ ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕುರಿತು ಇಂದು(ಜನವರಿ12) ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ.
ಎಸ್‌ಸಿ ವರ್ಗಕ್ಕೆ ಶೇ.15ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್‌ಟಿ ವರ್ಗಕ್ಕೆ ಶೇ.3ರಷ್ಟಿದ್ದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಿ ಇತ್ತೀಚೆಗೆ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆಗೆ ಅನುಮೋದನೆ ಪಡೆಯಲಾಗಿತ್ತು. ಈ ಮೂಲಕ ಎರಡು ಸಮುದಾಯದ ಬಹು ವರ್ಷಗಳ ಬೇಡಿಕೆ ಈಡೇರಿದೆ.