ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್(83) ವಿಧಿವಶರಾಗಿದ್ದಾರೆ. ಚಂಪಾ ಎಂದೇ ಪರಿಚಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 6.30ರ ಸುಮಾರಿಗೆ ಬೆಂಗಳೂರಿನ ಕೋಣನಕುಂಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಚಂದ್ರಶೇಖರ ಪಾಟೀಲ್, ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆಗೆ ಹೋರಾಡಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, 2018ನೇ ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ಲಭಿಸಿದೆ. ಇವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಟಿವಿ9ಗೆ ಚಂದ್ರಶೇಖರ ಪಾಟೀಲ್ ಪುತ್ರಿ ಮೀನಾ ಈ ಬಗ್ಗೆ ಮಾಹಿತಿ ನೀಡಿದ್ದು ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ಗಾಯತ್ರಿ ಲೇಔಟ್‌ನಲ್ಲಿರುವ ಮನೆಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತೆ. ಬೆಂಗಳೂರಿನ ಕೆಂಗೇರಿ ಬಳಿಯ ಕಲಾಗ್ರಾಮದಲ್ಲಿ ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಮಾಡಲಾಗಿದೆ.
ಸಾಹಿತಿ ಚಂಪಾ ನಿಧನಕ್ಕೆ ಡಾ.ಮಹೇಶ್ ಜೋಶಿ ಸಂತಾಪ
ಸಾಹಿತಿ ಚಂಪಾ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಮನು ಬಳಿಗಾರ್ ಸಂತಾಪ ಸೂಚಿಸಿದ್ದಾರೆ. ಚಂಪಾ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಡಾ.ಮಹೇಶ್ ಜೋಶಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಹಿತಿ ಚಂದ್ರಶೇಖರ ಪಾಟೀಲ್ ನಿಧನಕ್ಕೆ ಸಿಎಂ ಸಂತಾಪ
ಚಂಪಾ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ನಷ್ಟವಾಗಿದೆ. ಈ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬದವರು, ಅಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುವೆ. ಕನ್ನಡಕ್ಕಾಗಿ ನಡೆದ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದ್ರು. ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ ಪ್ರೊ.ಚಂಪಾ ಅವರ ನಿಧನದ ವಿಷಯದಿಂದ ತುಂಬಾ ದುಃಖಿತನಾಗಿದ್ದೇನೆ ಎಂದು ಸಾಹಿತಿ ಚಂಪಾ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾದ ವಿಷಯದಿಂದ ತುಂಭಾ ದುಃಖಿತನಾಗಿದ್ದೇನೆ.
ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ.
1/3 pic.twitter.com/MahFYOn3Aq— Basavaraj S Bommai (@BSBommai) January 10, 2022
ಚಂಪಾ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
ಚಂಪಾ ನಿಧನದಿಂದ ದುಃಖಿತನಾಗಿದ್ದೇನೆಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತರಾಗಿದ್ದ ಪ್ರೊ.ಚಂದ್ರಶೇಖರ ಪಾಟೀಲ್ ನಿಧನದಿಂದ ದುಃಖಿತನಾಗಿದ್ದೇನೆ. ಇವರ ಕುಟುಂಬ ಹಾಗೂ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಚಂದ್ರಶೇಖರ ಪಾಟೀಲ್ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ದ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು ಮತ್ತು ನನ್ನ ದೀರ್ಘಕಾಲದ ಸ್ನೇಹಿತರಾಗಿದ್ದ ಪ್ರೊ.ಚಂದ್ರಶೇಖರ ಪಾಟೀಲ್ ನಿಧನದಿಂದ ದು:ಖಿತನಾಗಿದ್ದೇನೆ.
ಇವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
ಭಾವಪೂರ್ಣ ಶ್ರದ್ಧಾಂಜಲಿ.
? pic.twitter.com/Og7mxLyWkW— Siddaramaiah (@siddaramaiah) January 10, 2022
ಚಂಪಾ ಅಗಲಿಕೆ ನಾಡಿಗೆ ದೊಡ್ಡ ನಷ್ಟ -ಹೆಚ್ಡಿಕೆ
ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಹೆಚ್ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. 1/2 pic.twitter.com/VRDbCvGdJE
— H D Kumaraswamy (@hd_kumaraswamy) January 10, 2022
ಚಂಪಾ ನಿಧನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಸಂತಾಪ
ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
Koo Appಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.– BS Yediyurappa (@bsybjp) 10 Jan 2022
ಚಂದ್ರಶೇಖರ್ ಪಾಟೀಲ್ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ -ಗೃಹ ಸಚಿವ
ಚಂಪಾ ನಿಧನಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ. ಚಂದ್ರಶೇಖರ್ ಪಾಟೀಲ್ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೇ ಮುಂಚೂಣಿಯಾಗಿ ನಿಂತವರು ಅವರು. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದಿದ್ದಾರೆ.
ಇದನ್ನೂ ಓದಿ: ಚಳಿಗಾಲ ಬಂದರೂ ಮುಗಿದಿಲ್ಲ ಮಳೆ; ಜ.11ರಿಂದ ಈ ರಾಜ್ಯಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ
Published On - 9:02 am, Mon, 10 January 22