AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮಾಲ್​ಗಳಲ್ಲಿ ಕಟ್ಟೆಚ್ಚರ: ಸೆಕ್ಯೂರಿಟಿ ಚೆಕಿಂಗ್, ಭದ್ರತೆ ಹೆಚ್ಚಳ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಯ ನಂತರ, ಹೆಚ್ಚಿನ ಜನಸಂದಣಿ ಸೇರುವ ಸ್ಥಳದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಚನೆ ನೀಡಿವೆ. ಎಲ್ಲಾ ರೀತಿಯ ತಪಾಸಣೆ ಮಾಡಬೇಕೆಂದು ಸೂಚನೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಲ್​ಗಳು ಅಲರ್ಟ್ ಆಗಿವೆ. ಸೆಕ್ಯೂರಿಟಿ ಚೆಕಿಂಗ್, ಭದ್ರತೆ ಹೆಚ್ಚಳ ಮಾಡಲಾಗಿದೆ.

ಬೆಂಗಳೂರಿನ ಮಾಲ್​ಗಳಲ್ಲಿ ಕಟ್ಟೆಚ್ಚರ: ಸೆಕ್ಯೂರಿಟಿ ಚೆಕಿಂಗ್, ಭದ್ರತೆ ಹೆಚ್ಚಳ
ಬೆಂಗಳೂರು ಮಾಲ್​ಗಳಲ್ಲಿ ಕಟ್ಟೆಚ್ಚರ: ಸೆಕ್ಯೂರಿಟಿ ಚೆಕಿಂಗ್, ಭದ್ರತೆ ಹೆಚ್ಚಳ
Kiran Surya
| Updated By: Ganapathi Sharma|

Updated on:May 13, 2025 | 9:13 AM

Share

ಬೆಂಗಳೂರು, ಮೇ 13: ಪಹಲ್ಗಾಮ್ ಉಗ್ರ ದಾಳಿ ಹಾಗೂ ಅದರ ನಂತರ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬೆನ್ನಲ್ಲೇ ದೇಶದ ಒಳಗಡೆ ಭಯೋತ್ಪಾದಕ ದಾಳಿಗಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಚನೆ ನೀಡಿವೆ. ಬೆಂಗಳೂರಿನಲ್ಲಿ (Bengaluru) ಅತಿಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಹೆಚ್ಚಿನ ಭದ್ರತಾ ಕ್ರಮ ಕೈಗೊಳ್ಳಲು ಪೋಲಿಸ್ ಇಲಾಖೆ ಸೂಚನೆ ನೀಡಿದ್ದು, ‌ಸಿಲಿಕಾನ್ ಸಿಟಿಯ 41 ಮಾಲ್​ಗಳಲ್ಲಿ ಬಿಗಿ ಭದ್ರತೆ ಒದಗಿಸಲು ಸೂಚಿಸಲಾಗಿದೆ. ಹೀಗಾಗಿ ಮಾಲ್​ಗಳಿಗೆ ಬರುವ ಪ್ರತಿಯೊಬ್ಬರನ್ನೂ ಭದ್ರತಾ ಸಿಬ್ಬಂದಿ ತಪಾಸಣೆ ಮಾಡಿಯೇ ಒಳಗೆ ಬಿಡುತ್ತಿದ್ದಾರೆ. ಚಾಕು-ಚೂರಿ ಸೇರಿದಂತೆ ಅಪರಾಧ ಕೃತ್ಯಕ್ಕೆ ಬಳಕೆ ಮಾಡುವ ಯಾವುದೇ ರೀತಿಯ ವಸ್ತುಗಳನ್ನು ಒಳಗೆ ಬಿಡದಿರಲು ಸೂಚನೆ ನೀಡಲಾಗಿದೆ.

ಭದ್ರತಾ ತಪಾಸಣೆ ಹೆಚ್ಚಿಸಿರುವುದು ಮಾತ್ರವಲ್ಲದೆ, ಮಾಲ್ ಹೊರಗೆ ಮತ್ತು ಒಳಗೆ ಹೆಚ್ಚಿನ ಕ್ಯಾಮರಾಗಳನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಸೆಕ್ಯುರಿಟಿ ಗಾರ್ಡ್​​ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳಲು ನಿರ್ದೇಶನ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳ ಸೂಚನೆ ಕಂಡು ಬಂದಿದ್ದೇ ಆದಲ್ಲಿ ತಕ್ಷಣವೇ ಪೋಲಿಸ್ ಕಂಟ್ರೋಲ್ ರೂಂಗೆ ಕರೆ ಮಾಡಬೇಕು. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಮಾಲ್ ಮಾಲೀಕರು ಮತ್ತು ಆಡಳಿತ ಮಂಡಳಿ ತೆಗೆದುಕೊಳ್ಳಬೇಕೆಂದು ಪೋಲಿಸ್ ಇಲಾಖೆ ಸಲಹೆ ನೀಡಿದೆ.

ಮಾಲ್​​ಗಳಲ್ಲಿ ಹೆಚ್ಚಿನ ಭದ್ರತಾ ತಪಾಸಣೆ ನಡೆಸುವುದಕ್ಕೆ ಸಾರ್ವಜನಿಕರು ಕೂಡ ಸಹಮತ ವ್ಯಕ್ತಪಡಿಸಿದ್ದು, ಹೆಚ್ಚಿನ ಜನಸಂದಣಿ ಸೇರುವ ಸ್ಥಳದಲ್ಲಿ ಹೆಚ್ಚು ತಪಾಸಣೆ ಮಾಡುವುದು ಒಳ್ಳೆಯದು ಎಂದಿದ್ದಾರೆ.

ಇದನ್ನೂ ಓದಿ
Image
ಈಜಿಪುರ ಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳಲು ಟ್ರಂಪ್ ಮಧ್ಯಸ್ಥಿಕೆ ವಹಿಸಬೇಕು
Image
ಮೋದಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಕರ್ನಾಟಕ ಕಾಂಗ್ರೆಸ್
Image
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
Image
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ

ಇದನ್ನೂ ಓದಿ: ಪರಮಾಣು ಬೆದರಿಕೆಗೆ ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಕೊಟ್ಟ ಖಡಕ್ ಸಂದೇಶವೇನು ಗೊತ್ತಾ?

ಒಟ್ಟಿನಲ್ಲಿ, ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಬೆಂಗಳೂರಿನ ಎಲ್ಲಾ ಮಾಲ್​ಗಳಲ್ಲೂ ಕಟ್ಟೆಚ್ಚರ ವಹಿಸಲು ಮುಂದಾಗಿರುವುದು ಸಾರ್ವಜನಿಕರಲ್ಲಿ ನೆಮ್ಮದಿಗೆ ಕಾರಣವಾಗಿದೆ. ಇದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 am, Tue, 13 May 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!