ಮುಂಬೈ ಹೋಟೆಲ್ ದಾಳಿ ಉಗ್ರರ ಬಂಧನಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಸದಾನಂದ್​ ವಸಂತ್ ಎನ್​​ಐಎ ಡಿಜಿಯಾಗಿ ಅಧಿಕಾರ ಸ್ವೀಕಾರ

ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಸದಾನಂದ ವಸಂತ್ ದಾಟೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‍ಐಎ) ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. ಸೇವೆಯಿಂದ ನಿವೃತ್ತರಾದ ದಿನಕರ್ ಗುಪ್ತಾರಿಂದ ಅಧಿಕಾರ ಹಸ್ತಾಂತರ ಮಾಡಲಾಗಿದೆ

ಮುಂಬೈ ಹೋಟೆಲ್ ದಾಳಿ ಉಗ್ರರ ಬಂಧನಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಸದಾನಂದ್​ ವಸಂತ್ ಎನ್​​ಐಎ ಡಿಜಿಯಾಗಿ ಅಧಿಕಾರ ಸ್ವೀಕಾರ
ಎನ್​​ಐಎ ಡಿಜಿಯಾಗಿ ಸದಾನಂದ್​ ವಸಂತ್ ಅಧಿಕಾರ ಸ್ವೀಕಾರ
Follow us
TV9 Web
| Updated By: ಆಯೇಷಾ ಬಾನು

Updated on: Apr 01, 2024 | 7:47 AM

ಬೆಂಗಳೂರು, ಏಪ್ರಿಲ್.01: ಎನ್​​ಐಎ (NIA) ನೂತನ ಡಿಜಿಯಾಗಿ ಸದಾನಂದ್​ ವಸಂತ್ (Sadanand Vasant)ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸೇವೆಯಿಂದ ನಿವೃತ್ತರಾದ ದಿನಕರ್ ಗುಪ್ತಾರಿಂದ (Dinkar Gupta) ಅಧಿಕಾರ ಹಸ್ತಾಂತರ ಮಾಡಲಾಗಿದೆ. ಮಹಾರಾಷ್ಟ್ರ ಕೇಡರ್‌ನ 1990ರ ಬ್ಯಾಚ್‌ನ IPS ಅಧಿಕಾರಿ ಸದಾನಂದ್ ವಸಂತ್ ಅವರು ದಿನಕರ್ ಗುಪ್ತಾ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ. 2008ರಲ್ಲಿ ಮುಂಬೈ ಹೋಟೆಲ್ ಮೇಲಿನ ಭಯೋತ್ಪಾದಕರ ದಾಳಿ ವೇಳೆ ಸದಾನಂದ ಅವರು ಮಹಾರಾಷ್ಟ್ರ ATS ಮುಖ್ಯಸ್ಥರಾಗಿದ್ದರು. ಉಗ್ರರನ್ನು ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2008ರಲ್ಲಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಭಾಜನರಾಗಿದ್ದರು.

ಮಹಾರಾಷ್ಟ್ರ ಕೇಡರ್‍ನ 1990-ಬ್ಯಾಚ್ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿರುವ ಸದಾನಂದ ಅವರು ಡಿಸೆಂಬರ್ 31, 2026 ರಂದು ಅವರ ನಿವೃತ್ತಿಯ ಅವಧಿಯವರೆಗೆ ಎನ್‍ಐಎಯ ಡೈರೆಕ್ಟರ್ ಜನರಲ್ (ಡಿಜಿ) ಆಗಿ ಸೇವೆ ಸಲ್ಲಿಸಲಿದ್ದಾರೆ. ರಾಜಸ್ಥಾನ ಕೇಡರ್‍ನ 1990-ಬ್ಯಾಚ್ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಶರ್ಮಾ ಅವರನ್ನು ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋದ ಮಹಾನಿರ್ದೇಶಕರನ್ನಾಗಿ ನೇಮಿಸಿತು. ಅವರು ಜೂನ್ 30, 2026 ರಂದು ತಮ್ಮ ನಿವೃತ್ತಿಯಾಗುವವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಾರ್ಚ್ ಅಂತ್ಯಕ್ಕೆ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುವ ಬಾಲಾಜಿ ಶ್ರೀವಾಸ್ತವ ಅವರ ನಂತರ ಶರ್ಮಾ ಅವರು ಅಧಿಕಾರ ವಹಿಸಿಕೊಳ್ಳುತ್ತಾರೆ. ಪಿಯೂಷ್ ಆನಂದ್ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‍ಡಿಆರ್‍ಎಫ್) ನೂತನ ಮುಖ್ಯಸ್ಥರಾಗಲಿದ್ದಾರೆ.

ಇದನ್ನೂ ಓದಿ: ಉತ್ತರ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ

ಇಂಡಿಯಾ ಮೈತ್ರಿಕೂಟ ಪಕ್ಷಗಳು ಒಗ್ಗಟ್ಟು ಪ್ರದರ್ಶನ

ಇಂಡಿಯಾ ಮೈತ್ರಿಕೂಟ ಪಕ್ಷಗಳು ನಿನ್ನೆ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಶಕ್ತಿಪ್ರದರ್ಶನ ಮಾಡಿದ್ವು. ಕಾಂಗ್ರೆಸ್, ಉದ್ಧವ್ ಬಣದ ಶಿವಸೇನೆ, ಆಮ್ ಆದ್ಮಿ ಪಕ್ಷ ಸೇರಿ ಪ್ರತಿಪಕ್ಷಗಳ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಐಟಿ-ಇಡಿ-ಸಿಬಿಐ ಬಿಜೆಪಿ ವಿಂಗ್‌ಗಳಾಗಿವೆ. ದೆಹಲಿ ಸಿಎಂ ಕೇಜ್ರಿವಾಲ್‌ ಮತ್ತು ಹೇಮಂತ್‌ ಸೊರೈನ್ ಬಂಧನದ ಮುೂಲಕ ವಿಪಕ್ಷವನ್ನ ಹತ್ತಿಕ್ಕಲಾಗ್ತಿದೆ. ಅವರನ್ನ ಬಿಡುಗಡೆ ಮಾಡುವಂತೆ ಸಭೆಯಲ್ಲಿ ಒತ್ತಾಯಿಸಲಾಯ್ತು.

‘ಪ್ರಜಾಪ್ರಭುತ್ವ ಉಳಿಸಲು ಇಂಡಿಯಾ ಗೆಲ್ಲಿಸಿ’

ಈ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಲು ಮೋದಿ ಯತ್ನಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವ್ರು, ಈ ಯತ್ನದಲ್ಲಿ ಯಶಸ್ವಿಯಾದ್ರೆ, ಸಂವಿಧಾನವನ್ನು ಬದಲಾಯಿಸಲಾಗುತ್ತದೆ. ಅಲ್ದೇ, ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತದೆ. ಹಾಗಾಗಿ ಪ್ರಜಾಪ್ರಭುತ್ವ ಉಳಿಸಿ ಅಂತಾ ಮನವಿ ಮಾಡಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?