AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಕಿರುಕುಳ ನೀಡಲೆಂದೇ ವರ್ಗಾವಣೆ ಮಾಡಿದೆ; ಅವಧಿಪೂರ್ವ ವರ್ಗಾವಣೆ ಹಿನ್ನೆಲೆ ಡಿಜಿಪಿ ರವೀಂದ್ರನಾಥ್ ರಾಜೀನಾಮೆ

ಕರ್ನಾಟಕ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿತ್ತು. ಹೀಗಾಗಿ ಅವಧಿಪೂರ್ವ ವರ್ಗಾವಣೆ ಹಿನ್ನೆಲೆ ಡಿಜಿಪಿ ರವೀಂದ್ರನಾಥ್ ರಾಜೀನಾಮೆ ಸಲ್ಲಿಸಿದ್ದಾರೆ.

ಸರ್ಕಾರ ಕಿರುಕುಳ ನೀಡಲೆಂದೇ ವರ್ಗಾವಣೆ ಮಾಡಿದೆ; ಅವಧಿಪೂರ್ವ ವರ್ಗಾವಣೆ ಹಿನ್ನೆಲೆ ಡಿಜಿಪಿ ರವೀಂದ್ರನಾಥ್ ರಾಜೀನಾಮೆ
ಡಿಜಿಪಿ ರವೀಂದ್ರನಾಥ್ ರಾಜೀನಾಮೆ
TV9 Web
| Updated By: ಆಯೇಷಾ ಬಾನು|

Updated on:May 10, 2022 | 5:23 PM

Share

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ರವೀಂದ್ರನಾಥ್( DGP Ravindranath Resign) ರಾಜೀನಾಮೆ ಸಲ್ಲಿಸಿದ್ದಾರೆ. ಅವಧಿಪೂರ್ವ ವರ್ಗಾವಣೆ ಹಿನ್ನೆಲೆ ರಾಜೀನಾಮೆ ನೀಡಿದ್ದಾರೆ. ರವೀಂದ್ರನಾಥ್ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿಯಾಗಿದ್ದರು. ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಐಪಿಎಸ್ ಹುದ್ದೆಗೇರಿದ್ದ ಪ್ರಕರಣ ಸಂಬಂಧ ರವೀಂದ್ರನಾಥ್ ತನಿಖೆ ಆರಂಭಿಸಿದ್ದರು. ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯಗೆ ನೊಟೀಸ್ ನೀಡಿದ್ದ ಬಳಿಕ ರವೀಂದ್ರನಾಥ್ರನ್ನ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿತ್ತು. ಕರ್ನಾಟಕ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿತ್ತು. ಹೀಗಾಗಿ ಅವಧಿಪೂರ್ವ ವರ್ಗಾವಣೆ ಹಿನ್ನೆಲೆ ಡಿಜಿಪಿ ರವೀಂದ್ರನಾಥ್ ರಾಜೀನಾಮೆ ಸಲ್ಲಿಸಿದ್ದಾರೆ.

ಕೆಲ ಕಾರಣಗಳಿಂದ ನೊಂದು ನಾನು ಅತ್ಯಂತ ನೋವಿನಿಂದ ಈ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಕಲಿ‌ಜಾತಿ ಪ್ರಮಾಣ ಪತ್ರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದೆ. ಎಸ್.ಎಸ್ಟಿ ಕಾಯ್ದೆಯಡಿ ಪೊಲೀಸ್ ಸಿಬ್ಬಂದಿಗೆ ಭದ್ರತಾ ಸಮಿತಿ ರಚಿಸಲು‌ ಕೋರಿದ್ದೆ. ಆದರೆ ಸರ್ಕಾರ ನನ್ನ ಮನವಿಯನ್ನ ಪರಿಗಣಿಸಿಲ್ಲ. ಬದಲಾಗಿ ಕಿರುಕುಳ ನೀಡಲೆಂದೇ ವರ್ಗಾವಣೆ ಮಾಡಿದ್ದಾರೆ. ಇದಕ್ಕೆ ಬೇಸತ್ತು ನನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನಿರ್ಲಕ್ಷ್ಯತನ ಬೇಸರ ತಂದಿದೆ ಐಪಿಎಸ್ ಹುದ್ದೆಗೆ ಡಾ.ಪಿ.ರವೀಂದ್ರನಾಥ್ ಗುಡ್ ಬೈ ವಿಚಾರಕ್ಕೆ ಸಂಬಂಧಿಸಿ ಡಿಜಿಪಿ ಡಾ.ಪಿ.ರವೀಂದ್ರನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ನಾನು ಸಮರ ಸಾರಿದ್ದೆ. ಈ ಹಂತದಲ್ಲೇ ನನ್ನ ವರ್ಗಾವಣೆ ಮಾಡಿದ್ದು ಬೇಸರ ತಂದಿತ್ತು. ನಿವೃತ್ತ ಐಪಿಎಸ್‌ ಅಧಿಕಾರಿಯೊಬ್ಬರಿಗೆ ನೋಟಿಸ್ ನೀಡಿದ್ದೆ. ಅವರು ವಕೀಲರ ಮೂಲಕ 10 ದಿನ ಕಾಲಾವಕಾಶ ಕೇಳಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ನನ್ನನ್ನು ವರ್ಗಾವಣೆ ಮಾಡಿತ್ತು. ನನ್ನ ವರ್ಗಾವಣೆಯಲ್ಲಿ ಈ ಪ್ರಕರಣದ ಪಾತ್ರ ಇದೆ. ನನ್ನ ವರ್ಗಾವಣೆ ಬಗ್ಗೆ ಜನರಿಗೆ ತಪ್ಪು ಸಂದೇಶ ಹೋಗಬಾರದು. ಜವಾಬ್ದಾರಿಯುತ ಅಧಿಕಾರಿಯಾಗಿ ನಾನು ಮಾತನಾಡುತ್ತಿದ್ದೇನೆ. 1995ರಿಂದಲೇ ರಾಜ್ಯದಲ್ಲಿ ಎಸ್ಸಿ, ಎಸ್ಟಿ ಕಾಯ್ದೆ ಜಾರಿಯಲ್ಲಿದೆ. ಪೊಲೀಸ್ ಇಲಾಖೆಯಲ್ಲೂ ಕಾಯ್ದೆ ಜಾರಿಗೆ ಮನವಿ ಮಾಡಿದ್ದೆ. ಪದೇಪದೆ ಕೇಳಿದ್ರೂ ಸರ್ಕಾರದ ನಿರ್ಲಕ್ಷ್ಯತನ ಬೇಸರ ತಂದಿತ್ತು ಎಂದು ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಸರ್ಕಾರದ ವಿರುದ್ಧ ಬೇಸರ ಹೊರ ಹಾಕಿದ್ದು ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Tue, 10 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ