AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrashekhar Patil: ನಾಡಿನ ಹಿರಿಯ ಸಾಹಿತಿ ಚಂಪಾ ಎಂದೇ ಪರಿಚಿತರಾಗಿದ್ದ ಚಂದ್ರಶೇಖರ ಪಾಟೀಲ್ ವಿಧಿವಶ

ಚಂದ್ರಶೇಖರ ಪಾಟೀಲ್, ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆಗೆ ಹೋರಾಡಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, 2018ನೇ ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ಲಭಿಸಿದೆ.

Chandrashekhar Patil: ನಾಡಿನ ಹಿರಿಯ ಸಾಹಿತಿ ಚಂಪಾ ಎಂದೇ ಪರಿಚಿತರಾಗಿದ್ದ ಚಂದ್ರಶೇಖರ ಪಾಟೀಲ್ ವಿಧಿವಶ
ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ)
TV9 Web
| Edited By: |

Updated on:Jan 10, 2022 | 1:45 PM

Share

ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್(83) ವಿಧಿವಶರಾಗಿದ್ದಾರೆ. ಚಂಪಾ ಎಂದೇ ಪರಿಚಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 6.30ರ ಸುಮಾರಿಗೆ ಬೆಂಗಳೂರಿನ ಕೋಣನಕುಂಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಚಂದ್ರಶೇಖರ ಪಾಟೀಲ್, ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆಗೆ ಹೋರಾಡಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, 2018ನೇ ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ಲಭಿಸಿದೆ. ಇವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಟಿವಿ9ಗೆ ಚಂದ್ರಶೇಖರ ಪಾಟೀಲ್ ಪುತ್ರಿ ಮೀನಾ ಈ ಬಗ್ಗೆ ಮಾಹಿತಿ ನೀಡಿದ್ದು ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ಗಾಯತ್ರಿ ಲೇಔಟ್‌ನಲ್ಲಿರುವ ಮನೆಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತೆ. ಬೆಂಗಳೂರಿನ ಕೆಂಗೇರಿ ಬಳಿಯ ಕಲಾಗ್ರಾಮದಲ್ಲಿ ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಮಾಡಲಾಗಿದೆ.

ಸಾಹಿತಿ ಚಂಪಾ ನಿಧನಕ್ಕೆ ಡಾ.ಮಹೇಶ್ ಜೋಶಿ ಸಂತಾಪ ಸಾಹಿತಿ ಚಂಪಾ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಮನು ಬಳಿಗಾರ್ ಸಂತಾಪ ಸೂಚಿಸಿದ್ದಾರೆ. ಚಂಪಾ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಡಾ.ಮಹೇಶ್ ಜೋಶಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಹಿತಿ ಚಂದ್ರಶೇಖರ ಪಾಟೀಲ್ ನಿಧನಕ್ಕೆ ಸಿಎಂ ಸಂತಾಪ ಚಂಪಾ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ನಷ್ಟವಾಗಿದೆ. ಈ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬದವರು, ಅಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುವೆ. ಕನ್ನಡಕ್ಕಾಗಿ ನಡೆದ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದ್ರು. ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ ಪ್ರೊ.ಚಂಪಾ ಅವರ ನಿಧನದ ವಿಷಯದಿಂದ ತುಂಬಾ ದುಃಖಿತನಾಗಿದ್ದೇನೆ ಎಂದು ಸಾಹಿತಿ ಚಂಪಾ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಚಂಪಾ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಚಂಪಾ ನಿಧನದಿಂದ ದುಃಖಿತನಾಗಿದ್ದೇನೆಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು‌, ನನ್ನ‌ ದೀರ್ಘ ಕಾಲದ ಸ್ನೇಹಿತರಾಗಿದ್ದ ಪ್ರೊ.ಚಂದ್ರಶೇಖರ ಪಾಟೀಲ್ ನಿಧನದಿಂದ ದುಃಖಿತನಾಗಿದ್ದೇನೆ. ಇವರ ಕುಟುಂಬ ಹಾಗೂ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಚಂದ್ರಶೇಖರ ಪಾಟೀಲ್ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಚಂಪಾ ಅಗಲಿಕೆ ನಾಡಿಗೆ ದೊಡ್ಡ ನಷ್ಟ -ಹೆಚ್​ಡಿಕೆ ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಹೆಚ್​ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಚಂಪಾ ನಿಧನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

Koo App

ಚಂದ್ರಶೇಖರ್ ಪಾಟೀಲ್ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ -ಗೃಹ ಸಚಿವ ಚಂಪಾ ನಿಧನಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ. ಚಂದ್ರಶೇಖರ್ ಪಾಟೀಲ್ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೇ ಮುಂಚೂಣಿಯಾಗಿ ನಿಂತವರು ಅವರು. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದಿದ್ದಾರೆ.

ಇದನ್ನೂ ಓದಿ: ಚಳಿಗಾಲ ಬಂದರೂ ಮುಗಿದಿಲ್ಲ ಮಳೆ; ಜ.11ರಿಂದ ಈ ರಾಜ್ಯಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಿಸಿದ ಐಎಂಡಿ

Published On - 9:02 am, Mon, 10 January 22

Follow Us
TV9 Web
TV9 Web

TV9 Kannada

Read More
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ