SC, ST Reservation Hike: ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 12, 2023 | 10:03 PM

ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗೆಗಿನ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

SC, ST Reservation Hike: ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್
Image Credit source: wikipedia.org
Follow us on

ಬೆಂಗಳೂರು: ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ (SC/ST Reservation) ಹೆಚ್ಚಿಸುವ ಬಗೆಗಿನ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಎಸ್​ಸಿ‌,‌ ಎಸ್​ಟಿ ಮೀಸಲಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆ ಹಾಗೂ ಪರಿಷತ್​ನಲ್ಲಿ ಅಂಗೀಕಾರಗೊಂಡಿತ್ತು. ಇದೀಗ ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕುರಿತು ಇಂದು(ಜನವರಿ12) ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ.

ಎಸ್‌ಸಿ ವರ್ಗಕ್ಕೆ ಶೇ.15ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್‌ಟಿ ವರ್ಗಕ್ಕೆ ಶೇ.3ರಷ್ಟಿದ್ದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಿ ಇತ್ತೀಚೆಗೆ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆಗೆ ಅನುಮೋದನೆ ಪಡೆಯಲಾಗಿತ್ತು. ಈ ಮೂಲಕ ಎರಡು ಸಮುದಾಯದ ಬಹು ವರ್ಷಗಳ ಬೇಡಿಕೆ ಈಡೇರಿದೆ.