ಕೆಲಸ ಕಾಯಂಗೆ ಆಗ್ರಹಿಸಿ 16 ಸಾವಿರ ಪೌರಕಾರ್ಮಿಕರಿಂದ ಪ್ರತಿಭಟನೆ; ಬಿಬಿಎಂಪಿ ಆವರಣ ಸ್ವಚ್ಛಗೊಳಿಸದೆ ಹಾಗೆಯೇ ಬಿಟ್ಟರು!
ಪೌರಕಾರ್ಮಿಕರು ಬಿಬಿಎಂಪಿ ಆವರಣವನ್ನು ಸ್ವಚ್ಛಗೊಳಿಸದೆ ಧರಣಿ ನಡೆಸಿದ್ದಾರೆ. ಇತ್ತ ಶಾಸಕರು, ಸಚಿವರ ಮನೆಯಿಂದ ಕೂಡ ಕಸ ಸಂಗ್ರಹ ಮಾಡದೆ, 16 ಸಾವಿರ ಜನ ಪೌರಕಾರ್ಮಿಕರು, 10 ಸಾವಿರ ಕಸದ ಆಟೋ-ಟಿಪ್ಪರ್ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು: 16 ಸಾವಿರ ಪೌರಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಪೌರಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂದು ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿದ ಪೌರಕಾರ್ಮಿಕರು, ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಇಂದು ಪೌರಕಾರ್ಮಿಕರ ಪ್ರತಿಭಟನೆ ಹಿನ್ನಲೆ ಬೆಂಗಳೂರಿನ ಮನೆ ಮನೆಯಿಂದ ಕಸ ಸಂಗ್ರಹಣೆ, ಕಸ ಗುಡಿಸುವ ಕೆಲಸ ಬಂದ್ ಆಗಿದೆ. ಅಲ್ಲದೆ ಪೌರಕಾರ್ಮಿಕರು ಬಿಬಿಎಂಪಿ ಆವರಣವನ್ನು ಸ್ವಚ್ಛಗೊಳಿಸದೆ ಧರಣಿ ನಡೆಸಿದ್ದಾರೆ. ಇತ್ತ ಶಾಸಕರು, ಸಚಿವರ ಮನೆಯಿಂದ ಕೂಡ ಕಸ ಸಂಗ್ರಹ ಮಾಡದೆ, 16 ಸಾವಿರ ಜನ ಪೌರಕಾರ್ಮಿಕರು, 10 ಸಾವಿರ ಕಸದ ಆಟೋ-ಟಿಪ್ಪರ್ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.
ಮೌರ್ಯ ಸರ್ಕಲ್‌ನಲ್ಲಿ ಪೌರಕಾರ್ಮಿಕರಿಂದ ಪ್ರತಿಭಟನೆ ರಾಜ್ಯದಲ್ಲಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ ಮಾಡುವಂತೆ ಒತ್ತಾಯಿಸಿ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಖಾಯಂ ಮಾಡದಿದ್ದರೆ ಮುಂದಿನ ತಿಂಗಳು ಅನಿರ್ದಿಷ್ಟಾವಧಿ ಧರಣಿ ಮಾಡುತ್ತೇವೆ ಎಂದು ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಹೇಳಿಕೆ ನೀಡಿದ್ದಾರೆ.
ಕಳೆದ ಬಾರಿ ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ ಮಾರ್ಚ್ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಕಳೆದ 6 ತಿಂಗಳಿಂದ ಬಿಬಿಎಂಪಿ ಪೌರಕಾರ್ಮಿಕರಿಗೆ ವೇತನ ನೀಡದೆ ತಾತ್ಸಾರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಕಾರ್ಮಿಕರು ಬೆಂಗಳೂರಿನ ಗುತ್ತಿಗೆದಾರರ ಮನೆ ಮುಂದೆ ಧರಣಿ ನಡೆಸಿದ್ದರು. ಗುತ್ತಿಗೆದಾರರಾದ ಹರ್ಷವರ್ಧನ್ ರೆಡ್ಡಿ ಮನೆ ಮುಂದೆ ಕಾರ್ಮಿಕರು ಧರಣಿ ನಡೆಸಿದ್ದರು. ಸಂಬಳ ಕೊಡಿ, ಮನೆಯಿಂದ ಹೊರಗೆ ಹೋಗಿ ಎಂದು ಹರ್ಷವರ್ಧನ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು..
170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್ಆರ್ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ. 6 ತಿಂಗಳ ಸಂಬಳ ನೀಡದೇ ಆಟವಾಡಿಸುತ್ತಿರುವ ಪಾಲಿಕೆ ಹಾಗೂ ಗುತ್ತಿಗೆದಾರರ ಮೇಲೆ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಮಕೂರು: ಗುಬ್ಬಿ ಚಾಲಕರ ಮಿಂಚಿನ ಪ್ರತಿಭಟನೆ ಮೃತ ದೇಹ ಸಾಗಿಸಲು ಆಗಲ್ಲ ಎಂದ ಮ್ಯಾಕ್ಸಿ ಕ್ಯಾಬ್ ಚಾಲಕನ ಮೇಲೆ ಇಲ್ಲಸಲ್ಲದ ಕೇಸ್ ದಾಖಲಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪಿಎಸ್ಐ ಕ್ಯಾಬ್ ಚಾಲಕನ ಮೇಲೆ ಪ್ರಕರಣ ದಾಖಲಿಸಿದ್ದು, ಚಾಲಕನ ಬಳಿಯೇ ತನ್ನ ಜೀಪ್ ಡ್ರೈವರ್ ಖಾತೆಗೆ ಲಂಚದ ಹಣವನ್ನು ಫೋನ್ ಪೇ ಮಾಡಿಸಿಕೊಂಡಿರುವ ಆರೋಪ ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರ ಮೇಲೆ ಕೇಳಿ ಬಂದಿದೆ.
ಗುಬ್ಬಿಯ ಎಂ.ಹೆಚ್.ಪಟ್ಟಣದ ಬಳಿ ನಿನ್ನೆ ಅಪಘಾತವಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಬಳಿಕ ಸ್ಥಳಕ್ಕೆ ತೆರಳಿದ್ದ ಗುಬ್ಬಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜ್ಞಾನಮೂರ್ತಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನಂತರ ಮೃತದೇಹವನ್ನು ಸಾಗಿಸಲು ಮುಂದಾದ ಪಿಎಸ್ಐ ಬೆಂಗಳೂರಿನಿಂದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಗೆ ಹೋಗುತ್ತಿದ್ದ ತರಕಾರಿ ಸಾಗಿಸುವ ಮ್ಯಾಕ್ಸಿ ಕ್ಯಾಬ್ನ ಚಾಲಕ ಶಕೀಲ್ನನ್ನು ತಡೆದು ಶವವನ್ನು ಸಾಗಿಸುವಂತೆ ತಿಳಿಸಿದ್ದಾರೆ.
ಗುಬ್ಬಿ ಪಿಎಸ್ಐ ಜ್ಞಾನಮೂರ್ತಿ ಹೇಳಿದ್ದನ್ನು ಒಪ್ಪದ ಶಕೀಲ್, ಗಾಯಾಳು ಗಂಭೀರ ಸ್ಥಿತಿಯಲ್ಲಿ ಇದ್ದಿದರೆ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದೆ. ಆದರೆ, ಶವವನ್ನು ನಾನು ಸಾಗಿಸುವುದಕ್ಕೆ ಆಗಲ್ಲ ಎಂದಿದ್ದಾರೆ. ಕೂಡಲೇ ದರ್ಪ ತೋರಿದ ಪಿಎಸ್ಐ ಜ್ಞಾನಮೂರ್ತಿ ಮ್ಯಾಕ್ಸಿ ಕ್ಯಾಬ್ ಅನ್ನು ವಶಕ್ಕೆ ಪಡೆದು ಇಲ್ಲಸಲ್ಲದ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿ, ವಾಹನವನ್ನು ಬಿಡಬೇಕು ಅಂದರೆ ನೂರು ರೂ. ರಶೀದಿ ಪಡೆದು 7 ಸಾವಿರ ರೂಗಳನ್ನು ನನ್ನ ಡ್ರೈವರ್ ಖಾತೆಗೆ ಜಮಾ ಮಾಡು ಎಂದು ಹೇಳಿದ್ದಾರೆ ಎಂದು ಚಾಲಕ ಶಕೀಲ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಮುಜಾಫರ್ ನಗರದಲ್ಲಿ ಕಿಸಾನ್ ಮಹಾಪಂಚಾಯತ್; ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ಮುಂದುವರಿಸಲು ರೈತರ ನಿರ್ಧಾರ
Published On - 11:54 am, Mon, 6 September 21