ಕೊರೊನಾ ಆತಂಕದ ನಡುವೆ ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ
ರಾಜ್ಯದ 187 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತದೆ. ಕೊವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಕೊವಿಡ್ ಸೋಂಕು ಇದ್ದರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಮೂರನೇ ಅಲೆ ಆತಂಕ ಶುರುವಾಗಿದೆ. ಈ ನಡುವೆ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ (PU Supplementation Exam) ಆರಂಭವಾಗುತ್ತಿದೆ. ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 17,469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್, 593 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಆಗಸ್ಟ್ 19ರಿಂದ ಅಂದರೆ ಇಂದಿನಿಂದ ಸೆಪ್ಟೆಂಬರ್ 3ರ ವರೆಗೆ ಪರೀಕ್ಷೆ ನಡೆಯುತ್ತದೆ. ಪರೀಕ್ಷೆ ವೇಳೆ ಕೊರೊನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು.
ರಾಜ್ಯದ 187 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತದೆ. ಕೊವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಕೊವಿಡ್ ಸೋಂಕು ಇದ್ದರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು ಆರ್ಟಿಪಿಸಿಆರ್ (RTPCR) ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು. ಕೇರಳ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ 72 ಗಂಟೆಗಳ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ತರಬೇಕು.
ಪರೀಕ್ಷಾ ಕೊಠಡಿಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಡೆಸ್ಕ್ಗೆ ಒಬ್ಬರಿಗೆ ಮಾತ್ರ ಪರೀಕ್ಷೆ ಬರೆಯುವ ಅವಕಾಶವಿರುತ್ತದೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದರೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುವುದು. ಯಾವುದೇ ಆತಂಕವಿಲ್ಲದೆ ಇಲ್ಲದೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ಮುನ್ನ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಇದುವರೆಗೆ ಪರೀಕ್ಷೆ ಬರೆಯುವ ಯಾವ ವಿದ್ಯಾರ್ಥಿಗೂ ಕೊರೊನಾ ಸೋಂಕಿನ ಕುರಿತು ಮಾಹಿತಿ ಬಂದಿಲ್ಲ.
ಇದನ್ನೂ ಓದಿ
ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಆಸ್ತಿ ಮೌಲ್ಯ ಜೂನ್ ತ್ರೈಮಾಸಿಕದಲ್ಲಿ ಇಳಿಕೆ
ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ
(secondary PU supplementation exam is starting from today in Karnataka)
Published On - 8:40 am, Thu, 19 August 21