AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ತಜ್ಞ, ಮಾಜಿ ಉಪಕುಲಪತಿ, ಪ್ರೋ. ಎಂಎಸ್​ ತಿಮ್ಮಪ್ಪ ನಿಧನ

ಬೆಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ, ಶಿಕ್ಷಣ ತಜ್ಞ, ಪ್ರೊ.ಎಂ.ಎಸ್. ತಿಮ್ಮಪ್ಪ ಅವರು ನಿಧನರಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ 1.50ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದರು.

ಶಿಕ್ಷಣ ತಜ್ಞ, ಮಾಜಿ ಉಪಕುಲಪತಿ, ಪ್ರೋ. ಎಂಎಸ್​ ತಿಮ್ಮಪ್ಪ ನಿಧನ
ಪ್ರೋ ಎಂಎಸ್​ ತಿಮ್ಮಪ್ಪ
ವಿವೇಕ ಬಿರಾದಾರ
|

Updated on:Nov 12, 2024 | 10:05 AM

Share

ಬೆಂಗಳೂರು, ನವೆಂಬರ್​​ 12: ಶಿಕ್ಷಣ ತಜ್ಞ, ಮಾಜಿ ಉಪಕುಲಪತಿ, ತತ್ವಜ್ಞಾನಿ ಪ್ರೊ.ಎಂ.ಎಸ್. ತಿಮ್ಮಪ್ಪ (83) ನಿಧನರಾಗಿದ್ದಾರೆ. ಪ್ರೊ.ಎಂ.ಎಸ್. ತಿಮ್ಮಪ್ಪ ಅವರು ಅಕ್ಟೋಬರ್ 11ರ ಮುಂಜಾನೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರು. ಇದರಿಂದ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ತಕ್ಷಣವೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಮಂಗಳವಾರ ಬೆಳಗಿನ ಜಾವ 1.50ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದರು.

ಪ್ರೊ ತಿಮ್ಮಪ್ಪ ಎರಡು ಅವಧಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್​ ಆಗಿ ಮತ್ತು ಅದರ ಉಪಕುಲಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಮನೋವಿಜ್ಞಾನದ ಪ್ರಾಧ್ಯಾಪಕರಾಗಿ, ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು. ಹಲವಾರು ಡಾಕ್ಟರೇಟ್ ಮತ್ತು ಎಂಫಿಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಹಲವು ವರ್ಷಗಳ ಕಾಲ ಮನೋವಿಜ್ಞಾನ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದರು.

ಪ್ರೊ ತಿಮ್ಮಪ್ಪ ಅವರು ತಮ್ಮ ವ್ಯಕ್ತಿತ್ವ ಪ್ರೇರಣಾದಾಯಿಯಾಗಿತ್ತು. ಪರಿಣಾಮಕಾರಿ ಸಂವಹನ ಮತ್ತು ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದರು. ಪ್ರೊ ತಿಮ್ಮಪ್ಪ ಅವರ ಪುತ್ರಿ 2000ರಲ್ಲಿ ನಿಧನರಾದರು. ನಂತರ 2007ರಲ್ಲಿ ಪ್ರೊ ತಿಮ್ಮಪ್ಪ ಅವರು ಪತ್ನಿಯನ್ನು ಕಳೆದುಕೊಂಡರು. ನಿವೃತ್ತಿಯ ನಂತರ ಒಂಟಿಯಾಗಿ ವಾಸಿಸುತ್ತಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:02 am, Tue, 12 November 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!