SSLC ವಾರ್ಷಿಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ಮಾರ್ಚ್ 28ರಿಂದ 15 ದಿನಗಳ ಕಾಲ ನಿಷೇಧಾಜ್ಞೆ ಜಾರಿ

ಮಾರ್ಚ್ 28ರಿಂದ ಏ.11ರವರೆಗೆ 15 ದಿನ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್(Kamal Pant) ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

SSLC ವಾರ್ಷಿಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ಮಾರ್ಚ್ 28ರಿಂದ 15 ದಿನಗಳ ಕಾಲ ನಿಷೇಧಾಜ್ಞೆ ಜಾರಿ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
Follow us
| Updated By: ಆಯೇಷಾ ಬಾನು

Updated on: Mar 22, 2022 | 8:07 PM

ಬೆಂಗಳೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ(SSLC) ಪರೀಕ್ಷೆ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆಯಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳ(Exam Centers) ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾರ್ಚ್ 28ರಿಂದ ಏ.11ರವರೆಗೆ 15 ದಿನ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್(Kamal Pant) ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪರೀಕ್ಷಾ ಕೇಂದ್ರದ ಸುತ್ತ ಇರುವ ಜೆರಾಕ್ಸ್, ಕಂಪ್ಯೂಟರ್ ಸೆಂಟರ್, ಸೈಬರ್ ಸೆಂಟರ್ಗಳನ್ನ ಮುಚ್ಚುವಂತೆ ಆದೇಶಿಸಲಾಗಿದೆ.

ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಜ.6 ಸಂಜೆ ಪ್ರಕಟಿಸಿತ್ತು. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ / ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.

ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಅವಕಾಶ ಮಾಡಿಕೊಟ್ಟಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದ್ದು, ಪರೀಕ್ಷಾ ಕೇಂದ್ರದವರೆಗೆ ನಿಗಮದ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲು ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರದ ಬಳಿ ಬಸ್ ಹತ್ತಲು ಹಾಗೂ ಇಳಿಯಲು ಕೂಡ ಅವಕಾಶ ಮಾಡಲಾಗುವುದು. ಈಗಾಗಲೇ ಎಲ್ಲಾ ನಿಯಮಗಳನ್ನು ಪಾಲಿಸುವಂತೆ ಬಸ್ ಚಾಲಕ ನಿರ್ವಾಹಕರುಗಳಿಗೆ ಸೂಚಿಸಲಾಗಿದೆ. ಇನ್ನೂ ಪರೀಕ್ಷಾ ಕೇಂದ್ರದ ಬಳಿಯೇ ನಿಲುಗಡೆಗೆ ಸೂಚಿಸಲಾಗಿದೆ ಎಂದು ಕೆಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಉದ್ಧವ್ ಠಾಕ್ರೆ ಮಾವನ ಮೇಲೆ ಇಡಿ ದಾಳಿ, ಆಸ್ತಿ ಸೀಜ್; ಬಿಜೆಪಿಯಿಂದ ಸೇಡಿನ ರಾಜಕಾರಣ ಎಂದ ಶಿವಸೇನೆ