ಬೆಂಗಳೂರಿನಲ್ಲಿ ಸಂಜೆ 6 ರಿಂದ ಶನಿವಾರ ಬೆಳಗ್ಗೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ: ಕಮಲ್ ಪಂತ್ ಆದೇಶ

| Updated By: ganapathi bhat

Updated on: Dec 31, 2021 | 4:30 PM

ಡಿಸೆಂಬರ್ 31ರ ಸಂಜೆ 6 ರಿಂದ ಜನವರಿ 1ರ ಮುಂಜಾನೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಪ್ರಮುಖ ರಸ್ತೆ, ವೃತ್ತಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಸಂಜೆ 6 ರಿಂದ ಶನಿವಾರ ಬೆಳಗ್ಗೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ: ಕಮಲ್ ಪಂತ್ ಆದೇಶ
ಕಮಲ್ ಪಂತ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ನಗರದಲ್ಲಿ ಇಂದು (ಡಿಸೆಂಬರ್ 31) ಸಂಜೆ 6 ಗಂಟೆಯಿಂದ ನಾಳೆ (ಜನವರಿ 1) ಬೆಳಗ್ಗೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡಿಸೆಂಬರ್ 31ರ ಸಂಜೆ 6 ರಿಂದ ಜನವರಿ 1ರ ಮುಂಜಾನೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಪ್ರಮುಖ ರಸ್ತೆ, ವೃತ್ತಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ತಿಳಿಸಲಾಗಿದೆ.

ಬೆಂಗಳೂರು ನಗರದಲ್ಲಿ ಇಂದು ಸಂಜೆ 6 ಗಂಟೆಯಿಂದ ನಿರ್ಬಂಧವಿದೆ. ಹೊಸ ವರ್ಷಾಚರಣೆ ಹೆಸರಿನಲ್ಲಿ ಹೆಚ್ಚು ಜನರ ಸೇರಬಾರದು. ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ವಿಧಾನಸೌಧದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಕೊರೊನಾ ಸ್ಫೋಟವಾಗಿದೆ. ಕೊರೊನಾ ಸೋಂಕು ಹರಡದಂತೆ ತಡೆಯಲು ನಿರ್ಬಂಧ ವಿಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ನಿರ್ಬಂಧ ಹಾಕಲಾಗಿದೆ. ಜನರು ತಮ್ಮ ಮನೆಗಳಲ್ಲೇ ಹೊಸವರ್ಷಾಚರಣೆ ಮಾಡಬೇಕು ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಹೊಸವರ್ಷಕ್ಕೆ ಕೌಂಟ್ ಡೌನ್ ನಡುವೆ ಬ್ರಿಗೇಡ್ ರೋಡ್ ಹಾಗೂ ಚರ್ಚ್ ಸ್ಟ್ರೀಟ್​ನಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲಾಗಿದೆ. ಹೆಜ್ಜೆ ಹೆಜ್ಜೆಗೂ ಬ್ಯಾರಿಕೇಡ್ ಹಾಕಲು ವ್ಯವಸ್ಥೆ ಮಾಡಲಾಗಿದೆ.

ಹೋಟೆಲ್, ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಆರ್ಥಿಕ ನಷ್ಟ ವಿಚಾರವಾಗಿ ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ಬಂಧಗಳನ್ನ ಹಾಕಲು ನಮಗೆ ಸಂತೋಷವಿಲ್ಲ, ನಮಗೆ ನೋವಿದೆ. ಹೋಟೆಲ್ ಪಬ್ ಅವರವರ ವ್ಯಾಪರ ಮಾಡ್ತಿದ್ದಾರೆ. ಆದ್ರೆ ಸದ್ಯ ಬದುಕು ಮುಖ್ಯ. ನಾವು ಈಗಾಗಲೇ ಸ್ಮಶಾನದಲ್ಲಿ ಆ್ಯಂಬುಲೆನ್ಸ್​ಗಳು ಕ್ಯೂ ನಿಂತಿದ್ದನ್ನ ನೋಡಿದ್ದೇವೆ. ಮಾಧ್ಯಮಗಳಲ್ಲಿ ಅದನ್ನು ನೋಡುವಾಗ ತುಂಬಾ ನೋವಾಗಿದೆ. ಅದು ಆಗಬಾರದು ಅಂತಾ ನಾವೂ ಈ ರೀತಿ ನಿರ್ಬಂಧ ಮಾಡುತ್ತೇವೆ. ರಾಜ್ಯದ ಎಲ್ಲಾ ಕಡೆ ಇದೇ ಅನ್ವಯವಾಗಲಿದೆ. ಕರಾವಳಿ ಭಾಗದಲ್ಲೂ ಇದು ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಂಜೆ 6 ಗಂಟೆಯಿಂದ ನಿರ್ಬಂಧ; ಹೊಸವರ್ಷಾಚರಣೆ ಹೆಸರಲ್ಲಿ ಹೆಚ್ಚು ಜನ ಸೇರದಂತೆ ಕ್ರಮ

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಬೆಂಗಳೂರು ಸುತ್ತಮುತ್ತ ಜಿಲ್ಲೆಗಳಲ್ಲಿ ಯಾವೆಲ್ಲಾ ಪ್ರವಾಸಿ ಕೇಂದ್ರ ಬಂದ್; ಯಾವುವು ಮುಕ್ತ ಮುಕ್ತ ಮುಕ್ತ

Published On - 4:29 pm, Fri, 31 December 21