AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಅರೆಸುಟ್ಟ ಸ್ಥಿತಿಯಲ್ಲಿ ಮತ್ತು ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪ್ರತ್ಯೇಕ ಘಟನೆ: ಬೆಂಗಳೂರು ಗ್ರಾಮಾಂತರದ ಮಾದನಾಯಕನಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಇದು ಬೇರೆಡೆ ಕೊಲೆ ಮಾಡಿ ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರದಲ್ಲಿ ನಿಂತಿದ್ದ ಕಾರಿನಲ್ಲಿ ಅನುಮಾನಾಸ್ಪದವಾಗಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಪ್ರತ್ಯೇಕ ಘಟನೆ: ಅರೆಸುಟ್ಟ ಸ್ಥಿತಿಯಲ್ಲಿ ಮತ್ತು ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಮೃತದೇಹ ಪತ್ತೆ
ಮಂಜುನಾಥ ಕೆಬಿ
| Edited By: |

Updated on: Nov 23, 2025 | 5:57 PM

Share

ನೆಲಮಂಗಲ, ನವೆಂಬರ್ 23: ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ (deadbody) ಆಗಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ (Madanayakanahalli) ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಂಡಹಳ್ಳಿಯಲ್ಲಿ ನಡೆದಿದೆ. ಸುಮಾರು 30 ವರ್ಷದ ವ್ಯಕ್ತಿಯ ಮೃತದೇಹವಿರಬಹುದೆಂದು ಅಂದಾಜಿಸಲಾಗಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ರಾಜಗೋಪಾಲನಗರ ಬ್ಯಾಡರಹಳ್ಳಿ ಪೊಲೀಸ್ ಠಾಣಾ ಸಮೀಪದ ನೈಸ್ ರಸ್ತೆ ಪಕ್ಕದಲ್ಲೇ ಒಂದು ನಿರ್ಜನ ಪ್ರದೇಶವಿದೆ. ಈ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ. ಪೆಟ್ರೋಲ್ ಹಾಕಿ ಸುಟ್ಟಿರುವ ಹಿನ್ನೆಲೆ ಅರೆಬೆಂದ ಸ್ಥಿತಿಯಲ್ಲಿದೆ.

ಇದನ್ನೂ ಓದಿ: ಬೇರೊಬ್ಬನ ಜತೆ ಲವ್ವಿಡವ್ವಿಗೆ ಗಂಡನ ಹತ್ಯೆ: ಸುಪಾರಿ ಹಣ ಕೊಡದೆ ಕಳ್ಳಾಟ, 9 ವರ್ಷದ ಬಳಿಕ ರಹಸ್ಯ ಬಯಲು

ಬೇರೆಡೆ ಹತ್ಯೆಗೈದು ಶವ ತಂದು ನಿರ್ಜನ ಪ್ರದೇಶದಲ್ಲಿ ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿಯ ಮೃತದೇಹದ ಮೇಲೆ ಹಗ್ಗದಿಂದ ಕಟ್ಟಿರುವ ಗುರುತು ಪತ್ತೆ ಆಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. SOCO ಟೀಮ್ ಕೂಡ ತಪಾಸಣೆ ಮಾಡಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ವ್ಯಕ್ತಿಯ ಶವ

ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಚಾಮರಾಜನಗರದ ಈದ್ಗಾ ಮೈದಾನದ ಬಂಜಾರ ಶಾಲೆ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಚಟ್ಟ: ಆ ಒಂದು ವೀಡಿಯೋದಿಂದ 9 ವರ್ಷ ಬಳಿಕ ಬಯಲಾಯ್ತು ಪತ್ನಿಯ ಮಸಲತ್ತು

ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಚಾಲಕನ ಸೀಟ್​ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಳೆದ 2 ದಿನದಿಂದ ಕಾರು ನಿಂತಲ್ಲೇ ನಿಂತ್ತಿತ್ತು. ಅನುಮಾನ ಹಿನ್ನೆಲೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದದ್ದಾರೆ. ಪೊಲೀಸರು ಪರಿಶೀಲಿಸಿದಾಗ ಶವ ಪತ್ತೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.