ವೃತ್ತಿ ರಂಗಭೂಮಿಯ ಬಗ್ಗೆ ಅಕ್ಕರಾಸ್ಥೆಯಿಂದ ಬರೆಯುತ್ತಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ ನಿಧನ

Gudihalli Nagaraja: ಕನ್ನಡ ಪತ್ರಿಕೋದ್ಯಮದ ವಿವಿಧ ಮಜಲುಗಳನ್ನು ಬಲ್ಲವರಾಗಿದ್ದ ಗುಡಿಹಳ್ಳಿ ನಾಗರಾಜ ರಂಗಭೂಮಿಯ ಬಗ್ಗೆ ನಿಯಮಿತವಾಗಿ ಬರೆಯುತ್ತಿದ್ದರು.

ವೃತ್ತಿ ರಂಗಭೂಮಿಯ ಬಗ್ಗೆ ಅಕ್ಕರಾಸ್ಥೆಯಿಂದ ಬರೆಯುತ್ತಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ ನಿಧನ
ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 26, 2021 | 6:44 PM

ಬೆಂಗಳೂರು: ಕರ್ನಾಟಕದ ವೃತ್ತಿ ರಂಗಭೂಮಿಯ ಬಗ್ಗೆ ಅಳವಾದ ಜ್ಞಾನ ಹೊಂದಿದ್ದ, ಹಲವು ನಟ-ನಟಿಯರ ಜೀವನಚರಿತ್ರೆಗಳನ್ನು ಬರೆದಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ (66) ಬೆಂಗಳೂರಿನಲ್ಲಿ ಗುರುವಾರ ನಿಧನರಾದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಕನ್ನಡ ಪತ್ರಿಕೋದ್ಯಮದ ವಿವಿಧ ಮಜಲುಗಳನ್ನು ಬಲ್ಲವರಾಗಿದ್ದ ಗುಡಿಹಳ್ಳಿ ನಾಗರಾಜ ರಂಗಭೂಮಿಯ ಬಗ್ಗೆ ನಿಯಮಿತವಾಗಿ ಬರೆಯುತ್ತಿದ್ದರು. ಪ್ರಜಾವಾಣಿ ಪತ್ರಿಕೆಯಲ್ಲಿ ಸುದೀರ್ಘ ಕಾಲ ಕೆಲಸ ಮಾಡಿದ್ದರು.

ಬೆಂಗಳೂರಿನ ಗೋವಿಂದರಾಜನಗರದಲ್ಲಿರುವ ಅವರ ನಿವಾಸದಲ್ಲಿ ಗುಡಿಹಳ್ಳಿ ನಾಗರಾಜ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶುಕ್ರವಾರ ಬೆಳಿಗ್ಗೆ 8.15ರ ತನಕ ವ್ಯವಸ್ಥೆ ಮಾಡಲಾಗಿದೆ. ಬಳಿಕ ಹರಪನಹಳ್ಳಿ ತಾಲೂಕಿನ ಗುಡಿಹಳ್ಳಿಯಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಪತ್ನಿ ಶ್ರೀಮತಿ ಗಿರಿಜಾ ಅವರು ತಿಳಿಸಿದ್ದಾರೆ. (ಕುಟುಂಬದ ಸಂಪರ್ಕಕ್ಕೆ ಮೊ 81475 28466)

ಹಿರಿಯ ಪತ್ರಕರ್ತ ಮತ್ತು ಲೇಖಕ ಗುಡಿಹಳ್ಳಿ ನಾಗರಾಜ್ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಕನ್ನಡ ಸಾಂಸ್ಕೃತಿಕ ಲೋಕದ ಜೊತೆ ನಿಕಟ ಒಡನಾಟ ಇರಿಸಿಕೊಂಡಿದ್ದ ಗುಡಿಹಳ್ಳಿ ನಾಗರಾಜ್, ಕನ್ನಡ ರಂಗಭೂಮಿ ಕುರಿತು ಬರೆದ ಲೇಖನಗಳು ಮತ್ತು ಕೃತಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆಗಳಾಗಿವೆ ಎಂದು ಅವರು ಸ್ಮರಿಸಿದ್ದಾರೆ.

ಅವರನ್ನು ಕನ್ನಡ ವೃತ್ತಿರಂಗಭೂಮಿಯ ಇತಿಹಾಸಕಾರ ಎಂದು ಕರೆದರೆ ತಪ್ಪಾಗಲಾರದು. ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದ ಅನೇಕ ರಂಗಕರ್ಮಿಗಳನ್ನು ತಮ್ಮ ಲೇಖನಗಳ ಮೂಲಕ ಪರಿಚಯಿಸಿದವರು ಗುಡಿಹಳ್ಳಿ ನಾಗರಾಜ್. ಅವರ ನಿಧನದಿಂದ ಕನ್ನಡ ಮಾಧ್ಯಮ ಪ್ರಪಂಚ ಹಾಗೂ ಸಾಂಸ್ಕೃತಿಕ ಲೋಕ ಒಬ್ಬ ಮಹತ್ವದ ಬರಹಗಾರನನ್ನು ಕಳೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಪತ್ರಕರ್ತರ ಸಂಘಟನೆಯಲ್ಲಿಯೂ ಗುಡಿಹಳ್ಳಿ ನಾಗರಾಜ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಟನೆಯಲ್ಲಿ ಅವರ‌ ಸೇವೆ ಮರೆಯಲಾಗದು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದ್ದಾರೆ.

ಗುಡಿಹಳ್ಳಿ ನಾಗರಾಜ ಪರಿಚಯ ಕರ್ನಾಟಕ ರಂಗಭೂಮಿಯ ಬಗ್ಗೆ ಪ್ರೀತಿ ಮತ್ತು ಅಭಿಮಾನಗಳನ್ನು ಹೊಂದಿದ್ದ ಗುಡಿಹಳ್ಳಿ ನಾಗರಾಜ, ಹದಿನೈದಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ರಂಗನೇಪಥ್ಯ ಎಂಬ ಮಾಸಪತ್ರಿಕೆ ಪ್ರಕಟಿಸುತ್ತಿದ್ದ ಅವರು, ನಾಲ್ಕು ರಂಗತಂಡಗಳ ನೇತೃತ್ವವನ್ನೂ ವಹಿಸಿಕೊಂಡಿದ್ದರು.

ರಂಗನಾಟಕ ಪ್ರಯೋಗ ಸಾರ್ಥಕತೆ, ಮಾಲತಿಶ್ರೀ ಮೈಸೂರು ಆತ್ಮಕತೆ (ತೆರೆ ಸರಿದಾಗ), ಮರಿಯಮ್ಮನಹಳ್ಳಿ ಡಾ.ನಾಗರತ್ನಮ್ಮ ಆತ್ಮಕತೆ (ರಂಗಸಿರಿ), ಗುಬ್ಬಿ ವೀರಣ್ಣ, ಡಾ.ಲಕ್ಷ್ಮಣದಾಸ್, ಗಾನಕೋಗಿಲೆ, ಅನುಪಮ ಅಭಿನೇತ್ರಿ ಸುಭದ್ರಮ್ಮ ಮನ್ಸೂರು, ಮೇಕಪ್‍ಮನ್ ಸುಬ್ಬಣ್ಣ, ರಂಗನೇವರಿಕೆ, ರಂಗಸಂದರ್ಶನ, ರಂಗದಿಗ್ಗಜರು, ಚಿಂದೋಡಿ ಲೀಲಾ, ಕಲಾಗ್ರಾಮ, ಜನಪರ ರಂಗಭೂಮಿ, ರಂಗಸೆಲೆ ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

ಕರ್ನಾಟಕ ನಾಟಕ ಅಕಾಡೆಮಿಯ ಜಿಲ್ಲಾ ರಂಗಮಾಹಿತಿ ಮಾಲಿಕೆ ಹಾಗೂ ರಂಗಸಂಪನ್ನರು ಮಾಲಿಕೆಯ 40 ಕೃತಿಗಳು, ವೃತ್ತಿರಂಗದ ಮಹತ್ತರ ನಾಟಕಗಳು, ಶತಮಾನದ ಶಕಪುರುಷ ಏಣಗಿ ಬಾಳಪ್ಪ, ಪಿ.ಬಿ.ಧುತ್ತರಗಿ ಆಯ್ದ ನಾಟಕಗಳು ಸೇರಿದಂತೆ ಹಲವು ಕೃತಿಗಳನ್ನು ಸಂಪಾದಿಸಿದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷರಾಗಿ, ಪ್ರೆಸ್‍ಕ್ಲಬ್ ಉಪಾಧ್ಯಕ್ಷ, ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕರಾಗಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ, ಮುರುಘರಾಜೇಂದ್ರ, ನಾಟಕ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ.

ಹರಪನಹಳ್ಳಿ ತಾಲ್ಲೂಕು ಗುಡಿಹಳ್ಳಿ ಅವರ ಹುಟ್ಟೂರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಎಂಎ ಇಂಗ್ಲಿಷ್ ಪದವಿ ಪಡೆದು, ಹರಪನಹಳ್ಳಿಯಲ್ಲಿ ಮೂರು ವರ್ಷ (1980-83) ಉಪನ್ಯಾಸಕರಾಗಿದ್ದರು. 1983ರಲ್ಲಿ ಪ್ರಜಾವಾಣಿ ಸೇರಿ ಸುಮಾರು 31 ವರ್ಷ ಕಾಲ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

(Senior Kannada Journalist Gudihalli Nagaraja famous for writing about theatre died in Bengaluru)

ಇದನ್ನೂ ಓದಿ: ಗುಡಿಹಳ್ಳಿ ನಾಗರಾಜ ಬರಹ | ರಂಗಸಂಗೀತದ ಮೇರು ಪರಮಶಿವನ್​ಗೆ ಸಿಗಬೇಕಾದಷ್ಟು ಮನ್ನಣೆ ಸಿಗಲಿಲ್ಲ

ಇದನ್ನೂ ಓದಿ: ಆನ್‌ಲೈನ್ ರಂಗಭೂಮಿ ತರಬೇತಿ; ರಂಗ ಚಟುವಟಿಕೆ ಆರಂಭಕ್ಕೆ ಮೈಸೂರಿನಲ್ಲಿ ಚಾಲನೆ ನೀಡಿದ ನಟ ಮಂಡ್ಯ ರಮೇಶ್

Published On - 6:42 pm, Thu, 26 August 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ