AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಇಂದಿನಿಂದ ಶಾಲೆಗಳು ಆರಂಭ; ಬಿಎಂಟಿಸಿ ಬಸ್ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

2021-22ರಲ್ಲಿ ಪಡೆದಿರುವ ಪಾಸ್​ಗಳಿಗೆ ಜೂನ್ 30ರವರೆಗೆ ಮಾನ್ಯತೆ ಇರುತ್ತದೆ. ಮೇ 31ರವರೆಗೆ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರುತ್ತದೆ. ಪ್ರವೇಶಾತಿ ರಶೀತಿ, ಐಡಿ ಕಾರ್ಡ್ ತೋರಿಸಿ ಮಕ್ಕಳು ಉಚಿತವಾಗಿ ಬಿಎಂಟಿಸಿ ಬಸ್​ನಲ್ಲಿ ಓಡಾಡಬಹುದು

ಕರ್ನಾಟಕದಲ್ಲಿ ಇಂದಿನಿಂದ ಶಾಲೆಗಳು ಆರಂಭ; ಬಿಎಂಟಿಸಿ ಬಸ್ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ
ಬಿಎಂಟಿಸಿ ಬಸ್​ಗಳು (ಸಾಂದರ್ಭಿಕ ಚಿತ್ರ)
TV9 Web
| Updated By: sandhya thejappa|

Updated on:May 16, 2022 | 9:11 AM

Share

ಬೆಂಗಳೂರು: ಬೇಸಿಗೆ ರಜೆಯಲ್ಲಿದ್ದ ಶಾಲಾ ವಿದ್ಯಾರ್ಥಿಗಳಿಗೆ ಇಂದಿನಿಂದ ರಾಜ್ಯದ್ಯಂತ ಶಾಲೆ (School) ಆರಂಭವಾಗಿದೆ. ಕೊವಿಡ್ ಕಾರಣದಿಂದ ಎರಡು ವರ್ಷ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಬಾರಿ ಬೇಗ ಅಂದರೆ ಇಂದಿನಿಂದ ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಬಿಎಂಟಿಸಿ ಬಸ್​ಗಳಲ್ಲಿ (BMTC Buses) ಶಾಲೆಗೆ ತೆರಳುತ್ತಾರೆ. ಹೀಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆ ಹೊರಡಿಸಿ, ಬಿಎಂಟಿಸಿ ಬಸ್​ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.

2021-22ರಲ್ಲಿ ಪಡೆದಿರುವ ಪಾಸ್​ಗಳಿಗೆ ಜೂನ್ 30ರವರೆಗೆ ಮಾನ್ಯತೆ ಇರುತ್ತದೆ. ಮೇ 31ರವರೆಗೆ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರುತ್ತದೆ. ಪ್ರವೇಶಾತಿ ರಶೀತಿ, ಐಡಿ ಕಾರ್ಡ್ ತೋರಿಸಿ ಮಕ್ಕಳು ಉಚಿತವಾಗಿ ಬಿಎಂಟಿಸಿ ಬಸ್​ನಲ್ಲಿ ಓಡಾಡಬಹುದು ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ಹಳೇ ಪಾಸ್ ತೋರಿಸಿ KSRTC ಬಸ್​ಗಳಲ್ಲಿ ಸಂಚಾರ: ಇನ್ನು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ವಿದ್ಯಾರ್ಥಿಗಳು ಇಂದಿನಿಂದ ಹಳೆ ಬಸ್​ ಪಾಸ್ ತೋರಿಸಿ ಸಂಚಾರ ಮಾಡಬಹುದು. 2022-23ರ ಸಾಲಿನ ಬಸ್​ ಪಾಸ್​ ವಿತರಣೆ ದಿನಾಂಕ ಪ್ರಕಟಿಸುತ್ತೇವೆ. ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ. ಪಾಸ್​ಗಾಗಿ ಸೇವಾಸಿಂಧು ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಬಹುದು. ನಿಯಮಾನುಸಾರ ಉಚಿತ, ರಿಯಾಯಿತಿ ಪಾಸ್​ ಪಡೆಯಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ.

ಇದನ್ನೂ ಓದಿ
Image
ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್ಐ ಅಭ್ಯರ್ಥಿಗಳು; ಪತ್ರ ವೈರಲ್
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
ಇಂದು ತುಮಕೂರಿಗೆ ಸಿಎಂ ಬೊಮ್ಮಾಯಿ ಭೇಟಿ: 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸಮಾರಂಭದಲ್ಲಿ ಭಾಗಿ
Image
ಮದರಸಾಗಳಲ್ಲಿ ಕಡ್ಡಾಯ ರಾಷ್ಟ್ರಗೀತೆಗೆ ಶಾಸಕ ಹ್ಯಾರಿಸ್ ವಿರೋಧ: ಮೇ 25ಕ್ಕೆ ವಕ್ಫ್​ ಮಂಡಳಿಯಿಂದ ಮಹತ್ವದ ಸಭೆ

ಮೊದಲ ದಿನದಿಂದಲೇ ಬಿಸಿಯೂಟ: ಎರಡು ವಾರಗಳ ಬೇಸಿಗೆ ರಜೆಗೆ ಬ್ರೇಕ್ ಹಾಕಿ ಶಾಲೆಗಳು ಆರಂಭವಾಗುತ್ತಿದ್ದು, ಮೊದಲ ದಿನದಿಂದಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ. ಇಂದಿನಿಂದ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಗುತ್ತಿದೆ. ಕೊರೊನಾದಿಂದ ಕಲಿಕಾ ಹಿನ್ನಡೆ ಸರಿದೂಗಿಸಲು ಮಕ್ಕಳಿಗೆ ವರ್ಷ ಪೂರ್ತಿ ಕಲಿಕಾ ಚೇತರಿಕೆ ನಡೆಯಲಿದೆ. ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ. ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಿ ಮಕ್ಕಳ ಸ್ವಾಗತಕ್ಕೆ ತಯಾರಿ ಮಾಡಲಾಗುತ್ತಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Mon, 16 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ