AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಶಾಕ್ ಕೊಟ್ಟ ಖಾಸಗಿ ಶಾಲೆಗಳು; ಆಗಸ್ಟ್ 2 ರಿಂದ ಶಾಲೆಗಳ ಆರಂಭಕ್ಕೆ ಸಿದ್ಧತೆ

School Reopen: ಜುಲೈ 30 ರ ಒಳಗೆ ಶಾಲೆ ಆರಂಭ ಮಾಡಬೇಕು. ಇಲ್ಲವಾದಲ್ಲಿ ನಾವೇ ಶಾಲೆ ಆರಂಭಿಸುವುದಕ್ಕೆ ಮುಂದಾಗುತ್ತೇವೆ ಎಂದು ರುಪ್ಸಾ (ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ) ಅಧ್ಯಕ್ಷ ಹಾಲನೂರು ಲೇಪಾಕ್ಷಿ ತಿಳಿಸಿದ್ದಾರೆ.

ಸರ್ಕಾರಕ್ಕೆ ಶಾಕ್ ಕೊಟ್ಟ ಖಾಸಗಿ ಶಾಲೆಗಳು; ಆಗಸ್ಟ್ 2 ರಿಂದ ಶಾಲೆಗಳ ಆರಂಭಕ್ಕೆ ಸಿದ್ಧತೆ
ಸಾಂಕೇತಿಕ ಚಿತ್ರ
TV9 Web
| Updated By: Digi Tech Desk|

Updated on:Jul 24, 2021 | 11:51 AM

Share

ಬೆಂಗಳೂರು: ಕೊವಿಡ್​ ಎರಡನೇ ಅಲೆಯ ತೀವ್ರತೆ ಕಡಿಮೆಯಾಗಿದ್ದು, ಲಾಕ್​ಡೌನ್​ ಕೂಡ ಹಂತ ಹಂತವಾಗಿ ಮುಕ್ತಾಯವಾಗಿದೆ. ಈ ನಡುವೆ ಎಸ್​ಎಸ್​ಎಲ್​ಸಿ ಪರೀಕ್ಷೆ ಕೂಡ ಯಶಸ್ವಿಯಾಗಿದ್ದು, ಈಗಿರುವ ಬೇಡಿಕೆ ಶಾಲೆ ಆರಂಭ ಯಾವಾಗ ಎಂಬುವುದು. ಸರ್ಕಾರ ಕೂಡ ಈ ಬಗ್ಗೆ ಗಮನಹರಿಸಿದ್ದು, ಶಾಲೆ ಆರಂಭಿಸುವ ಬಗ್ಗೆ ಯೋಜನೆ ಸಿದ್ಧಪಡಿಸುತ್ತಿದೆ. ಆದರೆ ಈ ವಿಚಾರವಾಗಿ ಖಾಸಗಿ ಶಾಲೆಗಳ ಒಕ್ಕೂಟ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, ಸರ್ಕಾರ ಶಾಲೆ ಆರಂಭಿಸದೇ ಹೋದರೆ ಅಗಸ್ಟ್ 2 ರಿಂದ ಖಾಸಗಿ ಶಾಲೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿವೆ.

ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಲ್ಲದೇ, ಶಾಲೆ ಆರಂಭಕ್ಕೆ ICMC, ದೇವಿಶೆಟ್ಟಿ ವರದಿ ಹಾಗೂ ಟಾಸ್ಕ್ ಫೋರ್ಸ್ ಸಭೆ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಜುಲೈ 30 ರ ಒಳಗೆ ಶಾಲೆ ಆರಂಭ ಮಾಡಬೇಕು. ಇಲ್ಲವಾದಲ್ಲಿ ನಾವೇ ಶಾಲೆ ಆರಂಭಿಸುವುದಕ್ಕೆ ಮುಂದಾಗುತ್ತೇವೆ ಎಂದು ರುಪ್ಸಾ (ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ) ಅಧ್ಯಕ್ಷ ಹಾಲನೂರು ಲೇಪಾಕ್ಷಿ ತಿಳಿಸಿದ್ದಾರೆ.

ಗುಜರಾತ್, ತೆಲಂಗಾಣ, ಆಂಧ್ರ, ಒರಿಸ್ಸಾ ಹಾಗೂ ಬೇರೆ ರಾಜ್ಯಗಳಲ್ಲಿ ಶಾಲೆ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಇನ್ನು ಸರ್ಕಾರ ಮಿನಮೇಷ ಎಣಿಸುತ್ತಿದೆ. ಹೀಗಾಗಿ ನಾವು ಕೂಡ ಆಗಸ್ಟ್ 2 ರಿಂದ ಶಾಲೆ ಆರಂಭಿಸುತ್ತೇವೆ ಎಂದು ರುಪ್ಸಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳ ಒತ್ತಾಯ ಕೊರೊನಾ ಕಾರಣ ಬಂದ್ ಆಗಿದ್ದ ಶಾಲೆಗಳನ್ನು ಪುನಾರಂಭಿಸುವಂತೆ ಸರ್ಕಾರಕ್ಕೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಒತ್ತಾಯಿಸಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಹಾಲನೂರು ಎಸ್.ಲೇಪಾಕ್ಷಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದ ಶೇ.80 ಬಜೆಟ್ ಶಾಲೆಗಳು, 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನಾಳೆಯಿಂದ ಆನ್​ಲೈನ್ ಮೂಲಕ ತರಗತಿಗಳು ಶುರುವಾಗುತ್ತಿದೆ. ಇದು ಒಳ್ಳೆಯ ವಿಚಾರ. ಆದರೆ ಶಾಲೆ ಆರಂಭದ ಬಗ್ಗೆ ಸರ್ಕಾರ ಮನಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾಗಮ ಅಥವಾ ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಒತ್ತಾಯಿಸಿದ ರುಪ್ಸಾ ಸಂಘಟನೆ, ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ರುಪ್ಸಾ ಸಂಘಟನೆ ಬೇಡಿಕೆಗಳೇನು? * 2021-22 ಸಾಲಿನ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉನ್ನತೀಕರಣ ವಿಷಯವು ತುಂಬಾ ನಿಧಾನಗತಿಯಲ್ಲಿ ಅನುಸರಿಸುತ್ತಿದೆ. ಇದರಿಂದ ಆರ್​ಟಿಇ ಮಕ್ಕಳ ಮುಂದಿನ ತರಗತಿಗೆ ಅನ್ಯಾಯವಾಗುತ್ತಿದೆ. ಆರ್ಟಿಇ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರುಪ್ಸಾ ಒತ್ತಾಯಿದೆ.

* 2019-20 ಮತ್ತು 2020-21ನೇ ಸಾಲಿನ ಆರ್​ಟಿಇ ಹಣ ಇನ್ನು ಬಿಡುಗಡೆ ಆಗಿಲ್ಲ. ಆದ್ದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ತುಂಬಾ ನೋವನ್ನು ಅನುಭವಿಸುತ್ತಿವೆ. ಹೀಗಾಗಿ ಕೂಡಲೇ ಆರ್​ಟಿಇ ಹಣ ಬಿಡುಗಡೆ ಮಾಡಬೇಕು. ಖಾಸಗಿ ಶಾಲೆಗಳ ಶಿಕ್ಷಕರಿಗೂ ಘೋಷಿಸಿರುವ ಪ್ಯಾಕೇಜ್​ನ ತಕ್ಷಣ ಶಿಕ್ಷಕರಿಗೆ ಮುಟ್ಟಿಸಬೇಕೆಂದು ಒತ್ತಾಯಿಸಿದೆ.

ಇದನ್ನೂ ಓದಿ: ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳ ಒತ್ತಾಯ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ರುಪ್ಸಾ

9, 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಆ. 2 ರಿಂದ ಶಾಲೆ ಆರಂಭ? ಆರೋಗ್ಯ ಇಲಾಖೆ ಅನುಮತಿಗೆ ಕಾದಿರುವ ಶಿಕ್ಷಣ ಇಲಾಖೆ

Published On - 11:25 am, Sat, 24 July 21