ನಮ್ಮ ಮೆಟ್ರೋ: ಹಸಿರು ಮಾರ್ಗದ ಈ ನಿಲ್ದಾಣಗಳ ನಡುವೆ ರೈಲು ಸಂಚಾರ 2 ದಿನ ಬಂದ್​

ಬೆಂಗಳೂರಿನಲ್ಲಿ ಸುಗಮ ಮತ್ತು ವೇಗದ ಸಂಚಾರಕ್ಕೆ ನಮ್ಮ ಮೆಟ್ರೋ ಸಾಕಷ್ಟು ಅನುಕೂಲಕಾರಿಯಾಗಿದೆ. ಮೆಟ್ರೋ ರೈಲು ಒಂದು ದಿನ ಸ್ಥಗಿತಗೊಂಡರೂ, ಜನರು ಪರದಾಡುತ್ತಾರೆ. ಇಂತಹ ಮೆಟ್ರೋದ ಈ ನಿಲ್ದಾಣಗಳ ನಡುವೆ ರೈಲು ಸಂಚಾರ ಸೆಪ್ಟೆಂಬರ್​ ತಿಂಗಳಲ್ಲಿ ಎರಡು ದಿನ ಬಂದ್​ ಆಗಲಿದೆ. ಯಾವ ಮಾರ್ಗದ ಮತ್ತು ಯಾವ ದಿನದಂದು ಬಂದ್​ ಆಗಲಿದೆ ತಿಳಿಯಿರಿ.

ನಮ್ಮ ಮೆಟ್ರೋ: ಹಸಿರು ಮಾರ್ಗದ ಈ ನಿಲ್ದಾಣಗಳ ನಡುವೆ ರೈಲು ಸಂಚಾರ 2 ದಿನ ಬಂದ್​
ನಮ್ಮ ಮೆಟ್ರೋ
Follow us
Kiran Surya
| Updated By: ವಿವೇಕ ಬಿರಾದಾರ

Updated on:Aug 30, 2024 | 10:16 AM

ಬೆಂಗಳೂರು, ಆಗಸ್ಟ್​ 30: ನಮ್ಮ ಮೆಟ್ರೋ (Namma Metro) ಬೆಂಗಳೂರು ಜನರ ಜೀವನಾಡಿಯಾಗಿದೆ. ಸುಗಮ ಮತ್ತು ವೇಗದ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕಾರಿಯಾಗಿದೆ. ನಮ್ಮ ಮೆಟ್ರೋದಲ್ಲಿ ಪ್ರತಿನಿತ್ಯ 8 ಲಕ್ಷ ಜನರು ಸಂಚರಿಸುತ್ತಾರೆ ಎಂದು ವರದಿಯಾಗಿದೆ. ನಮ್ಮ ಮೆಟ್ರೋದ ಈ ಮಾರ್ಗದಲ್ಲಿ ಈ ನಿಲ್ದಾಣಗಳ ನಡುವೆ ಎರಡು ದಿನ ಸಂಚಾರ ಬಂದ್​ ಇರಲಿದೆ. ಯಾವ ಮಾರ್ಗ, ಯಾವ ದಿನಾಂಕ ಇಲ್ಲಿದೆ ಮಾಹಿತಿ.

ನಮ್ಮ ಮೆಟ್ರೋದ ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ. ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಕೈಗೊಳ್ಳಲಾಗಿದೆ. ಹೀಗಾಗಿ ಕೆಲವು ದಿನಗಳು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ಇದನ್ನೂ ಓದಿ: ಬೊಮ್ಮಸಂದ್ರ ಹೊಸೂರು ಮೆಟ್ರೋ ಯೋಜನೆಗೆ ಕರ್ನಾಟಕ ವಿರೋಧ ಸಾಧ್ಯತೆ: ಕಾರಣ ಇಲ್ಲಿದೆ

ಪೀಣ್ಯ ಇಂಡಸ್ಟ್ರಿಯಿಂದ ನಾಗಸಂದ್ರವರೆಗೆ ಮೆಟ್ರೋ ರೈಲು ಸಂಚಾರ ಇಂದು (ಆ.30) ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಪರದಾಡಿದರು. ಪ್ರಯಾಣಿಕರು ನಿಲ್ದಾಣಕ್ಕೆ ಬಂದು ವಾಪಸ್ಸು ಹೋಗುತ್ತಿದ್ದಾರೆ. ಮೆಟ್ರೋ ಸಂಚಾರ ಇಲ್ಲ, ಇದರಿಂದ ಸರಿಯಾದ ಸಮಯಕ್ಕೆ ಆಫೀಸ್​ಗೆ ಹೋಗಲು ಆಗುತ್ತಿಲ್ಲ. ಆಟೋಗಳು ಬುಕ್ ಆಗುತ್ತಿಲ್ಲ, ಇಲ್ಲಿರುವ ಆಟೋದವರು ಮೀಟರ್ ‌ಮೇಲೆ 50 ರೂ. ಕೇಳುತ್ತಿದ್ದಾರೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

ಸೆಪ್ಟೆಂಬರ್​ನಲ್ಲೂ 2 ದಿನ ಬಂದ್​

ಇದೇ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್​ 6 ಮತ್ತು 11ರಂದು ನಮ್ಮ ಮೆಟ್ರೋ ರೈಲು ಸಂಚಾರ ಪೂರ್ಣ ದಿನ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲುಗಳ ಸಂಚಾರ ಇರಲಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

2019ರಲ್ಲೇ ಆರಂಭವಾಗಬೇಕಿತ್ತು ನಾಗಸಂದ್ರ-ಮಾದವರ ನಡುವಿನ ಸಂಚಾರ

ನಾಗಸಂದ್ರದಿಂದ ಮಾದವರ ನಡುವೆ ವಿಸ್ತರಿತ ಮೆಟ್ರೋ ಕಾಮಗಾರಿ 2017ರಲ್ಲಿ ಆರಂಭವಾಗಿತ್ತು. ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ 2019ರ ಮಧ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೋವಿಡ್ ಸಮಸ್ಯೆ ಸೇರಿ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.

ಈ ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಐಇಸಿ) ಮೆಟ್ರೋ ನಿಲ್ದಾಣಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:10 am, Fri, 30 August 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ