ಕೆಮಿಕಲ್ ಆಯಿಲ್ ತುಂಬಿದ್ದ ಲಾರಿ‌ ಪಲ್ಟಿ; ಲಾರಿ ಅಡಿಗೆ ಸಿಲುಕಿ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ಸಾವು

ಕೆಮಿಕಲ್ ಆಯಿಲ್ ತುಂಬಿದ್ದ ಲಾರಿ‌ ಪಲ್ಟಿ; ಲಾರಿ ಅಡಿಗೆ ಸಿಲುಕಿ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ಸಾವು
ಗಂಗಾಧರ ಮೂರ್ತಿ(48)

ಗಂಗಾಧರ ಮೂರ್ತಿ ಬೈಕ್​ನಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದಿದ್ದಾರೆ.

TV9kannada Web Team

| Edited By: preethi shettigar

Jan 23, 2022 | 10:30 PM

ಬೆಂಗಳೂರು: ನಗರದ ಟೌನ್ ಹಾಲ್ ಮುಂದೆ ಲಾರಿಯೊಂದು (Lorry) ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಬಿದ್ದ ಪರಿಣಾಮ ಲಾರಿ ಅಡಿಗೆ ಸಿಲುಕಿ ಬೈಕ್​ ಸವಾರ ಮೃತಪಟ್ಟಿದ್ದಾರೆ. ಸವಾರ ಗಂಗಾಧರ ಮೂರ್ತಿ(48)  ಮೃತ ದುರ್ದೈವಿ. ಗಂಗಾಧರ ಮೂರ್ತಿ ಬೈಕ್​ನಲ್ಲಿ (Bike) ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಹಿರಿಯ ಪತ್ರಕರ್ತ (Senior journalist) ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನ ಟೌನ್​ಹಾಲ್ ಮುಂದೆ ಲಾರಿ ಪಲ್ಟಿಯಾದಾಗ ಲಾರಿ ಕೆಳಗೆ ಸಿಲುಕಿದ್ದ ಸವಾರನನ್ನು ಸ್ಥಳೀಯರು ಹೊರತೆಗೆದಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಗಂಗಾಧರ್ ಮೂರ್ತಿಯನ್ನು  ದಾಖಲು ಮಾಡಲಾಗಿತ್ತು. ಸದ್ಯ ಕ್ರೇನ್ ಮೂಲಕ ಲಾರಿ ತೆರವು ಕಾರ್ಯಾಚರಣೆ ನಡೆದಿದ್ದು, ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಚಾಲಕನಿಗಾಗಿ ಹಲಸೂರು ಗೇಟ್ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಎಂಹೆಚ್‌ 04 ಹೆಚ್‌ಎಸ್‌ 2180 ಸಂಖ್ಯೆಯ ಲಾರಿ ಅಪಘಾತವಾಗಿದೆ.

ಗಂಗಾಧರ ಮೂರ್ತಿ ಅವರ ಪತ್ರಕರ್ತ ವೃತ್ತಿ ಸೇವೆ ಗುರುತಿಸಿ ಕಳೆದ ವರ್ಷ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಕಾರ್ಯ ನಿರತ ಪತ್ರಕರ್ತರ ಸಂಘ ಸನ್ಮಾನಿಸಿತ್ತು.

ಸಂತಾಪ:

ವಿಜಯವಾಣಿ ಪತ್ರಿಕೆಯಲ್ಲಿ ಮುಖ್ಯ ಉಪಸಂಪಾದಕರಾಗಿದ್ದ ಗಂಗಾಧರ ಮೂರ್ತಿ ನಿಧನಕ್ಕೆ ವಿಜಯವಾಣಿ ಬಳಗ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಗಂಗಾಧರ ಮೂರ್ತಿ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಗದಗ: ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ಲಾರಿ ನುಗ್ಗಿದ ಘಟನೆ ಗದಗ ನಗರದ ಹೊರವಲಯದ ಹೊಂಬಳ ರಸ್ತೆಯಲ್ಲಿ ನಡೆದಿದೆ. ಶೋರೂಂನಿಂದ ಹೊರಟಿದ್ದ 14 ವ್ಹೀಲ್​ನ ಹೊಸ ಲಾರಿ ಜಮೀನಿಗೆ ನುಗ್ಗಿದೆ. ಕುಡಿದ ಅಮಲಿನಲ್ಲಿ ಚಾಲಕ ಲಾರಿ ಚಲಾಯಿಸುತ್ತಿದ್ದ ಎನ್ನಲಾಗಿದ್ದು, ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ತುಮಕೂರು: ವಿದ್ಯುತ್ ಕಂಬದಿಂದ ಬಿದ್ದು ವಾಟರ್ ಮ್ಯಾನ್ ಸಾವು

ತುಮಕೂರು ಜಿಲ್ಲೆಯ ತುರುವೇಕರೆ ತಾಲೂಕಿನ ಚಿಕ್ಕಪುರ ಗ್ರಾಮದಲ್ಲಿ ವಿದ್ಯುತ್ ಕಂಬದಿಂದ ಬಿದ್ದು ವಾಟರ್ ಮ್ಯಾನ್ ಪಂಚಾಕ್ಷರಿ(45) ಸಾವನ್ನಪ್ಪಿದ್ದಾರೆ. ವಿದ್ಯುತ್ ದೀಪ ದುರಸ್ತಿಗಾಗಿ ಕಂಬವೇರಿದ್ದಾಗ ತಂತಿ ಸ್ಪರ್ಶವಾಗಿ ಕೆಳಗೆ ಬಿದ್ದು ಪಂಚಾಕ್ಷರಿ ಮೃತಪಟ್ಟಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತುಮಕೂರು: ಅಪಘಾತದಲ್ಲಿ ಮೂವರ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕ 16 ವರ್ಷಗಳ ಬಳಿಕ ಪೊಲೀಸರ ವಶಕ್ಕೆ!

ಸಿನಿಮೀಯ ಶೈಲಿಯಲ್ಲಿ ಭೀಕರ ರಸ್ತೆ ಅಪಘಾತ; ಖ್ಯಾತ​ ನಟ ಬಚಾವ್​, ವೈರಲ್​ ಆಯ್ತು ಫೋಟೋ

Follow us on

Related Stories

Most Read Stories

Click on your DTH Provider to Add TV9 Kannada