AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಲೋಪ: ರಸ್ತೆಗಿಳಿದು ಚೊಂಬು ಪ್ರದರ್ಶಿಸಿದ ನಲಪಾಡ್

ಲೋಕಸಭಾ ಚುನಾವಣೆ ಹಿನ್ನಲೆ ಇಂದು(ಏ.20) ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಭದ್ರತಾ ಲೋಪ ಉಂಟಾಗಿದ್ದು, ಮೋದಿಯವರು ಅರಮನೆ ಮೈದಾನಕ್ಕೆ ತೆರಳುವಾಗ ರಸ್ತೆಗೆ ನುಗ್ಗಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್, ಚೊಂಬು ಪ್ರದರ್ಶಿಸಿದ್ದಾರೆ. ಕೂಡಲೇ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಲೋಪ: ರಸ್ತೆಗಿಳಿದು ಚೊಂಬು ಪ್ರದರ್ಶಿಸಿದ ನಲಪಾಡ್
ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಲೋಪ
TV9 Web
| Edited By: |

Updated on:Apr 20, 2024 | 6:34 PM

Share

ಬೆಂಗಳೂರು, ಏ.20:ಲೋಕಸಭಾ ಚುನಾವಣೆ(Lok sabha election) ಹಿನ್ನಲೆ ಇಂದು(ಏ.20) ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಿದ್ದಾರೆ. ಅದರಂತೆ ಬೆಂಗಳೂರಿನ ಮೇಖ್ರಿ ಸರ್ಕಲ್​ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಮೋದಿಯವರು ಅರಮನೆ ಮೈದಾನಕ್ಕೆ ತೆರಳುವಾಗ ರಸ್ತೆಗೆ ನುಗ್ಗಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್, ಚೊಂಬು ಪ್ರದರ್ಶಿಸಿದ್ದಾರೆ. ಕೂಡಲೇ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಉಭಯ ಪಕ್ಷಗಳು ಕೂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಹೇಗಾದರೂ ಶತಾಯ ಗತಾಯ ಗೆಲುವು ಸಾಧಿಸಲು ಹರಸಾಹಸ ಪಡುತ್ತಿವೆ. ಈ ಹಿನ್ನಲೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ​ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ:ನಾನು 24/7 ಕೆಲಸ ಮಾಡುವ ಜೊತೆಗೆ 2047ರವರೆಗೆ ಯೋಜನೆ ರೂಪಿಸಿ ಜಾರಿಗೊಳಿಸುವ ಗ್ಯಾರಂಟಿ ನೀಡುತ್ತೇನೆ: ಪ್ರಧಾನಿ ನರೇಂದ್ರ ಮೋದಿ

ಬಂದೋಬಸ್ತ್ ಇದ್ದರೂ ಭದ್ರತಾ ಲೋಪ

ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿತ್ತು. ಬಂದೋಬಸ್ತ್​​ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್​ ಕಾನ್ಸ್​ಟೇಬಲ್​, ಪೊಲೀಸ್​ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.  ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿತ್ತು. ಆದರೂ ಈ ಅವಘಡ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Sat, 20 April 24

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​