Prof KS Narayanacharya Death: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಇನ್ನಿಲ್ಲ

ಬೆಂಗಳೂರು: ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್.ನಾರಾಯಣಾಚಾರ್ಯ ವಿಧಿವಶರಾಗಿದ್ದಾರೆ. 88 ವರ್ಷಗಳ ಜೀವನಯಾತ್ರೆ ಮುಗಿಸಿದ ನಾರಾಯಣಾಚಾರ್ಯ ಅವರು ವಿದ್ವಾಂಸರು, ಧರ್ಮಶಾಸ್ತ್ರ ಪ್ರಚಾರದ ಮೂಲಕ ಖ್ಯಾತಿ ಗಳಿಸಿದ್ದರು. ರಾಮಾಯಣಾಚಾರ್ಯ (Ramayanacharya) ಎಂದೇ ಪ್ರೊ.ಕೆ.ಎಸ್.ನಾರಾಯಣಾಚಾರ್ಯ ಪ್ರಸಿದ್ದಿ ಪಡೆದಿದ್ದರು.

Prof KS Narayanacharya Death: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಇನ್ನಿಲ್ಲ
ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್.ನಾರಾಯಣಾಚಾರ್ಯ ಇನ್ನಿಲ್ಲ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 26, 2021 | 9:14 AM

ಬೆಂಗಳೂರು: ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ವಿಧಿವಶರಾಗಿದ್ದಾರೆ. 88 ವರ್ಷಗಳ ಜೀವನಯಾತ್ರೆ ಮುಗಿಸಿದ ನಾರಾಯಣಾಚಾರ್ಯ ಅವರು (prof ks narayanacharya) ವಿದ್ವಾಂಸರು, ಧರ್ಮಶಾಸ್ತ್ರ ಪ್ರಚಾರದ ಮೂಲಕ ಖ್ಯಾತಿ ಗಳಿಸಿದ್ದರು. ರಾಮಾಯಣಾಚಾರ್ಯ (Ramayanacharya) ಎಂದೇ ಪ್ರೊ. ಕೆ.ಎಸ್.ನಾರಾಯಣಾಚಾರ್ಯ ಪ್ರಸಿದ್ದಿ ಪಡೆದಿದ್ದರು. ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರು ರಾಮಾಯಣಸಹಶ್ರೀ, ಆಚಾರ್ಯ ಚಾಣಕ್ಯ ಸೇರಿದಂತೆ ಹಲವು ಅಮೂಲ್ಯ ಕೃತಿಗಳನ್ನು ರಚಿಸಿದ್ದರು. ಕನ್ನಡ, ಇಂಗ್ಲಿಷ್, ತಮಿಳಿನಲ್ಲೂ ರಾಮಾಯಾಣದ ಬಗ್ಗೆ ಉಪನ್ಯಾಸಗಳನ್ನು ನೀಡಿದ್ದರು.

ಕೆ. ಎಸ್. ನಾರಾಯಣಾಚಾರ್ಯ ಅವರು ಕನ್ನಡದ ಭಾರತೀಯ ಸಂಸ್ಕೃತಿಯ ಲೇಖಕರು, ಪ್ರಚಾರಕರು ಮತ್ತು ಪ್ರವಚನಕಾರರು. ಇವರು 1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು. ಕೆ. ಎಸ್. ನಾರಾಯಣಾಚಾರ್ಯ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಸ್​ಸಿ(1954), ಬಿ.ಎ (ಆನರ್ಸ್ 1957), ಎಂ.ಎ (ಇಂಗ್ಲಿಷ್ 1958) ಪದವಿ ಪಡೆದಿದ್ದರು. ಡಬ್ಲು. ಬಿ. ಯೇಟ್ಸ್ ಮತ್ತು ಟಿ. ಎಸ್. ಎಲಿಯೇಟ್ ರ ಕಾವ್ಯದ ಮೇಲೆ ಭಾರತೀಯ ತತ್ವಶಾಸ್ತ್ರ ಪ್ರಭಾವ – ಇವರ ಪಿ.ಎಚ್​ಡಿ ಪ್ರಬಂಧ (1959-61). ಪ್ರೊ. ಕೆ.ಎಸ್. ನಾರಾಯಣಾಚಾರ್ಯರ ಶೈಕ್ಷಣಿಕ ಸೇವೆ 1962ರಲ್ಲಿ ಧಾರವಾಡದ ಕರ್ನಾಟಕ ಆರ್ಟ್ಸ್ ಕಾಲೇಜಿನಲ್ಲಿ ಅಧ್ಯಾಪಕರಾಗಿ ನೇಮಕ. 1967ರಲ್ಲಿ ಧಾರವಾಡದ ಕರ್ನಾಟಕ ಆರ್ಟ್ಸ್ ಕಾಲೇಜಿನಲ್ಲಿ ಪ್ರವಾಚಕ.1973ರಲ್ಲಿ ಧಾರವಾಡದ ಕರ್ನಾಟಕ ಆರ್ಟ್ಸ್ ಕಾಲೇಜಿನಲ್ಲಿ ಪ್ರಾಧ್ಯಾಪಕ. 1991ರಲ್ಲಿ ಧಾರವಾಡದ ಕರ್ನಾಟಕ ಆರ್ಟ್ಸ್ ಕಾಲೇಜಿನ ಪ್ರಾಚಾರ್ಯ. 1993ರಲ್ಲಿ ನಿವೃತ್ತಿ.

ನಾರಾಯಣಾಚಾರ್ಯರಿಗೆ ಸಂದ ಪ್ರಶಸ್ತಿ, ಬಿರುದುಗಳು ‘ವಿದ್ವನ್ಮಣಿ’, ‘ವೇದಭೂಷಣ’, ‘ವಾಲ್ಮೀಕಿ ಹೃದಯಜ್ಞ’, ‘ರಾಮಾಯಣಾಚಾರ್ಯ’, ‘ಮಹಾಭಾರತಾಚಾರ್ಯ’ ಮೊದಲಾದ ಬಿರುದುಗಳು ವಿವಿಧ ಮಠಾಧೀಶರಿಂದ. ಗಮಕ ರತ್ನಾಕರ(ಗಮಕ ಸಮ್ಮೇಳನಾಧ್ಯಕ್ಷರಾಗಿ, ಸರಕಾರದಿಂದ). ವೇದ ಸಂಸ್ಕೃತಿ ಮಾಲೆಗೆ ರಾಜ್ಯ ಸಾಹಿತ್ಯ ಅಕಾಡೆಮಿಯಿಂದ ಬಹುಮಾನ(೧೯೭೩). ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (೨೦೦೮). (ಮಾಹಿತಿ: ವೀಕಿಪೀಡಿಯಾ- wikipedia)

ದತ್ತಾತ್ರೇಯ ಹೊಸಬಾಳೆ ಸಂತಾಪ ಖ್ಯಾತ ವಿದ್ವಾಂಸ ಡಾ. ಕೆ. ಎಸ್.ನಾರಾಯಣಾಚಾರ್ಯ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ. ಸುಪ್ರಸಿದ್ಧ ಲೇಖಕರೂ ಮೇರು ವಿದ್ವಾಂಸರೂ ಹಿಂದುತ್ವ – ರಾಷ್ಟ್ರೀಯತೆಯ ಪ್ರಖರ ಪ್ರತಿಪಾದಕರೂ ಆಗಿದ್ದ ಪ್ರೊ। ಕೆ.ಎಸ್. ನಾರಾಯಣಾಚಾರ್ಯರ ನಿಧನ ನಾಡಿಗೆ ಅತೀವ ದುಃಖ ತಂದಿದೆ. ಅವರ ಮರಣದಿಂದಾಗಿ ವಿದ್ವತ್ ಲೋಕಕ್ಕಷ್ಟೇ ಅಲ್ಲ, ಸಾಮಾನ್ಯ ಜನತೆಗೂ ಅಪಾರ ನೋವು ಹಾಗೂ ನಷ್ಟ ಉಂಟಾಗಿದೆ. ರಾಷ್ಚ್ರಭಕ್ತಿ, ಸಂಸ್ಕೃತಿಗಳ ಪರಮ ಆರಾಧಕರಾಗಿದ್ದು ಅವುಗಳ ಬಗ್ಗೆ ಆಗ್ರಹದಿಂದ ಅಧಿಕಾರಪೂರ್ವಕವಾಗಿ ಹೇಳುತ್ತಿದ್ದ ಆಚಾರ್ಯರ ನಿಧನಕ್ಕೆ ತೀವ್ರ ಸಂತಾಪಗಳು. ಪರಮಾತ್ಮ ಎಲ್ಲರಿಗೂ ನೋವನ್ನು ಭರಿಸುವ ಶಕ್ತಿಯನ್ನೂ ದಿವಂಗತರಿಗೆ ಸದ್ಗತಿಯನ್ನೂ ನೀಡಲೆಂದು ಪ್ರಾರ್ಥಿಸುವೆ ಎಂದು ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.

ನಾರಾಯಣಾಚಾರ್ಯರ ನಿಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ಸಂತಾಪ: ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ನಿಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಕೇಂದ್ರ ಸಚಿವ ಜೋಶಿ ಅವರು ವಿದ್ವಾಂಸರಾದ ನಾರಾಯಣಾಚಾರ್ಯರ ನಿಧನ ನೋವಿನ ಸಂಗತಿ. ಪ್ರವಚನ, ಕಾದಂಬರಿಕಾರರಾಗಿ ಅಭಿಮಾನಿಗಳನ್ನು ಹೊಂದಿದ್ದರು. ನಾರಾಯಣಾಚಾರ್ಯರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಸುವೆ. ಪ್ರೊ. ಕೆ.ಎಸ್. ನಾರಾಯಣಾಚಾರ್ಯರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬಕ್ಕೆ ಸಿಗಲೆಂದು ಪ್ರಾರ್ಥಿಸುವೆ ಎಂದಿದ್ದಾರೆ.

Published On - 8:37 am, Fri, 26 November 21

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು