Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಸೆಪ್ಟೆಂಬರ್ 27 ಭಾರತ್ ಬಂದ್‌, ಇದಕ್ಕೆ ಯಾರ್ಯಾರ ಬೆಂಬಲವಿದೆ?

ನಾಳೆ ಅಖಂಡ ಭಾರತ್ ಬಂದ್‌ಗೆ ರೈತ ಸಂಘಟನೆಗಳು ಕರೆ ಕೊಟ್ಟಿವೆ. ಆದ್ರೆ, ಈ ಬಂದ್ ಬಹುತೇಕ ಠುಸ್ ಆಗೋ ಎಲ್ಲ ಲಕ್ಷಣಗಳು ಎದ್ದು ಕಾಣ್ತಿವೆ. ಯಾಕೆಂದ್ರೆ, ಕೊರೊನಾ ಹೊಡೆತ ತಿಂದಿರೋ ಸಂಘಟನೆಗಳು, ಬಂದ್‌ ಮಾಡಲ್ಲ ಅಂತಿದ್ದಾರೆ. ನೈತಿಕ ಬೆಂಬಲವನ್ನಷ್ಟೇ ಸೂಚಿಸಿ ಎಂದಿನಂತೆ ಸೇವೆ ಒದಗಿಸಲು ಮುಂದಾಗಿದ್ದಾರೆ.

Bharat Bandh: ಸೆಪ್ಟೆಂಬರ್ 27 ಭಾರತ್ ಬಂದ್‌, ಇದಕ್ಕೆ ಯಾರ್ಯಾರ ಬೆಂಬಲವಿದೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Sep 26, 2021 | 8:24 AM

ಬೆಂಗಳೂರು: ಕೊರೊನಾ ಆರ್ಭಟ.. ಲಾಕ್‌ಡೌನ್‌ ಹೊಡೆತ ಎಲ್ಲ ಮುಗಿತು ಅನ್ನುವಷ್ಟರಲ್ಲಿ 3ನೇ ಅಲೆ ಭಯ ಜೊತೆಗೆ ದುಬಾರಿಯಾದ ಪೆಟ್ರೋಲ್‌, ಡೀಸೆಲ್, ಗ್ಯಾಸ್‌ ರೇಟ್‌. ಆಹಾರ ಸಾಮಾಗ್ರಿಗಳ ಬೆಲೆ ಏರಿಕೆ ಜನರು ದುಡಿದ ಹಣ ಹೊಟ್ಟೆಗೆ ಸಾಕಾಗ್ತಿಲ್ಲ. ಒಂದೆಡೆ ಜನರ ಆಕ್ರೋಶ ಆದ್ರೆ, ಮತ್ತೊಂದೆಡೆ ಅನ್ನದಾತರೂ ಸರ್ಕಾರದ ನೀತಿ ವಿರುದ್ಧ ಭಾರತ್ ಬಂದ್ಗೆ ಕರೆ ನೀಡಿದ್ದಾರೆ.

ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ನಾಳೆ ಭಾರತ್‌ ಬಂದ್‌ಗೆ ಕರೆ ಕೊಟ್ಟಿದೆ. ಆದ್ರೆ, ಭಾರತ್‌ ಬಂದ್ ಬಹುತೇಕ ಠುಸ್ ಆಗೋ ಸಾಧ್ಯತೆ ಇದೆ. ಯಾಕೆಂದ್ರೆ, ಭಾರತ್ ಬಂದ್‌ಗೆ ಸಂಘಟನೆಗಳಲ್ಲೇ ಒಮ್ಮತವಿಲ್ಲ. ಕೊವಿಡ್ ಹೊಡೆತ ತಿಂದಿರೋ ಸಂಘಟನೆಗಳು ಸಾರ್ವಜನಿಕರ ಟೀಕೆಗೆ ಗುರಿಯಾಗ್ತೀವಿ ಅಂತಾ ಬಂದ್‌ಗೆ ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಬಂದ್‌ಗೆ ಬೆಂಬಲ ಕೊಡದಿರಲು ಬಹುತೇಕ ಸಂಘಟನೆಗಳು ನಿರ್ಧರಿಸಿದ್ದು, ನೈತಿಕ ಬೆಂಬಲವಷ್ಟೇ ನೀಡಿವೆ.

‘ಬಂದ್‌’ ಇದ್ರೂ ನಾಳೆ ಎಂದಿನಂತೆ ಎಲ್ಲವೂ ‘ಓಪನ್’ ನಾಳೆಯ ಬಂದ್‌ಗೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗೋದು ಅನುಮಾನ. ಬಹುತೇಕ ಸಂಘಟನೆಗಳು ರೈತರ ಬಂದ್‌ಗೆ ನೈತಿಕ ಬೆಂಬಲ ಘೋಷಿಸಿ ಸುಮ್ಮನಾಗಿವೆ.

ಬಂದ್‌ಗೆ ಬೆಂಬಲವಿಲ್ಲ ಅಂದಹಾಗೆ ರೈತರು ಕರೆ ಕೊಟ್ಟಿರೋ ಬಂದ್‌ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದ್ದು, ಸಂಪೂರ್ಣ ಬೆಂಬಲ ನೀಡಿಲ್ಲ. ಹೀಗಾಗಿ ನಾಳೆ ಎಂದಿನಂತೆ ಹೋಟೆಲ್ ಓಪನ್ ಇರುತ್ತೆ. ಅಲ್ಲದೇ, KSRTC ಮತ್ತು BMTC ನೌಕರರ ಸಂಘವೂ ಬಂದ್‌ನಿಂದ ದೂರ ಉಳಿದಿದ್ದು, ಎಂದಿನಂತೆ ಬಸ್ ಓಡಿಸಲು ನೌಕರರು ನಿರ್ಧರಿಸಿದ್ದಾರೆ. ಅಲ್ಲದೇ ಲಾರಿ ಮಾಲೀಕರ ಸಂಘಟನೆ ಕೂಡಾ ನೈತಿಕ ಬೆಂಬಲವಷ್ಟೇ ನೀಡಿದ್ದು, vಾಳೆ ಎಂದಿನಂತೆ ಲಾರಿಗಳನ್ನ ರಸ್ತೆಗಿಳಿಸಲು ತೀರ್ಮಾನಿಸಿದೆ. ನಮ್ಮ ಮೆಟ್ರೋ ಕೂಡಾ ಎಂದಿನಂತೆ ಸಂಚರಿಸಲಿದೆ. ರಾಜ್ಯ ಟ್ಯಾಕ್ಸಿ ಮಾಲೀಕರ ಸಂಘಟನೆಯೂ ಬಂದ್‌ಗೆ ಬೆಂಬಲ ನೀಡಿಲ್ಲ. ಹೀಗಾಗಿ ಓಲಾ ಉಬರ್ ಸೇರಿ ಎಲ್ಲಾ ರೀತಿಯ ಟ್ಯಾಕ್ಸಿಗಳು ಸಂಚರಿಸಲಿವೆ.

ಆಟೋ ಡ್ರೈವರ್ಸ್ ಯೂನಿಯನ್ ಮತ್ತು ಆಟೋ ಚಾಲಕರ ಸಂಘವೂ ನೈತಿಕ ಬೆಂಬಲವಷ್ಟೇ ನೀಡಿರೋದ್ರಿಂದ, ನಾಳೆ ಆಟೋ ಸಂಚಾರ ಇರುತ್ತೆ. ಬೀದಿಬದಿ ವ್ಯಾಪಾರಿಗಳು ಕೂಡಾ ಕೊರೊನಾದಿಂದ ಕಂಗೆಟ್ಟು ಹೋಗಿದ್ದು, ಮತ್ತೊಂದು ಬಂದ್‌ ಮಾಡೋಕೆ ಆಸಕ್ತಿ ತೋರುತ್ತಿಲ್ಲ. ಇನ್ನೂ ಒಂದು ವರ್ಷದ ಬಳಿಕ ಮಕ್ಕಳು ಶಾಲೆ ಮುಖ ನೋಡ್ತಿವೆ. ಹೀಗಾಗಿ ಮಕ್ಕಳ ಶಿಕ್ಷಣದ ದೃಷ್ಟಿಯಿಂದ ಶಾಲಾ ಕಾಲೇಜು ಬಂದ್‌ ಮಾಡದೇ ಇರಲು ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟ ನಿರ್ಧರಿಸಿದೆ. ಇನ್ನೂ ಬೆಂಗಳೂರು ವಕೀಲರ ಸಂಘಟನೆಯೂ ನೈತಿಕ ಬೆಂಬಲ ನೀಡಿದ್ದು, ಕೋರ್ಟ್‌ ಕಲಾಪಗಳು ಎಂದಿನಂತೆ ನಡೆಯುತ್ತೆ. ಇನ್ನು ರೈತರ ಹೋರಾಟಕ್ಕೆ ಕರವೇ ನಾರಾಯಣಗೌಡ ಬಣವೂ ಕೂಡಾ ನೈತಿಕ ಬೆಂಬಲ ನೀಡಿದ್ದು, ಬಂದ್‌ನಲ್ಲಿ ಭಾಗವಹಿಸುತ್ತಿಲ್ಲ ಈ ಎಲ್ಲಾ ಸಂಘಟನೆಗಳ ಮುಖಂಡರು ಹೇಳ್ತಿರೋದು ಏನಂದ್ರೆ, ಇದೀಗ ತಾನೇ ಕೊರೊನಾದಿಂದ ಸುಧಾರಿಸಿಕೊಳ್ತಿದ್ದೀವಿ. ಈ ಸಂದರ್ಭದಲ್ಲಿ ಬಂದ್ ಬೇಡ ಅಂತಿದ್ದಾರೆ.

ಇನ್ನುಳಿದಂತೆ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳ ಯೂನಿಯನ್, ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಮತ್ತು ಎಪಿಎಂಸಿ ವರ್ತಕರ ಸಂಘದವ್ರು ಮಾತ್ರ ಬಂದ್‌ಗೆ ಬೆಂಬಲ ನೀಡಿದ್ದಾರೆ. ಹೆದ್ದಾರಿ ತಡೆಯೋದಕ್ಕೂ ಪ್ಲ್ಯಾನ್ ಮಾಡ್ಕೊಂಡಿದ್ದಾರೆ. ಆದ್ರೆ ರಸ್ತೆ ತಡೆಗೆ ಅವಕಾಶ ಕೊಡಲ್ಲ ಅಂತಾ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಕಡ್ಡಿ ಮುರಿದಂತೆ ಹೇಳಿದ್ದಾರೆ.

ಇಡೀ ದೇಶವನ್ನ ಹಿಂಡಿ ಹಿಪ್ಪೆ ಮಾಡಿದ್ದ ಕೊರೊನಾ ಸದ್ಯಕ್ಕೆ ಬಾಲ ಮುದುರಿಕೊಂಡಿದೆ. ಶಾಲಾ ಕಾಲೇಜುಗಳು ಓಪನ್ ಆಗ್ತಿವೆ. ರಾಜ್ಯದಲ್ಲೂ ಅಕ್ಟೋಬರ್ 1ರಿಂದ ಜನಜೀವನ ಕಂಪ್ಲೀಟ್ ಸಹಜ ಸ್ಥಿತಿಗೆ ಮರಳ್ತಿದೆ. ಇನ್ನೇನು ಎಲ್ಲಾ ಸರಿಹೋಯ್ತು ಅನ್ನುವಷ್ಟರಲ್ಲಿ ಅನ್ನದಾತರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಇಷ್ಟು ದಿನ ಧರಣಿ, ಪ್ರತಿಭಟನೆ, ಱಲಿ ಅಂತಾ ಆಕ್ರೋಶ ವ್ಯಕ್ತಪಡಿಸ್ತಿದ್ದ ರೈತ ಸಂಘಗಳು ಭಾರತ್ ಬಂದ್ಗೆ ಕರೆ ನೀಡಿವೆ.

ಇದನ್ನೂ ಓದಿ: Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

Published On - 7:48 am, Sun, 26 September 21

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್