Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ವತಿಯಿಂದ ಬೆಂಗಳೂರು ನಗರದಲ್ಲಿ 18 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ಪ್ರತ್ಯೇಕ ಲಸಿಕೆ ಶಿಬಿರ

ಇದೇ ವೇಳೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಹಿಳೆಯರ ಜತೆ ಸಂವಾದ ನಡೆಸಿ, ಲಸಿಕೆಯ ಮಹತ್ವವನ್ನು ಎಲ್ಲರಿಗೂ ತಿಳಿಸುವಂತೆ ಮನವಿ ಮಾಡಿದರು. ಇಡೀ ಬೆಂಗಳೂರು ನಗರದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಲಸಿಕೆ ಶಿಬಿರ ನಡೆಸಿದ್ದು ಇದೇ ಮೊದಲು ಸಂಸ್ಥೆ ಮಾಹಿತಿ ನೀಡಿದೆ.

ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ವತಿಯಿಂದ ಬೆಂಗಳೂರು ನಗರದಲ್ಲಿ 18 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ಪ್ರತ್ಯೇಕ ಲಸಿಕೆ ಶಿಬಿರ
ಡಿಸಿಎಂ ಅಶ್ವತ್ಥನಾರಾಯಣ
Follow us
TV9 Web
| Updated By: guruganesh bhat

Updated on:Jun 24, 2021 | 11:07 PM

ಬೆಂಗಳೂರು: ಮಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗಾಗಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಹಮ್ಮಿಕೊಂಡಿದ್ದ ವಿಶೇಷ ಲಸಿಕೆ ಅಭಿಯಾನಕ್ಕೆ ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದು (ಜೂನ್ 24) ಚಾಲನೆ ನೀಡಿದರು.

66ನೇ ವಾರ್ಡ್‌ನಲ್ಲಿರುವ ಸಂಗೊಳ್ಳಿ ರಾಯಣ್ಣ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಲಸಿಕೆ ಶಿಬಿರಲ್ಲಿ ಮೊತ್ತ ಮೊದಲ ಬಾರಿಗೆ ಮಹಿಳೆಯರಿಗೆ ಮಾತ್ರ ಲಸಿಕೆ ನೀಡಲಾಯಿತು. 1500ಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನ್‌ ನೀಡಲಾಯಿತು ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು. ಇಡೀ ಬೆಂಗಳೂರು ನಗರದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಲಸಿಕೆ ಶಿಬಿರ ನಡೆಸಿದ್ದು ಇದೇ ಮೊದಲು ಸಂಸ್ಥೆ ಮಾಹಿತಿ ನೀಡಿದೆ.

ಶೀಘ್ರದಲ್ಲೇ ಶಾಲಾ-ಕಾಲೇಜುಗಳು ಆರಂಭವಾಗುತ್ತಿವೆ. ಮಕ್ಕಳು ಸೇರಿ ಮನೆಯವರೆಲ್ಲರ ಜವಾಬ್ದಾರಿ ಮಹಿಳೆಯರಿಗೇ ಹೆಚ್ಚು ಇರುತ್ತದೆ. ಹೀಗಾಗಿ ಅವರಿಗೆ ಪ್ರತ್ಯೇಕವಾಗಿ ಲಸಿಕೆ ಕೊಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದು ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು. ಇದೇ ವೇಳೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಹಿಳೆಯರ ಜತೆ ಸಂವಾದ ನಡೆಸಿ, ಲಸಿಕೆಯ ಮಹತ್ವವನ್ನು ಎಲ್ಲರಿಗೂ ತಿಳಿಸುವಂತೆ ಮನವಿ ಮಾಡಿದರು.

Karnataka Covid Update: ಕರ್ನಾಟಕದಲ್ಲಿ ಇಂದು 3,979 ಜನರಿಗೆ ಕೊವಿಡ್ ದೃಢ, 138 ಜನರು ನಿಧನ ಕರ್ನಾಟಕದಲ್ಲಿ ಇಂದು 3,979 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 138 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 969 ಜನರಿಗೆ ಸೋಂಕು ಖಚಿತಪಟ್ಟಿದ್ದು, 14 ಜನರು ಮೃತಪಟ್ಟಿದ್ದಾರೆ. ಇಂದಿನ ಕೊವಿಡ್ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ ರಾಜ್ಯದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ 28,23,444ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 34,425 ಜನರು ಮೃತಪಟ್ಟಿದ್ದು, 26,78,473 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಒಂದೇ ದಿನ 9,768 ಜನರು ಕೊವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ಹಿಂತಿರುಗಿದ್ದಾರೆ.

ಬಾಗಲಕೋಟೆ 7, ಬಳ್ಳಾರಿ 67, ಬೆಳಗಾವಿ 98, ಬೆಂಗಳೂರು ಗ್ರಾಮಾಂತರ 81, ಬೆಂಗಳೂರು ನಗರ 969, ಬೀದರ್ 18, ಚಾಮರಾಜನಗರ 64, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 110, ಚಿತ್ರದುರ್ಗ 33, ದಕ್ಷಿಣ ಕನ್ನಡ 498, ದಾವಣಗೆರೆ 118, ಧಾರವಾಡ 62, ಗದಗ 18, ಹಾಸನ 336, ಹಾವೇರಿ 28, ಕಲಬುರಗಿ 31, ಕೊಡಗು 115, ಕೊಪ್ಪಳ 18, ಕೋಲಾರ 103, ಮಂಡ್ಯ 137, ಮೈಸೂರು 404 , ಉಡುಪಿ 123, ರಾಯಚೂರು 16, ರಾಮನಗರ 32, ಶಿವಮೊಗ್ಗ 206, ತುಮಕೂರು 128, ಉತ್ತರ ಕನ್ನಡ 104, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 7 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 138 ಜನರ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆ 14, ಮೈಸೂರು ಜಿಲ್ಲೆ 22, ದಕ್ಷಿಣ ಕನ್ನಡ, ಬಳ್ಳಾರಿ, ಧಾರವಾಡ ಜಿಲ್ಲೆ 10, ಹಾಸನ ಜಿಲ್ಲೆ 9, ಕೋಲಾರ, ಉಡುಪಿ ಜಿಲ್ಲೆ 7, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾವೇರಿ ಜಿಲ್ಲೆ 6, ಶಿವಮೊಗ್ಗ ಜಿಲ್ಲೆ 5, ದಾವಣಗೆರೆ ಜಿಲ್ಲೆ 3, ಚಿತ್ರದುರ್ಗ, ಕೊಡಗು, ಕೊಪ್ಪಳ, ತುಮಕೂರು, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ 2, ಬಾಗಲಕೋಟೆ, ಬೆಳಗಾವಿ, ಬೀದರ್, ಮಂಡ್ಯ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿಂದು ಸೋಂಕಿಗೆ ತಲಾ ಓರ್ವ ನಿಧನರಾಗಿದ್ದಾರೆ.

ಇದನ್ನೂ ಓದಿ: 1.89 ಕೋಟಿ ಡೋಸ್ ಬಳಕೆಯಾಗದ ಕೊವಿಡ್ ಲಸಿಕೆ ರಾಜ್ಯಗಳಲ್ಲಿವೆ: ಕೇಂದ್ರ ಆರೋಗ್ಯ ಇಲಾಖೆ

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

(Separate Vaccine Camp for Women Over 18 Years in Bangaluru City by Dr CN Ashwath Nanarayana Foundation)

Published On - 11:04 pm, Thu, 24 June 21

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ