SC ST reservation: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆಗೆ ಸರ್ವಪಕ್ಷ ಸಭೆ ಕರೆದ ಸಿಎಂ ಬೊಮ್ಮಾಯಿ
All Party Meeting: ವಿಧಾನಸಭೆ ವಿಪಕ್ಷ ನಾಯಕರು, ಕಾಂಗ್ರೆಸ್, JDS ನಾಯಕರು, ಪರಿಷತ್ ವಿಪಕ್ಷ ನಾಯಕರನ್ನು ಒಳಗೊಂಡ ಸಭೆ ಆಯೋಜನೆ ಮಾಡಲಾಗಿದೆ. ಸಭೆ ನಡೆಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನ ಮಂಡಲ ಅಧಿವೇಶನದಲ್ಲೂ ಭರವಸೆ ನೀಡಿದ್ದರು.
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ, ಎಸ್‌ಟಿ) ಮೀಸಲಾತಿ (SC ST reservation issue) ಸಂಬಂಧ ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯ ಕುರಿತು ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು (CM Basavaraj Bommai) ಸರ್ವಪಕ್ಷ ಸಭೆ ಕರೆದಿದ್ದಾರೆ. ಅಕ್ಟೋಬರ್ 7ರಂದು ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ.
ವಿಧಾನಸಭೆ ವಿಪಕ್ಷ ನಾಯಕರು, ಕಾಂಗ್ರೆಸ್, JDS ನಾಯಕರು, ಪರಿಷತ್ ವಿಪಕ್ಷ ನಾಯಕರನ್ನು ಒಳಗೊಂಡ ಸಭೆ (All Party Meeting) ಆಯೋಜನೆ ಮಾಡಲಾಗಿದೆ. ಸಭೆ ನಡೆಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನ ಮಂಡಲ ಅಧಿವೇಶನದಲ್ಲೂ ಭರವಸೆ ನೀಡಿದ್ದರು.
ST Reservation ಮೀಸಲಾತಿ ವಿಚಾರ: ಬೆಂಗಳೂರಿನಲ್ಲಿ ಅಕ್ಟೋಬರ್ 8ರಂದು ಸರ್ವಪಕ್ಷ ಸಭೆ ಎಂದಿದ್ದ ಸಚಿವ ರಾಮುಲು
ಕಗ್ಗಂಟಾಗಿ ಕಾಡುತ್ತಿರುವ ಮೀಸಲಾತಿ ವಿಚಾರವನ್ನು (ST Reservation) ಇತ್ಯರ್ಥಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅಕ್ಟೋಬರ್ 8ರಂದು (October 8) ಸರ್ವಪಕ್ಷಗಳ ಸಭೆ ಕರೆಯಲಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು (B Sriramulu) ಈ ಹಿಂದೆ ಹೇಳಿದ್ದರು. ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ಮೀಸಲಾತಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ. ST ಮೀಸಲಾತಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸ್ವಾಮೀಜಿ, ಸಮುದಾಯದ ಹಿರಿಯರು ರಾಜಕೀಯ ಮಾಡಬಾರದು ಎಂದು ಹೇಳಿದ್ದರು.
Published On - 5:38 pm, Sat, 1 October 22