AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗೆ ಬೆದರಿಕೆ ಹಾಕಿ ಮೂರು ದಿನ ಕಳೆದರೂ ಜಾತ್ಯತೀತವಾದಿಗಳು ಮೌನವಾಗಿದ್ದಾರೆ; ಸಿಎಂ ಬೊಮ್ಮಾಯಿ

ಯಾವೆಲ್ಲಾ ಸೆಕ್ಷನ್ ಹಾಕಬೇಕೋ ಅದನ್ನು ಹಾಕಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ ಬೊಮ್ಮಾಯಿ, ಜಡ್ಜ್​ಗೆ ‘ವೈ’ ಕೆಟಗರಿ ಭದ್ರತೆ ನೀಡಲು ತೀರ್ಮಾನಿಸಿದ್ದೇವೆ. ನ್ಯಾಯಮೂರ್ತಿಗೆ ಬೆದರಿಕೆ ಹಾಕಿ ಮೂರು ದಿನ ಕಳೆದಿದೆ ಎಂದರು.

ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗೆ ಬೆದರಿಕೆ ಹಾಕಿ ಮೂರು ದಿನ ಕಳೆದರೂ ಜಾತ್ಯತೀತವಾದಿಗಳು ಮೌನವಾಗಿದ್ದಾರೆ; ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: sandhya thejappa|

Updated on:Mar 20, 2022 | 11:50 AM

Share

ಬೆಂಗಳೂರು: ಹಿಜಾಬ್ (Hijab) ತೀರ್ಪು ನೀಡಿದ ನ್ಯಾಯಮೂರ್ತಿಗೆ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಬೆದರಿಕೆ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದೀಗ ಒಂದು ವ್ಯವಸ್ಥೆೆಗೆ ಬೆದರಿಕೆ ಹಾಕುವ ಕೆಲಸವಾಗಿದೆ. ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ವ್ಯವಸ್ಥೆ ವಿರುದ್ಧ ಎತ್ತಿಕಟ್ಟುವ ಕೆಲಸ ನಡೆಯುತ್ತದೆ. ಇದನ್ನು ದಮನ ಮಾಡಬೇಕಿದೆ. ನಾನು ನಮ್ಮ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಆರೋಪಿಗಳನ್ನು ನಮ್ಮ ರಾಜ್ಯದ ವಶಕ್ಕೆ ತೆಗೆದುಕೊಳ್ಳಬೇಕು. ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಯಾವೆಲ್ಲಾ ಸೆಕ್ಷನ್ ಹಾಕಬೇಕೋ ಅದನ್ನು ಹಾಕಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ ಬೊಮ್ಮಾಯಿ, ಜಡ್ಜ್​ಗೆ ‘ವೈ’ ಕೆಟಗರಿ ಭದ್ರತೆ ನೀಡಲು ತೀರ್ಮಾನಿಸಿದ್ದೇವೆ. ನ್ಯಾಯಮೂರ್ತಿಗೆ ಬೆದರಿಕೆ ಹಾಕಿ ಮೂರು ದಿನ ಕಳೆದಿದೆ. ಆದರೂ ಜಾತ್ಯತೀತವಾದಿಗಳು ಮೌನವಾಗಿದ್ದಾರೆ. ಸರ್ಕಾರ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ಲೈಸೆನ್ಸ್ ರದ್ದು ಮಾಡುತ್ತೇವೆ- ಸಿಎಂ: ಖಾಸಗಿ ಬಸ್​ಗಳು ಒವರ್ ಲೋಡ್ ಹಾಕುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಿಎಂ, ಈಗಾಗಲೇ ಒವರ್ ಲೋಡ್ ಹಾಕುವುದಕ್ಕೆ ಕಾನೂನು ಇದೆ. ಆದ್ರೂ ಸರ್ಕಾರದ ಕಣ್ಣು ತಪ್ಪಿಸಿ ಒವರ್ ಲೋಡ್ ಹಾಕ್ತಾರೆ. ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ನಾವು ಇನ್ನಷ್ಟು ಕಾನೂನು ಕಠಿಣ ಮಾಡುತ್ತೇವೆ. ರೂಲ್ಸ್ ಬ್ರೇಕ್ ಮಾಡಿದರೆ ಲೈಸೆನ್ಸ್ ರದ್ದು ಮಾಡುತ್ತೇವೆ. ಗಾಯಾಳುಗಳಿಗೆ ಚಿಕಿತ್ಸೆ ಸೂಕ್ತ ನೀಡಲಾಗುತ್ತಿದೆ. ಬಹಳ ಜನರು ಗಾಯಗೊಂಡಿದ್ದಾರೆ. ಹಾಗಾಗಿ ಸ್ವಲ್ಪ ತೊಂದರೆ ಆಗಿದೆ. ಅವಶ್ಯಕತೆ ಬಿದ್ದರೆ ಬೆಂಗಳೂರಿಗೆ ಗಾಯಳುಗಳನ್ನು ಕಳಿಸಲಾಗುತ್ತೆ. ಅದಕ್ಕೆ ಸೂಚನೆ ಕೂಡ ನೀಡಿದ್ದೇನೆ ಅಂತ ಹೇಳಿದರು.

ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಿಎಂ ಚಾಲನೆ: ಇಂದು ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಿಎಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ

ಕಲರ್​ಫುಲ್​ ಹೂವುಗಳ ಡೂಡಲ್​ ಮೂಲಕ ಪರ್ಷಿಯನ್​ ಹೊಸ ವರ್ಷ ಆಚರಿಸಿದ ಗೂಗಲ್​

ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಇರುವ ಮಾನದಂಡಗಳೇನು?- ‘ದಿ ಕಾಶ್ಮೀರ್ ಫೈಲ್ಸ್’ ಉಲ್ಲೇಖಿಸಿ ‘ಝುಂಡ್’ ನಿರ್ಮಾಪಕರ ಪ್ರಶ್ನೆ

Published On - 11:46 am, Sun, 20 March 22

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ