AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ವಾಕಿಂಗ್ ವಿಚಾರಕ್ಕೆ ಹೊಡೆದಾಟ: ಪೊಲೀಸ್ ಠಾಣೆ ಮೆಟ್ಟಿಲೇರಿದ ಶ್ವಾನ ಜಗಳ

ಮನೆಯಲ್ಲಿ ಮುದ್ದಾಗಿ ಸಾಕಿರುವ ನಾಯಿಗಳನ್ನು ಪ್ರತಿನಿತ್ಯ ವಾಕಿಂಗ್ ಕರೆದುಕೊಂಡು ಹೋಗುವುದು, ಅವುಗಳಿಗೆ ಊಟೋಪಚಾರ, ಕಾಳಜಿವಹಿಸುತ್ತಾರೆ. ಅದರಲ್ಲೂ ಮಕ್ಕಳಗಿಂತೂ ಹೆಚ್ಚಾಗಿ ಶ್ವಾನಗಲಿಗೆ ಹೆಚ್ಚನ ಸಮಯ ಕೊಡುತ್ತರೆ. ಆದ್ರೆ ನಾಯಿ ವಿಚಾರಕ್ಕೆ ಬೆಂಗಳೂರಿನಲ್ಲಿ ಹಿರಿಯ ನಾಗರೀಕರ ನಡುವೆ ದೊಡ್ಡ ಗಲಾಟೆಯೇ ಆಗಿದ್ದು, ಇದೀಗ ಈ ನಾಯಿ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹಾಗಾದ್ರೆ, ಏನಿದು ನಾಯಿ ಗಲಾಟೆ ಎನ್ನುವುದನ್ನು ನೋಡಿ.

ನಾಯಿ ವಾಕಿಂಗ್ ವಿಚಾರಕ್ಕೆ ಹೊಡೆದಾಟ: ಪೊಲೀಸ್ ಠಾಣೆ ಮೆಟ್ಟಿಲೇರಿದ ಶ್ವಾನ ಜಗಳ
Senior Citizen Fighting
Shivaprasad B
| Edited By: |

Updated on: Mar 06, 2026 | 9:55 PM

Share

ಬೆಂಗಳೂರು, (ಮಾರ್ಚ್ 06): ಕ್ಷುಲ್ಲಕ ವಿಚಾರಕ್ಕೆ ನಡೆದ ಮಾತಿನ ಚಕಮಕಿ, ನೋಡ-ನೋಡ್ತಿದ್ದಂತೆ ಬಡಿದಾಡುವ ಹಂತಕ್ಕೆ ಹೋಗಿದೆ. ವ್ಯಾಯಾಮ ಮಾಡ್ತಿದ್ದ ಏಳೆಂಟು ಜನ ಹಿರಿಯ ನಾಗರೀಕರು(senior citizen)  ಏಕಾಏಕಿ ನಾಯಿಯನ್ನು ವಾಕಿಂಗ್ ಮಾಡಿಸುತ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಕೆಳಕ್ಕೆ ಉರುಳಿ ಬಿದ್ದರೂ ಸಹ ಬಿಡದೆ ಕಾಲಿನಿಂದ ಒದ್ದು ದೌರ್ಜನ್ಯ ನಡೆಸಿದ್ದಾರೆ. ಈ ಘಟನೆ ಬೆಂಗಳೂರಿನ (Bengaluru)  ವರ್ತೂರಿನ ಬ್ರಿಗೇಡ್ ಈಥೋಪಿಯ ಈಸ್ಟ್ ಆಂಟೊಪಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದ್ದು, ಗಲಾಟೆ ವೇಳೆ ಹಲ್ಲೆಗೊಳಗಾಗಿ ನೊಂದ ತರಣ್ ಎನ್ನುವರು ವರ್ತೂರು ಠಾಣೆಗೆ ದೂರು ನೀಡಿದ್ದಾರೆ.

ಹಿರಿಯರು ಗಲಾಟೆ ಮಾಡಿಕೊಂಡಿದ್ಯಾಕೆ?

ವರ್ತೂರಿನ ಬ್ರಿಗೇಡ್ ಈಥೋಪಿಯ ಈಸ್ಟ್ ಆಂಟೊಪಿಯ ಅಪಾರ್ಟ್ಮೆಂಟ್ ಇಲ್ಲಿ ನೂರಾರು ಕುಟುಂಬಗಳು ವಾಸಮಾಡಿತ್ತಿದ್ದಾರೆ. ಮೊನ್ನೆ ತರುಣ್ ಆರೋರ ಎನ್ನುವವರು ತಮ್ಮ ಸಾಕು ನಾಯಿಯನ್ನು ವಾಕಿಂಗ್ ಮಾಡಿಸಲು ಹೊರಗಡೆ ಕರೆದುಕೊಂಡು ಬಂದಿದ್ದಾರೆ. ಇದೇ ಅಪಾರ್ಟ್ಮೆಂಟ್ ಜಾಗದಲ್ಲಿ ವಾಕಿಂಗ್, ಯೋಗ, ಮಾಡಲು ಜಾಗವನ್ನು ನಿಗದಿ ಮಾಡಿದ್ದಾರಂತೆ. ಇಲ್ಲಿಗೆ ನಾಯಿಯನ್ನು ಕರೆದುಕೊಂಡು ಬಂದು ಮೂತ್ರ ವಿಸರ್ಜನೆ ಮಾಡಿಸುತ್ತಿದ್ದರಂತೆ. ಆದ್ರೆ, ತರುಣ್ ಬೇರೆ ಸ್ಥಳಕ್ಕೆ ಶ್ವಾನವನ್ನು ಕರೆದುಕೊಂಡು ಬಂದಿದ್ದಕ್ಕೆ ಕೆಲವರು ಗರಂ ಆಗಿದ್ದಾರೆ. ಅಲ್ಲದೇ ಇಲ್ಲಿಗೆ ಯಾಕೆ ನಾಯಿಯನ್ನು ಕರೆದುಕೊಂಡು ಬಂದ್ರಿ‌ ಎಂದು ಕಿರಿಕ್ ಮಾಡಿ ಜಗಳಕ್ಕಿಳಿದಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು ಏಳೆಂಟು ಜನ ಸೀನಿಯರ್ ಸಿಟಿಜನ್ಸ್ ಸೇರಿಕೊಂಡು ಶ್ವಾನ ಮಾಲೀಕ ತರುಣ್ ಹಲ್ಲೆ ಮಾಡಿದ್ದಾರೆ. ಹೊಡೆದು, ಕಾಲಿನಿಂದ ‌ಒದ್ದು ಕೆಳಗೆ ಬೀಳಿಸಿದ್ದಾರೆ. ಬಳಿಕ ಅವರಲ್ಲಿದ್ದ ಮಹಿಳೆ ಗಲಾಟೆಯನ್ನು ಬಿಡಿಸಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಕಿಂಗ್ ಹೋದ ಮಹಿಳೆ 25 ಅಡಿ ಗುಂಡಿಗೆ ಬಿದ್ದು ಪರದಾಟ: ಪತ್ತೆ ಮಾಡಿ ರಕ್ಷಿಸಿದ್ದೇ ರೋಚಕ!

ದೂರು-ಪ್ರತಿದೂರು

ಗಲಾಟೆ ವೇಳೆ ಹಲ್ಲೆಗೊಳಗಾಗಿ ನೊಂದ ತರಣ್ ವರ್ತೂರು ಠಾಣೆಗೆ ದೂರು ನೀಡಿದ್ದಾರೆ. ಸಾಲದಕ್ಕೆ ಹಲ್ಲೆಗೊಳಗಾದ ತರುಣ್ ಅರೋರ್ ಇನ್ ಪ್ಯಾಂಟ್ರಿ ರಸ್ತೆಯ ನಗರ ಪೋಲೀಸ್ ಆಯುಕ್ತರ ಕಚೇರಿಗೆ ತೆರಳಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಹಲ್ಲೆ ಮಾಡಿದ ತಪ್ಪಿತಸ್ಥರ ವಿರುದ್ದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇದಾದ ಬಳಿ ಇತ್ತ ಮಹಿಳೆಯೊಬ್ಬರು ಇದಕ್ಕೆ ಪ್ರತಿದೂರು ನೀಡಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ.ನಮ್ಮ ಮಕ್ಕಳು ವಿದೇಶದಲ್ಲಿದ್ದಾರೆ ನಾವಿಬ್ಬರೇ ಇದ್ದೇವೆ. ನನ್ನ ಕಡೆ ದೊಡ್ಡ ಗುಂಪಿದೆ. ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾರೆ ಎಂದು ಪ್ರತಿದೂರು ನೀಡಿದ್ದಾರೆ. ಸದ್ಯ ಘಟನೆ ಬಗ್ಗೆ ಎರಡು ಕಡೆಯವರಿಂದ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು,ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಒಟ್ಟಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಶುರುವಾದ ಜಗಳ ಹಿರಿಯ ನಾಗರೀಕರ ಗಲಾಟೆ ಬಡಿದಾಟಕ್ಕೆ ಕಾರಣವಾಗಿದ್ದು,ಇದೀಗ ಠಾಣೆ ಮೇಟ್ಟಿಲೇರುವಂತೆ ಮಾಡಿದ್ದು ವಿಪರ್ಯಾಸವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ