ಬೆಂಗಳೂರಿನಲ್ಲಿ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ: ಶುಭ ಸುದ್ದಿ ನೀಡಿದ ಸಚಿವ ಶರಣ ಪ್ರಕಾಶ್ ಪಾಟೀಲ್

NIMHANS Hospital: ಉತ್ತರ ಬೆಂಗಳೂರಿನ ನಿವಾಸಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಬೆಂಗಳೂರಿನ ಕ್ಯಾನ್ಸನಹಳ್ಳಿಯಲ್ಲಿ ಸುಮಾರು 40 ಎಕರೆ ಪ್ರದೇಶದಲ್ಲಿ ನಿಮ್ಹಾನ್ಸ್​ ಆಸ್ಪತ್ರೆಯ ಎರಡನೇ ಘಟಕ ಸ್ಥಾಪನೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ: ಶುಭ ಸುದ್ದಿ ನೀಡಿದ ಸಚಿವ ಶರಣ ಪ್ರಕಾಶ್ ಪಾಟೀಲ್
ನಿಮ್ಹಾನ್ಸ್ ಆಸ್ಪತ್ರೆ (ಸಂಗ್ರಹ ಚಿತ್ರ)
Follow us
Vinay Kashappanavar
| Updated By: Ganapathi Sharma

Updated on: Feb 23, 2024 | 9:24 AM

ಬೆಂಗಳೂರು, ಫೆಬ್ರವರಿ 23: ಸಿಲಿಕಾನ್ ಸಿಟಿ ಬೆಂಗಳೂರಿಗರಿಗೆ (Bengaluru) ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ (Sharan Prakash Patil) ಶುಭ ಸುದ್ದಿ ನೀಡಿದ್ದಾರೆ. ಉತ್ತರ ಬೆಂಗಳೂರಿನಲ್ಲಿ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ (NIMHANS Hospital) ತಲೆ ಎತ್ತುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 40 ಎಕರೆ ಜಾಗದಲ್ಲಿ ಮಲ್ಟಿ ಸೂಪರ್ ಸ್ಪೆಷಾಲಿಟಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ನಗರದಲ್ಲಿ ರಸ್ತೆ ಅಪಘಾತದಿಂದ ನರ ಹಾಗೂ ಬ್ರೈನ್ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದುವೇ ಸಾವಿರಾರು ಜನರು ಸಾವಿಗೆ ಕಾಣವಾಗುತ್ತಿದೆ ಎಂದು ‘ಟಿವಿ9’ಗೆ ಸಚಿವರು ತಿಳಿಸಿದರು.

ಮಾನಸಿಕ ಆರೋಗ್ಯ ಮತ್ತು ನರ ಸಮಸ್ಯೆಗಳಿಂದ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ದೇಶದ ಅತ್ಯಂತ ಪ್ರತಿಷ್ಠಿತ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಾಗಿರುವ ನಿಮ್ಹಾನ್ಸ್ ಎರಡನೇ ಘಟಕ ಸ್ಥಾಪನೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಆಸ್ಪತ್ರೆಯ ಮೇಲೆ ಒತ್ತಡ ಸಾಕಷ್ಟು ಹೆಚ್ಚಾಗಿದೆ. ಬೆಡ್ ಸಮಸ್ಯೆಗಳು ಸೇರಿದಂತೆ ನಾನಾ ರೀತಿಯ ಸಮಸ್ಯೆಗಳು ಶುರುವಾಗಿವೆ. ಸದ್ಯ ಇರುವ ನಿಮ್ಹಾನ್ಸ್ ಆಸ್ಪತ್ರೆಗೆ ರಾಜ್ಯದ ಜನರು ಮಾತ್ರವಲ್ಲದೆ, ಕೇರಳ, ಆಂಧ್ರಪ್ರದೇಶ, ತಮಿಳನಾಡಿನ ಸಾಕಷ್ಟು ಜನ ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಇದರಿಂದ ಒತ್ತಡ ವಿಪರೀತ ಹೆಚ್ಚಾಗಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ ಎಂದು ಸಚಿವರು ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ

ಉತ್ತರ ಬೆಂಗಳೂರಿನ ಜನರಿಗೆ ಆ ಭಾಗದಲ್ಲಿ ಯಾವುದೇ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಆ ಭಾಗದಲ್ಲಿ ಉತ್ತಮ ಆಸ್ಪತ್ರೆಯ ಕೊರತೆಯಿದೆ. ಪರಿಣಾಮವಾಗಿ ರೋಗಿಗಳು ಪರದಾಟ ಪಡುವಂತಾಗಿದೆ. ಹೀಗಾಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಯು ಕೇಂದ್ರ ಆರೋಗ್ಯ ಇಲಾಖೆಗೆ ನಿಮ್ಹಾನ್ಸ್ ಎರಡನೇ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಇಟ್ಟಿತ್ತು. ಇದಕ್ಕೆ ಕೇಂದ್ರ ಆರೋಗ್ಯ ಇಲಾಖೆ ಹಸಿರು ನಿಶಾನೆ ತೋರಿದೆ.

ಇದನ್ನೂ ಓದಿ: ಡಿಪೋಗಳಿಗೆ ಬರಲಿದೆ ಬಿಎಂಟಿಸಿ ‘ಭೋಜನ ಬಂಡಿ’: ಬನ್ನಿ ಕುಳಿತು ಊಟ ಮಾಡೋಣ

ಎಲ್ಲಿ ನಿರ್ಮಾಣವಾಗುತ್ತಿದೆ ನಿಮ್ಹಾನ್ಸ್ ಎರಡನೇ ಘಟಕ?

ನಿಮ್ಹಾನ್ಸ್ ಎರಡನೇ ಘಟಕಕ್ಕೆ ರಾಜ್ಯ ಸರ್ಕಾರ ಈಗಾಗಲೇ ಭೂಮಿ ನೀಡಿದೆ. ಬೆಂಗಳೂರಿನ ಕ್ಯಾನ್ಸನಹಳ್ಳಿಯಲ್ಲಿ ಸರ್ಕಾರ ಒದಗಿಸಿರುವ ಸುಮಾರು 40 ಎಕರೆ ಪ್ರದೇಶದಲ್ಲಿ ನಿಮ್ಹಾನ್ಸ್ ಆಸ್ಪತ್ರೆ ತಲೆ ಎತ್ತುತ್ತಿದೆ ಎಂದು ಅವರು ತಿಳಿಸಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆ ದೇಶದಲ್ಲಿಯೇ ಸಾಕಷ್ಟು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ವಿಶೇಷ ಆಸ್ಪತ್ರೆಯಾಗಿದೆ. ನರ ವಿಭಾಗ, ಮೆದುಳಿನ ಶಸ್ತ್ರಚಿಕಿತ್ಸೆಗೆ ದೇಶದಲ್ಲೇ ಪ್ರಸಿದ್ಧವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು